spot_img
Monday, March 16, 2026
spot_img

ಅನ್ವರ್‌ ಮಾಣಿಪ್ಪಾಡಿ ವರದಿ : ಅಧಿವೇಶನದಲ್ಲಿ ಸಿಎಂ ಮಂಡಿಸಿ ಚರ್ಚಿಸಲಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ : ಈಶ್ವರಪ್ಪ ಒತ್ತಾಯ

ಜನಪ್ರತಿನಿಧಿ (ಶಿವಮೊಗ್ಗ) : ರಾಜ್ಯದಲ್ಲಿ ವಕ್ಫ್‌ ಆಸ್ತಿ ಕಬಳಿಕೆ ಬಗ್ಗೆ ಅನ್ವರ್‌ ಮಾಣಿಪ್ಪಾಡಿ ನೀಡಿರುವ ವರದಿಯನ್ನು ಸಿಎಂ ಸಿದ್ದರಾಮಯ್ಯ ಅಧಿವೇಶನದಲ್ಲಿ ಮಂಡನೆ ಮಾಡಿ ಚರ್ಚೆಗೆ ಅವಕಾಶ ಒದಗಿಸಿಕೊಡಬೇಕು. ವಕ್ಫ್‌ ಆಸ್ತಿ ಲೂಟಿ ಮಾಡಿದವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌ ಈಶ್ವರಪ್ಪ ಒತ್ತಾಯಿಸಿದ್ದಾರೆ.

ವಕ್ಫ್‌ ಆಸ್ತಿಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ, ಮಾಜಿ ಸಚಿವ ರೆಹಮಾನ್‌ ಖಾನ್‌ ಒಳಗೊಂಡಂತೆ ಕಾಂಗ್ರೆಸ್‌ ನಾಯಕರು ಲೂಟಿ ಮಾಡಿದ್ದಾರೆ. ಅದರಲ್ಲಿ ಬಿಜೆಪಿಯವರೂ ಸಹ ಇದ್ದಾರೆ. ರಾಜಕಾರಣಿಗಳು ವಕ್ಫ್‌ ಆಸ್ತಿಯನ್ನು ಸ್ವಂತಕ್ಕೆ ಬಳಸಿಕೊಂಡಿದ್ದಾರೆ ಎಂದು ಅವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದ್ದಾರೆ.

ವಕ್ಫ್‌ ಆಸ್ತಿ ಒತ್ತುವರಿ ಮಾಡಿಕೊಂಡವರ ವಿರುದ್ಧ ಇಲ್ಲಿಯವರೆಗೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಅಧಿವೇಶನದಲ್ಲಿ ವರದಿ ಮಂಡಿಸಿ ಚರ್ಚೆಗೂ ಕೂಡ ಅವಕಾಶ ನೀಡುತ್ತಿಲ್ಲ. ಈ ವಿಚಾರದಲ್ಲಿ ಕಾಂಗ್ರೆಸ್‌ ಸರ್ಕಾರ ಘನಘೋರ ಅಪರಾಧ ಮಾಡುತ್ತಿದೆ ಎಂದು ಹೇಳಿದ್ದಾರೆ.

ವಕ್ಫ್‌ ಆಸ್ತಿ ಕಬಳಿಕೆ ವರದಿಯನ್ನು ಬಹಿರಂಗಪಡಿಸಿದಂತೆ ಅನ್ವರ್‌ ಮಾಣಿಪ್ಪಾಡಿ ಅವರಿಗೆ ವಿಜಯೇಂದ್ರ ಯಡಿಯೂರಪ್ಪ ಅವರು ೧೫೦ ಕೋಟಿ ಕೋಟಿ ಹಣದ ಆಮಿಷ  ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿ ತನಿಖೆಗೆ ಸಿಬಿಐಗೆ ವಹಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಅವರಿಗೆ ಸಿಬಿಐ ಮೇಲೆ ಮೋಹ ಬಂದಿರುವುದು ಸಂತೋಷದ ಸಂಗತಿ. ಸಿಬಿಐಗೆ ವಹಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇದೆ. ಮೊದಲು ಸರ್ಕಾರ ತನ್ನ ಕೆಲಸ ಮಾಡಲಿ ಎಂದು ಅವರು ಹೇಳಿದ್ದಾರೆ.

ಅನ್ವರ್‌ ಮಾಣಿಪ್ಪಾಡಿ ಘಳಿಗೊಂದು ಹೇಳಿಕೆ ನೀಡುತ್ತಾರೆ. ವಿಜಯೇಂದ್ರ ಯಡಿಯೂರಪ್ಪ ಅವರು ಬಿಜೆಪಿ ಕಚೇರಿಯಲ್ಲಿ ನನ್ನನ್ನು ಭೇಟಿ ಮಾಡಿದ್ದರು. ಕಾಂಗ್ರೆಸ್‌ನವರು ದುಡ್ಡುಕೊಟ್ಟರೆ ಪಡೆದುಕೊಳ್ಳಿ ಎಂದು ತಮಾಷೆಗೆ ಆಗ ಹೇಳಿದ್ದರು ಎಂದು ಮಾಧ್ಯಮಗಳಿಗೆ ಹೇಳಿಕೆ ಕೊಟ್ಟಿದ್ದಾರೆ. ಈ ಪ್ರಕರಣದ ಸತ್ಯಾಂಶ ಹೊರಗೆ ಬರಲು ಸರ್ಕಾರ ಸಿಬಿಐಗೆ ವಹಿಸುವುದು ಸೂಕ್ತ ಎಂದವರು ಹೇಳಿದ್ದಾರೆ.

ಮಠ, ದೇವಸ್ಥಾನ ಹಾಗೂ ರೈತರ ಭೂಮಿಯಲ್ಲಿ ವಕ್ಫ್‌ ಎಂದು ನಮೂದಾಗಿರುವುದನ್ನು ತೆಗೆಯಲು ರಾಜ್ಯ ಸರ್ಕಾರ ಮುಂದಾಗುತ್ತಿಲ್ಲ. ಕೇವಲ ನೋಟಿಸ್‌ ನೀಡಿ ಕೈ ತೊಳೆದುಕೊಂಡಿದೆ. ಕೂಡಲೇ ಪಹಣಿಯಲ್ಲಿ ವಕ್ಫ್‌ ಎಂದು ನಮೂದಾಗಿರುವುದನ್ನು ತೆಗೆಯಬೇಕು ಎಂದು ಅವರು ಒತ್ತಾಯಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಬದುಕಿದೆಯೋ ಅಥವಾ ಸತ್ತಿದೆಯೋ ತಿಳಿಯುತ್ತಿಲ್ಲ. ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚಲು ಇವರಿಂದ ಆಗುತ್ತಿಲ್ಲ. ಶಿವಮೊಗ್ಗ ಸೇರಿದಂತೆ ಇಡೀ ರಾಜ್ಯದಲ್ಲಿ ಅಭಿವೃದ್ಧಿ ಮರೀಚಿಕೆಯಾಗಿದೆ. ಇ-ಸ್ವತ್ತು ಮಾಡಲು ಜನರು ಪರದಾಡುತ್ತಿದ್ದಾರೆ. ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಹಣ ಕೊಡದೆ ಯಾವುದೇ ಕೆಲಸ ಆಗುವುದಿಲ್ಲ ಎಂದು ಅವರು ಆರೋಪಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!