spot_img
Wednesday, April 1, 2026
spot_img

ಭ್ರೂಣ ಹತ್ಯೆ ತಡೆಗೆ ವಿಶೇಷ ಕ್ರಮ | ಪಿ.ಸಿ. ಮತ್ತು ಪಿ.ಎನ್.ಡಿ.ಟಿ. ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಕಾರ್ಯಪಡೆ : ದಿನೇಶ್ ಗುಂಡೂರಾವ್

ಜನಪ್ರತಿನಿಧಿ (ಬೆಳಗಾವಿ) : ರಾಜ್ಯದಲ್ಲಿ 2023-24 ರಿಂದ ಇಲ್ಲಿಯವರೆಗೆ ಭ್ರೂಣಹತ್ಯೆ ಸಂಬಂಧಿಸಿದಂತೆ 8 ಪ್ರಕರಣ ದಾಖಲಿಸಿ 46 ಜನರನ್ನು ಬಂಧಿಸಲಾಗಿದೆ. ರಾಜ್ಯದಲ್ಲಿ ಸ್ಕ್ಯಾನಿಂಗ್ ಸೆಂಟರ್ ಮತ್ತು ಆಸ್ಪತ್ರೆಗಳ ಮೇಲೆ ತಪಾಸಣೆಗಳನ್ನು ಜಾಸ್ತಿ ಮಾಡಿರುವುದರಿಂದ ಹೆಚ್ಚಿನ ಸಂಖ್ಯೆಯ ಭ್ರೂಣ ಹತ್ಯೆ ಪ್ರಕರಣಗಳು ಕಂಡುಹಿಡಿಯಲಾಗಿದೆ ಹಾಗೂ ಸರ್ಕಾರಕ್ಕೆ ವರದಿಯಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 2018 ರಿಂದ ರಾಜ್ಯದಲ್ಲಿ ‘ಬಾಲಿಕಾ’ ಆನ್ಲೈನ್ ಸಾಫ್ಟ್ ವೇರ್ ಮುಖಾಂತರ ಎಲ್ಲಾ ಸ್ಕ್ಯಾನಿಂಗ್ ಸೆಂಟರ್ ಗಳನ್ನು ಕಡ್ಡಾಯವಾಗಿ ನೋಂದಣಿ ಮತ್ತು ನವೀಕರಣ ನಡೆಸಲಾಗುತ್ತಿದೆ. ರಾಜ್ಯಮಟ್ಟದಲ್ಲಿ ಶೇ.100 ರಷ್ಟು ಗರ್ಭಿಣಿಯರ ನೋಂದಣಿ ಪ್ರಕ್ರಿಯೆಯು ಚಾಲ್ತಿಯಲ್ಲಿದ್ದು, ಗ್ರಾಮ ಮಟ್ಟದಲ್ಲಿ ಜನನ ಸಮಯದ ಲಿಂಗಾನುಪಾತದ ದತ್ತಾಂಶಗಳನ್ನು ಮಾಹಿತಿ ತಂತ್ರಜ್ಞಾನದ ಮುಖಾಂತರ ಮೇಲ್ವಿಚಾರಣೆ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ ಎಂದವರು ಹೇಳಿದ್ದಾರೆ.

ರಾಜ್ಯದಲ್ಲಿ ಇದುವರೆಗೂ ಪಿ.ಸಿ ಮತ್ತು ಪಿ.ಎನ್.ಡಿ.ಟಿ. ಕಾಯ್ದೆಯನ್ನು ಉಲ್ಲಂಘಿಸಿರುವ ಸ್ಕ್ಯಾನಿಂಗ್ ಸೆಂಟರ್/ ಮಾಲೀಕರು/ ವೈದ್ಯರ ವಿರುದ್ಧ ಒಟ್ಟು 136 ಪ್ರಕರಣಗಳನ್ನು ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದ್ದು, 74 ಪ್ರಕರಣಗಳು ದಂಡ ವಿಧಿಸಿ ಖುಲಾಸೆಗೊಂಡಿದ್ದು, 65 ಪ್ರಕರಣಗಳು ನ್ಯಾಯಾಲಯದಲ್ಲಿ ವಿವಿಧ ಹಂತದಲ್ಲಿ ಬಾಕಿಯಿರುತ್ತದೆ ಎಂದು ತಿಳಿಸಿದ್ದಾರೆ.

ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಮಾಡುವಂತಹ ಸ್ಕ್ಯಾನಿಂಗ್ ಸೆಂಟರ್/ಆಸ್ಪತ್ರೆ/ವೈದ್ಯರು/ದಲ್ಲಾಳಿಗಳು/ಗರ್ಭಿಣಿಯರ ಸಂಬಂಧಿಕರ ವಿರುದ್ಧ ಮಾಹಿತಿ ನೀಡಿ, ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಸಹಕರಿಸುವ ಮಾಹಿತಿದಾರರಿಗೆ ಕರ್ನಾಟಕ ಸರ್ಕಾರದಿಂದ ನೀಡುತ್ತಿದ್ದ ಬಹುಮಾನವನ್ನು ₹50 ಸಾವಿರದಿಂದ ₹1ಲಕ್ಷ ದವರೆಗೆ ಹೆಚ್ಚಿಸಲಾಗಿದೆ. ಪಿ.ಸಿ. ಮತ್ತು ಪಿ.ಎನ್.ಡಿ.ಟಿ. ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಆಯುಕ್ತರ ಅಧ್ಯಕ್ಷತೆಯಲ್ಲಿ ರಾಜ್ಯ ಕಾರ್ಯಪಡೆಯನ್ನು ರಚಿಸಲಾಗಿದ್ದು, ರಾಜ್ಯ ಮಟ್ಟದಿಂದ ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಮಂಡ್ಯ, ಕೋಲಾರ ಜಿಲ್ಲೆಗಳಲ್ಲಿ ಗುಪ್ತ ಕಾರ್ಯಾಚರಣೆ ನಡೆಸಲಾಗುತ್ತಿದೆ. ಹೆಣ್ಣು ಭ್ರೂಣ ಹತ್ಯೆ ಮಾಡದಂತೆ ರಾಜ್ಯಾದ್ಯಂತ ಜನ ಜಾಗೃತಿ ಹಾಗೂ ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!