spot_img
Tuesday, March 17, 2026
spot_img

ಲೋಕಸಭೆಯಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಂಡನೆ : ಪ್ರತಿಪಕ್ಷಗಳ ತೀವ್ರ ವಿರೋಧ !

ಜನಪ್ರತಿನಿಧಿ (ನವ ದೆಹಲಿ) : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಕೇಂದ್ರ ಸರ್ಕಾರ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಸಂವಿಧಾನಾತ್ಮಕ ತಿದ್ದುಪಡಿ ಮಸೂದೆಯನ್ನು ಇಂದು(ಮಂಗಳವಾರ) ಲೋಕಸಭೆಯಲ್ಲಿ ಮಂಡಿಸಿದೆ.

“ಒಂದು ದೇಶ, ಒಂದು ಚುನಾವಣೆ” ಮಸೂದೆ ಎಂದು ಉಲ್ಲೇಖಿಸಲ್ಪಡುವ ಸಂವಿಧಾನ(ನೂರಾ ಇಪ್ಪತ್ತೊಂಬತ್ತನೇ ತಿದ್ದುಪಡಿ) ತಿದ್ದುಪಡಿ ಮಸೂದೆ, 2024 ಅನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಇಂದು ಲೋಕಸಭೆಯಲ್ಲಿ ಮಂಡಿಸಿದರು.

‘ಒಂದು ರಾಷ್ಟ್ರ, ಒಂದು ಚುನಾವಣೆ’ ಜಾರಿಗೆ ತರುವ ಸಾಂವಿಧಾನಿಕ ತಿದ್ದುಪಡಿ ಸೇರಿದಂತೆ ಎರಡು ಮಸೂದೆಗಳನ್ನು ಅರ್ಜುನ್ ರಾಮ್ ಮೇಘವಾಲ್ ಅವರು ಮಂಡಿಸಿದರು.

ಇದು 2014 ರಲ್ಲಿ ಅಧಿಕಾರಕ್ಕೆ ಬಂದ ನಂತರ ಪ್ರಮುಖ ಚುನಾವಣಾ ಸುಧಾರಣೆಗೆ ಬಿಜೆಪಿ ದಾರಿ ಮಾಡಿಕೊಟ್ಟಿದೆ. ಆದಾಗ್ಯೂ, ಈ ಮಸೂದೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು ಅಸಂವಿಧಾನಿಕ, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತದೆ ಮತ್ತು ಸಂವಿಧಾನದ ಮೂಲ ರಚನೆಯನ್ನು ಉಲ್ಲಂಘಿಸುತ್ತದೆ ಎಂದು ವಾದಿಸುತ್ತಿದ್ದಾರೆ.

ಮಸೂದೆಗೆ ಕಾಂಗ್ರೆಸ್, ಟಿಎಂಸಿ, ಎಸ್ಪಿ ಸೇರಿದಂತೆ ಹಲವು ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಈ ಮಸೂದೆ ತರುವ ಅಗತ್ಯ ಏನಿದೆ ಎಂದು ಸಮಾಜವಾದಿ ಲಕ್ಷದ ಸಂಸದ ಧರ್ಮೇಂದ್ರ ಯಾದವ್ ಅವರು ಕಟುವಾಗಿ ಪ್ರಶ್ನಿಸಿದ್ದಾರೆ.

ಕಳೆದ ವಾರ ಕೇಂದ್ರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ʼಒಂದು ದೇಶ, ಒಂದು ಚುನಾವಣೆʼ ಮಸೂದೆಗೆ ಒಪ್ಪಿಗೆ ನೀಡಲಾಗಿದೆ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು ಇದರ ಉದ್ದೇಶವಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!