spot_img
Wednesday, April 1, 2026
spot_img

ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ಮೌನವಾಗಿರಲು ಹಣದ ಆಮಿಷ ಆರೋಪ : ಅನ್ವರ್ ಮಾಣಿಪ್ಪಾಡಿ ಕಾಂಗ್ರೆಸ್‌ ವಿರುದ್ಧ ಹೊಸ ಬಾಂಬ್‌ !

ಜನಪ್ರತಿನಿಧಿ (ಮಂಗಳೂರು) : ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ಮೌನವಾಗಿರಲು ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ 150 ಕೋಟಿ ರೂ. ಆಮಿಷವೊಡ್ಡಿದ್ದರು, ಆ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಿಬಿಐ ತನಿಖೆ ಮಾಡಿಸಲಿ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗ್ರಹಕ್ಕೆ ಸ್ವತಃ ಅನ್ವರ್ ಮಾಣಿಪ್ಪಾಡಿ ಅವರು ತಿರುಗೇಟು ನೀಡಿದ್ದಾರೆ.

ವರದಿಗಾರರಿಗೆ ಪ್ರತಿಕ್ರಿಯಿಸಿದ ಅವರು, 2012-13ರಲ್ಲಿ ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ವರದಿ ರೆಡಿ ಮಾಡುತ್ತಿದ್ದಾಗ ವಿಜಯೇಂದ್ರ ಏನೂ ಆಗಿರಲಿಲ್ಲ. ಯಡಿಯೂರಪ್ಪ ಪುತ್ರ ಅಷ್ಟೇ ಆಗಿದ್ದರು. 2019ರಲ್ಲಿ ಯಡಿಯೂರಪ್ಪ ಸರ್ಕಾರ ಇದ್ದಾಗ ವಕ್ಫ್ ಆಸ್ತಿ ಬಗ್ಗೆ ವರದಿ ಜಾರಿಗೊಳಿಸಬೇಕೆಂದು ಆಗ್ರಹಿಸಿದ್ದಾರೆ.

ಈ ವಿಷಯದಲ್ಲಿ ಬಿಜೆಪಿ ನಾಯಕರ ಬಗ್ಗೆ ಕೋಪಗೊಂಡಿದ್ದೆ. ಆಗ ಪಕ್ಷದ ಕಚೇರಿಯಲ್ಲಿ ವಿಜಯೇಂದ್ರ ನನ್ನ ಜೊತೆಗೆ ಮಾತುಕತೆ ನಡೆಸಿದ್ದು ಹೌದು.‌ ಆದರೆ, ಯಾವುದೇ ಆಮಿಷವೊಡ್ಡಿದ್ದು ನನಗೆ ಗೊತ್ತಿಲ್ಲ ಎಂದು ಹೇಳಿದರು.

ವಿಜಯೇಂದ್ರ ಅವರಲ್ಲ ಬದಲಿಗೆ ವರದಿ ಬಹಿರಂಗ ಮಾಡದಂತೆ ಕಾಂಗ್ರೆಸಿಗರೇ ನನಗೆ ಸಾವಿರ ಕೋಟಿ ಆಫರ್ ಮಾಡಿದ್ದರು. ಏಕೆಂದರೆ, ವಕ್ಪ್ ಆಸ್ತಿ ಹಗರಣದಲ್ಲಿ ಕಾಂಗ್ರೆಸ್ ನಾಯಕರದ್ದೇ ಹೆಸರಿವೆ. ವರದಿ ಜಾರಿ ಮಾಡುತ್ತಿದ್ದರೆ ಕಾಂಗ್ರೆಸ್ಸಿಗೇ ಮುಳುವಾಗುತ್ತಿತ್ತು. ಹಲವು ನಾಯಕರು ಜೈಲಿಗೆ ಹೋಗುವ ಸ್ಥಿತಿ ಬರುತ್ತಿತ್ತು. ಇದರಿಂದ ಬಚಾವ್ ಆಗಲು ನನಗೆ ಬಹಳಷ್ಟು ಆಮಿಷ ಒಡ್ಡಿದ್ದರು.‌

150 ಅಲ್ಲ, ಸಾವಿರಾರು ಕೋಟಿ ಕೊಡುವುದಕ್ಕೂ ರೆಡಿ ಇದ್ದರು. ಅಮೆರಿಕದಲ್ಲಿ ಹೋಗಿ ಸೆಟ್ಲ್ ಆಗುವುದಿದ್ದರೂ ವ್ಯವಸ್ಥೆ ಮಾಡುತ್ತೇವೆ ಎಂದಿದ್ದರು. ಆದರೆ, ನಾನು ಎಲ್ಲವನ್ನೂ ನಿರಾಕರಿಸಿದ್ದೇನೆ. ನ್ಯಾಯಯುತ ತನಿಖೆಗೆ ಆಗ್ರಹಿಸಿದ್ದೇನೆ. ಇದರ ಬಗ್ಗೆ ಪ್ರಧಾನಿಯವರಿಗೂ ಪತ್ರ ಬರೆದಿದ್ದೇನೆ ಎಂದು ತಿಳಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!