spot_img
Wednesday, April 1, 2026
spot_img

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ 

ವಿದ್ಯಾರ್ಥಿಗಳಿಗೆ ವಿಭಿನ್ನ ಯೋಚನೆ, ಪ್ರಯತ್ನದ ಮೂಲಕ ಸಾಧನೆ ಮಾಡುವ ಮನಸ್ಸು ಇರಬೇಕು – ಯುವರಾಜ್ ಜೈನ್ 
ಕುಂದಾಪುರ : ದಿನಾಂಕ 14.12.24 ರಂದು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ  ಮೂಡುಬಿದಿರೆ ಎಕ್ಸಲೆಂಟ್ ಸಮೂಹ  ಶಿಕ್ಷಣ  ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ  ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಜೀವನ ನಿಮ್ಮ ಕೈಯಲ್ಲಿರುವುದರಿಂದ ಆತ್ಮ ವಿಶ್ವಾಸವನ್ನು ಕಳೆದುಕೊಳ್ಳದೇ  ಚಿಕ್ಕ ಚಿಕ್ಕ ಕನಸು ಕಾಣುವುದನ್ನು ಬಿಟ್ಟು ದೊಡ್ಡ ದೊಡ್ಡ ಕನಸು  ಕಾಣುವ ಮೂಲಕ ವಿಭಿನ್ನ ಯೋಚನೆ, ಪ್ರಯತ್ನದ ಮೂಲಕ ಸಾಧನೆ ಮಾಡುವ ಮನಸ್ಸು ನಿಮ್ಮದಾಗಲಿ ಎಂದರು.  ಅಧ್ಯಕ್ಷತೆಯನ್ನು ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ & ಕಲ್ಚರಲ್ ಟ್ರಸ್ಟ್ ನ  ಅಧ್ಯಕ್ಷ ರಾದ  ಕೆ. ರಾಮಕೃಷ್ಣ ಕಾಮತ್  ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಸಿ ಯಶಸ್ವಿ ಬದುಕನ್ನು ರೂಪಿಸಿಕೊಳ್ಳಿ ಎಂದು ಶುಭ ಹಾರೈಸಿದರು.  ಸಂಸ್ಥೆಯ ಕಾರ್ಯದರ್ಶಿ ಶ್ರೀ.ಕೆ. ರಾಧಾಕೃಷ್ಣ ಶೆಣೈಯವರು  ಶ್ರೀ ವೆಂಕಟರಮಣ ಸಂಸ್ಥೆಯ ಅಭಿವೃದ್ಧಿ ಪಥದ ಕುರಿತು ಮಾತನಾಡಿದರು.
ವೇದಿಕೆಯಲ್ಲಿ ಟ್ರಸ್ಟಿ  ರತ್ನಾಕರ ಶೆಣೈ,  ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್,  ಶ್ರೀ ವೆಂಕಟರಮಣ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಕೃಷ್ಣ ಅಡಿಗ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪ್ರಮೀಳಾ ಡಿಸೋಜಾ ಉಪಸ್ಥಿತರಿದ್ದರು.
ಪ್ರಾಂಶುಪಾಲರಾದ ಸಂದೀಪ್ ಗಾಣಿಗ ವಾರ್ಷಿಕ ವರದಿ ವಾಚಿಸಿದರು. ವಿದ್ಯಾರ್ಥಿಗಳಾದ  ವೈಷ್ಣವಿ ಆರ್. ಕೆ ಸ್ವಾಗತಿಸಿದರು. ಕ್ಷಮಾ ಶೆಟ್ಟಿ ವಂದಿಸಿ, ಶ್ರೀ ರಕ್ಷಾ ಶೆಣೈ ಅತಿಥಿಯನ್ನು ಪರಿಚಯಿಸಿದರು.ಕೆ. ಶ್ರೀನಿತಾ. ಎಸ್. ಕಾಮತ್ ಕಾರ್ಯಕ್ರಮ ನಿರೂಪಿಸಿದರು.
ಅಪರಾಹ್ನ 2 ಗಂಟೆಯಿಂದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!