spot_img
Monday, March 16, 2026
spot_img

ಜನವಿರೋಧಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಕಳೆದುಕೊಂಡಿದೆ : ವಿಜಯೇಂದ್ರ ಯಡಿಯೂರಪ್ಪ

ಜನಪ್ರತಿನಿಧಿ (ಬೆಂಗಳೂರು) : ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರೈತರಿಗೆ ನೀಡಬೇಕಿರುವ ಕ್ಷೀರಧಾರೆಗೆ ಹಣವಿಲ್ಲ. ಇತ್ತ ಬಡವರಿಗೂ ಉಪಕಾರಿಯಾಗಲಿಲ್ಲ, ಹೈನುಗಾರಿಕೆ ಹಾಗೂ ಪಶುಸಂಗೋಪನೆ ಅವಲಂಬಿಸಿರುವ ರೈತರ ಬದುಕನ್ನೂ ಹಸನಾಗಿಸಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಹೇಳಿದ್ದಾರೆ.

ಇದುವರೆಗೂ ರಾಜ್ಯದ ರೈತರ ಹಾಲಿನ ₹606.69 ಕೋಟಿಗೂ ಹೆಚ್ಚು ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡು ಇದಕ್ಕೆ ಹಣಕಾಸಿನ ಕೊರತೆಯೇ ನೇರ ಕಾರಣ ಎಂದು ಸ್ವತಃ ಪಶುಸಂಗೋಪನಾ ಸಚಿವರೇ ಸದನದಲ್ಲಿ ತಿಳಿಸಿರುವುದು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಬೊಕ್ಕಸ ಬರಿದಾಗಿಸಿಕೊಂಡು ದಿವಾಳಿ ಅಂಚಿಗೆ ತಲುಪಿರುವುದನ್ನು ಸಾಕ್ಷೀಕರಿಸುತ್ತಿದೆ ಎಂದಿದ್ದಾರೆ.

ಓಲೈಕೆ ರಾಜಕಾರಣಕ್ಕಾಗಿ ಶೋಷಿತರು ಹಾಗೂ ಹಿಂದುಳಿದವರಿಗೆ ಮೀಸಲಿಟ್ಟ ಹಣವನ್ನು ಅನ್ಯ ಕಾರ್ಯಗಳಿಗೆ ಬಳಸಿಕೊಂಡಿದ್ದ ಈ ಸರ್ಕಾರದಲ್ಲಿ, ರೈತರ ಪ್ರೋತ್ಸಾಹ ಧನ ಮತ್ಯಾವ ಓಲೈಕೆಗೆ ಬಳಕೆಯಾಗಿದೆಯೋ ತಿಳಿಯದು. ಅಭಿವೃದ್ಧಿ ಶೂನ್ಯ ಆಡಳಿತದ ಮೂಲಕ ರೈತರ ಶ್ರೇಯೋಭಿವೃದ್ಧಿಯೆಡೆಗೆ ಒಂದೇ ಒಂದು ಹೆಜ್ಜೆ ಇಡದ ಜನವಿರೋಧಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಕಳೆದುಕೊಂಡಿದೆ. ಈ ಕೂಡಲೇ ಬಾಕಿ ಉಳಿಸಿಕೊಂಡಿರುವ ಹಾಲಿನ ಪ್ರೋತ್ಸಾಹ ಧನವನ್ನು ಬಿಡುಗಡೆ ಮಾಡಬೇಕೆಂದು ಅವರು ಆಗ್ರಹಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!