spot_img
Monday, March 16, 2026
spot_img

ನಿನ್ನೆ ಪ್ಯಾಲೆಸ್ತೀನ್ ಪರ, ಇಂದು ಬಾಂಗ್ಲಾ ಹಿಂದೂಗಳ ಪರ ಪ್ರಿಯಾಂಕಾ ಗಾಂಧಿ ಪ್ರತಿಭಟನೆ | ಪರ – ವಿರೋಧ ಚರ್ಚೆ

ಜನಪ್ರತಿನಿಧಿ (ನವ ದೆಹಲಿ) : ಬಾಂಗ್ಲಾದೇಶದಲ್ಲಿ ಹಿಂದೂ ಅಲ್ಪಸಂಖ್ಯಾತರ ಸುರಕ್ಷತೆ ಮತ್ತು ರಕ್ಷಣೆಗೆ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್‌ ಸಂಸದೆ  ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಸಂಸತ್ತಿನ ಸಂಕೀರ್ಣದಲ್ಲಿ ಇಂದು(ಮಂಗಳಾರ) ಪ್ರತಿಭಟನೆ ನಡೆಸಿದೆ.

ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಒಳಗೊಂಡಂತೆ ಹಲವು ಕಾಂಗ್ರೆಸ್ ಸಂಸದರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಬಾಂಗ್ಲಾದೇಶದಲ್ಲಿರುವ ಹಿಂದೂ ಅಲ್ಪಸಂಖ್ಯಾತರ ಸುರಕ್ಷತೆಗಾಗಿ ಕೇಂದ್ರ ಸರ್ಕಾರ ದೃಢವಾದ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಘೋಷಣೆಗಳನ್ನು ಕೂಗಿದ ಕಾಂಗ್ರೆಸ್ ಸಂಸದರು, ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದ ಮೇಲಿನ ದೌರ್ಜನ್ಯವನ್ನು ತಕ್ಷಣವೇ ನಿಲ್ಲಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರದ ಮೋದಿ ಸರ್ಕಾರವನ್ನು ಒತ್ತಾಯಿಸಿದರು. ಈ ಗಂಭೀರ ವಿಷಯದ ಬಗ್ಗೆ ಕೇಂದ್ರ ಸರ್ಕಾರ ಬಾಂಗ್ಲಾದೇಶದೊಂದಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾತುಕತೆ ನಡೆಸಬೇಕು, ಆ ಮೂಲಕ ಅಲ್ಲಿನ ಹಿಂದೂ ಸಮುದಾಯದ ಸುರಕ್ಷತೆಯನ್ನು ಕಾಪಾಡಬೇಕು ಎಂದು ಹೇಳಿದರು.

ಬಾಂಗ್ಲಾದೇಶದ ಹಿಂದೂಗಳ ವಿಷಯದಲ್ಲಿ ಕೇಂದ್ರ ಸರ್ಕಾರ ಮಾಡಿರುವ ತಪ್ಪುಗಳನ್ನು ಒಪ್ಪಿಕೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡರು ಘೋಷಣೆಗಳನ್ನು ಕೂಗಿದರು. ಬಾಂಗ್ಲಾದೇಶದಲ್ಲಿ ನೆಲೆಸಿರುವ ಹಿಂದೂ ಅಲ್ಪಸಂಖ್ಯಾತರಿಗೆ ಭದ್ರತೆ ಮತ್ತು ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮೊಹಮ್ಮದ್ ಯೂನಸ್ ನೇತೃತ್ವದಲ್ಲಿ ದೇಶದಲ್ಲಿ ಮಧ್ಯಂತರ ಸರ್ಕಾರ ರಚನೆಯಾದ ನಂತರ, ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರು, ವಿಶೇಷವಾಗಿ ಹಿಂದೂಗಳು ಇಸ್ಲಾಮಿಕ್ ಮೂಲಭೂತವಾದಿಗಳಿಮದ ಗಂಭೀರವಾಗಿ ಆಕ್ರಮಣಕ್ಕೆ ಒಳಗಾಗಿದ್ದಾರೆ ಎಂಬುದು ಗಮನಾರ್ಹ. ಹಿಂದೂಗಳು ಮತ್ತು ಎಲ್ಲಾ ಅಲ್ಪಸಂಖ್ಯಾತರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಢಾಕಾದ ಮಧ್ಯಂತರ ಸರ್ಕಾರದ ಅಧಿಕಾರಿಗಳಿಗೆ ನವದೆಹಲಿ ಪದೇ ಪದೇ ಮನವಿ ಮಾಡಿದೆ.

ಪ್ಯಾಲೆಸ್ತೀನ್’ ಪರ ಬ್ಯಾಗ್‌ನೊಂದಿಗೆ ಬಂದಿದ್ದ ಪ್ರಿಯಾಂಕಾ ವಿರುದ್ಧ ಬಿಜೆಪಿ ಟೀಕೆ
ಕಾಂಗ್ರೆಸ್ ನಾಯಕಿ ಮತ್ತು ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಪ್ಯಾಲೆಸ್ತೀನ್ ಎಂದು ಬರೆದಿರುವ ಬ್ಯಾಗ್ ಮತ್ತು ಕಲ್ಲಂಗಡಿ ಸೇರಿದಂತೆ ಚಿಹ್ನೆಗಳನ್ನು ಹೊತ್ತು ಸಂಸತ್ತಿನ ಸಂಕೀರ್ಣಕ್ಕೆ ಸೋಮವಾರ ಆಗಮಿಸಿದ್ದರು. ಪ್ರಿಯಾಂಕಾ ಅವರ ಈ ನಡೆಯನ್ನು ಬಿಜೆಪಿ ತೀವ್ರವಾಗಿ ಟೀಕಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!