spot_img
Wednesday, March 18, 2026
spot_img

ದರ್ಶನ್‌, ಪವಿತ್ರಾ ಗೌಡ ಸೇರಿ ಆರೋಪಿಗಳಿಗೆ ಜಾಮೀನು : ʼಸುಪ್ರೀಂʼಗೆ ಮೇಲ್ಮನವಿ ಅರ್ಜಿ ಸಲ್ಲಿಕೆ !? : ಬೆಂಗಳೂರು ಪೊಲೀಸ್ ಕಮಿಷನರ್

ಜನಪ್ರತಿನಿಧಿ (ಬೆಂಗಳೂರು) : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ ಹಾಗೂ ಅವರ ಗೆಳತಿ ಪವಿತ್ರಾ ಗೌಡ ಮತ್ತು ಇತರ ಆರೋಪಿಗಳಿಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ ಅವರು ಇಂದು(ಮಂಗಳವಾರ) ತಿಳಿಸಿದ್ದಾರೆ.

ವರದಿಗಾರರೊಂದಿಗೆ ಮಾತನಾಡಿದ ಕಮಿಷನರ್‌, ಕೊಲೆ ಪ್ರಕರಣದ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

ಹೈಕೋರ್ಟ್ ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರ ಏಕ ಸದಸ್ಯ ನ್ಯಾಯಪೀಠ ಆರೋಪಿ ನಂಬರ್ 1 ದರ್ಶನ್ ಅವರ ಸ್ನೇಹಿತೆ ಪವಿತ್ರಾ ಗೌಡ, 2ನೇ ಆರೋಪಿಯಾಗಿರುವ ದರ್ಶನ್‌, ಇತರ ಆರೋಪಿಗಳಾದ ಆರ್ ನಾಗರಾಜು, ಅನು ಕುಮಾರ್ ಅಲಿಯಾಸ್ ಅನು, ಲಕ್ಷ್ಮಣ್ ಎಂ, ಜಗದೀಶ್ ಅಲಿಯಾಸ್ ಜಗ್ಗ ಮತ್ತು ಪ್ರದೂಷ್ ಎಸ್ ರಾವ್ ಅವರಿಗೆ ಕಳೆದ ಶುಕ್ರವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಜೂನ್ 11ರಂದು ದರ್ಶನ್ ಅವರನ್ನು ಬಂಧಿಸಲಾಗಿತ್ತು. ಇದೇ ಅವಧಿಯಲ್ಲಿ ಪವಿತ್ರಾ ಗೌಡ ಸೇರಿ 15 ಸಹ ಆರೋಪಿಗಳನ್ನು ಬಂಧಿಸಲಾಗಿತ್ತು.

47 ವರ್ಷದ ನಟ ದರ್ಶನ್ ಈಗಾಗಲೇ ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನಿನ ಮೇಲೆ ಹೊರಗಿದ್ದರು. ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಲು ಹೈಕೋರ್ಟ್ ಅವರಿಗೆ ಆರು ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿತ್ತು. ನಾಲ್ಕು ತಿಂಗಳಿಗೂ ಹೆಚ್ಚು ಕಾಲ ಜೈಲಿನಲ್ಲಿದ್ದ ನಂತರ ಅವರು ಅಕ್ಟೋಬರ್ 30 ರಂದು ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿದ್ದರು.

ಮೊದಲ ಆರೋಪಿ ಪವಿತ್ರಾ ಗೌಡ ಅವರು ಇಂದು ಜಾಮೀನಿನ ಮೇಲೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!