spot_img
Monday, March 16, 2026
spot_img

ಉಪ್ಪಿನಕುದ್ರು : ಕರ್ತವ್ಯ ಲೋಪ ಎಸಗಿರುವ ಮುಖ್ಯ ಶಿಕ್ಷಕಿಯ ವಿರುದ್ಧ ಕ್ರಮ ವಹಿಸದಿರುವುದನ್ನು ಖಂಡಿಸಿ ಪ್ರತಿಭಟನೆ !

ಜನಪ್ರತಿನಿಧಿ (ಕುಂದಾಪುರ) : ಇಲ್ಲಿನ ಉಪ್ಪಿನಕುದ್ರು ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ವಿರುದ್ಧ ಕರ್ತವ್ಯ ಲೋಪ ಎಸಗಿರುವ ಕುರಿತು ದೂರು ನೀಡಿ ಮೂರು ತಿಂಗಳಾದರೂ ಕ್ರಮವಹಿಸದೇ ಇರುವುದನ್ನು ವಿರೋಧಿಸಿ, ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್, ಅಕ್ಷರ ದಾಸೋಹ ಕಾರ್ಯಕ್ರಮಗಳ ಅನುಷ್ಠಾನ ಸಂಬಂಧಿಸಿದಂತೆ ಶಾಲಾ ಮುಖ್ಯ ಶಿಕ್ಷಕಿ ಮಾಲತಿ ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಖಂಡಿಸಿ ವಿದ್ಯಾರ್ಥಿಗಳು, ಪೋಷಕರು ಶಿಕ್ಷಣ ಇಲಾಖೆ ಆಯುಕ್ತರಿಗೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಉಪನಿರ್ದೇಶಕರು, ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ದೂರು ನೀಡಿದ್ದರು.

ಈ ಸಂಬಂಧಿಸಿದಂತೆ ಯಾವುದೇ ರೀತಿಯ ಸೂಕ್ತ ಕ್ರಮ ತೆಗೆದುಕೊಂಡಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಹಾಗೂ ಪೋಷಕರ ಬೆಂಬಲದೊಂದಿಗೆ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಶಿಕ್ಷಕಿ ವರ್ಗಾವಣೆಯಾಗದೇ ಮತ್ತೆ ನಾವು ಶಾಲೆಗೆ ಬರುವುದಿಲ್ಲ ಎಂದು ಮಕ್ಕಳು ಪಟ್ಟು ಹಿಡಿದರು. ಈ ಸಂದರ್ಭ ಪೋಷಕರಿಂದ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾದವು ಇದರಿಂದ ಕೆಲ ಹೊತ್ತು ಇವರ ಮಧ್ಯೆ ವಾಗ್ವಾದ ಜಟಾಪಟಿ ನಡೆಯಿತು. ಸ್ಥಳಕ್ಕೆ ಆಗಮಿಸಿದ ಕುಂದಾಪುರ ನಗರ ಠಾಣೆ ಎಸ್‌ಐಗಳಾದ ಪುಷ್ಪಾ ಹಾಗೂ ನಂಜಾ ನಾಯ್ಕ್, ಪರಿಸ್ಥಿತಿ ತಿಳಿಗೊಳಿಸಿದರು.

ಇನ್ನು, ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್ ಹಾಗೂ ಅಕ್ಷರ ದಾಸೋಹ ಇಲಾಖೆಯ ಸಹಾಯಕ ನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಶಾಲೆಗೆ ಆಗಮಿಸಿ, ಪೋಷಕರು, ಮಕ್ಕಳ ಸಮಸ್ಯೆಗಳನ್ನು ಆಲಿಸಿ ದರು. ವರ್ಗಾವಣೆ ಬಗ್ಗೆ ಈಗಾಗಲೇ ಪರಿಶೀಲನೆ ನಡೆಸಿ, ಇಲಾಖೆಗೆ ವರದಿ ನೀಡಲಾಗಿದೆ. ಆ ಪಕ್ರಿಯೆ ಆಗಲು 3 ತಿಂಗಳು ಆಗಬಹುದು. ಅಲ್ಲಿಯವರೆಗೆ ಮುಖ್ಯ ಶಿಕ್ಷಕಿ ಇಲ್ಲೇ ಮುಂದುವರಿಯಲಿ ಎಂದು ತಿಳಿಸಿದರು.

ಇದಕ್ಕೆ ವಿದ್ಯಾರ್ಥಿಗಳು ಹಾಗೂ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸಿದರು. ಬಳಿಕ ಕೊನೆಯದಾಗಿ ಮುಖ್ಯ  ಶಿಕ್ಷಕರು ಮಂಗಳವಾರದಿಂದ ಶಾಲೆಗೆ ಬರುವುದಿಲ್ಲ. ಗಣಿತ ಪಾಠಕ್ಕೆ ಬದಲಿ ಶಿಕ್ಷಕರನ್ನ ನಿಯೋಜಿಸಲಾಗುವುದು ಎಂಬ ಭರವಸೆ ನೀಡಿದ್ದರಿಂದ ಪ್ರತಿಭಟನೆ ತಾತ್ಕಾಲಿಕವಾಗಿ ಅಂತ್ಯ ಕಂಡಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!