spot_img
Wednesday, April 1, 2026
spot_img

ಲೋಕಸಭೆಯಲ್ಲಿ ನಾಳೆ(ಡಿ. 17) “ಒಂದು ದೇಶ, ಒಂದು ಚುನಾವಣೆ” ಮಸೂದೆ ಮಂಡನೆ !

ಜನಪ್ರತಿನಿಧಿ (ನವ ದೆಹಲಿ) : ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಸಂವಿಧಾನಾತ್ಮಕ ತಿದ್ದುಪಡಿ ಮಸೂದೆಯನ್ನು ನಾಳ(ಮಂಗಳವಾರ) ಸಂಸತ್ತಿನಲ್ಲಿ ಮಂಡಿಸುವ ಸಾಧ್ಯತೆ ಇದ್ದು, ಇದನ್ನು ಉಭಯ ಸದನಗಳ ಜಂಟಿ ಸಮಿತಿಗೆ ಶಿಫಾರಸು ಮಾಡಬಹುದು ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

“ಒಂದು ದೇಶ, ಒಂದು ಚುನಾವಣೆ” ಮಸೂದೆ ಎಂದು ಉಲ್ಲೇಖಿಸಲ್ಪಡುವ ಸಂವಿಧಾನ(ನೂರಾ ಇಪ್ಪತ್ತೊಂಬತ್ತನೇ ತಿದ್ದುಪಡಿ) ತಿದ್ದುಪಡಿ ಮಸೂದೆ, 2024 ಅನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ನಾಳೆ ಲೋಕಸಭೆಯಲ್ಲಿ ಮಂಡಿಸುವ ನಿರೀಕ್ಷೆಯಿದೆ ಎಂದು ಸರ್ಕಾರದ ಉನ್ನತ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ರಾಷ್ಟ್ರೀಯ ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.

ಮಸೂದೆ ಮಂಡಿಸಿದ ನಂತರ, ವ್ಯಾಪಕ ಸಮಾಲೋಚನೆಗಾಗಿ ಸಂಸತ್ತಿನ ಜಂಟಿ ಸಮಿತಿಗೆ ಶಿಫಾರಸು ಮಾಡುವಂತೆ ಮೇಘವಾಲ್ ಅವರು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಮನವಿ ಮಾಡುವ ಸಾಧ್ಯತೆ ಇದೆ.

ವಿವಿಧ ಪಕ್ಷಗಳ ಸಂಸದರ ಸಂಖ್ಯಾಬಲದ ಆಧಾರದ ಮೇಲೆ ಜಂಟಿ ಸದನ ಸಮಿತಿಯನ್ನು ರಚಿಸಲಾಗುತ್ತದೆ.

ಲೋಕಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿರುವ ಬಿಜೆಪಿಗೆ ಸಮಿತಿಯ ಅಧ್ಯಕ್ಷ ಸ್ಥಾನ ದೊರೆಯಲಿದ್ದು, ಹಲವು ಪಕ್ಷಗಳ ಸಂಸದರು ಸದಸ್ಯರಾಗಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಲೋಕಸಭೆ, ರಾಜ್ಯ ವಿಧಾನಸಭೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಏಕಕಾಲಕ್ಕೆ ಹಂತ ಹಂತವಾಗಿ ನಡೆಸಲು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಶಿಫಾರಸು ಮಾಡಿದ್ದ ವರದಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಕಳೆದ ವಾರ ಕೇಂದ್ರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಒಪ್ಪಿಗೆ ನೀಡಲಾಗಿದೆ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು ಇದರ ಉದ್ದೇಶವಾಗಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!