spot_img
Monday, March 16, 2026
spot_img

ಬೆಂಗಳೂರಿನಲ್ಲಿ 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ವರದಿ ನೀಡಲು ಐಡೆಕ್‌ ಸಂಸ್ಥೆಗೆ ಜವಾಬ್ದಾರಿ : ಪಾಟೀಲ್‌

ಜನಪ್ರತಿನಿಧಿ (ಬೆಂಗಳೂರು) : ಬೆಂಗಳೂರಿಗೆ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡುವ ಪ್ರಸ್ತಾವನೆಯ ಕುರಿತು ಅಧ್ಯಯನ ನಡೆಸಿ ವರದಿ ನೀಡುವ ಕಾರ್ಯವನ್ನು ಐಡೆಕ್ ಸಂಸ್ಥೆಗೆ ವಹಿಸಲಾಗಿರುತ್ತದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ್ ತಿಳಿಸಿದ್ದಾರೆ.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಟಿ. ಎನ್. ಜವರಾಯಿ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು, ಗುಡ್ಡಗಾಡು ಪ್ರದೇಶ, ಸಂಪರ್ಕ-ರಸ್ತೆ, ರೈಲು ಮತ್ತು ಮೆಟ್ರೋ ಸಂಪರ್ಕ, ಬಳಕೆದಾರರಿಗೆ ಉದ್ದೇಶಿತ ವಿಮಾನ ನಿಲ್ದಾಣವನ್ನು ತಲುಪುವ ದೂರ ಮತ್ತು ಸಮಯ, ವಿಸ್ತಾರವಾದ ಭೂಪ್ರದೇಶ, ಜಮೀನಿನ ಪ್ರಕಾರಗಳು, ಕಡಿಮೆ ಜನಸಾಂದ್ರತೆಯ ಪ್ರದೇಶ ಮತ್ತು ಜಲಸಂಪನ್ಮೂಲದ ಲಭ್ಯತೆ ಅಂಶಗಳನ್ನು ಪರಿಗಣನೆಗೆ ತೆಗೆದುಕೊಂಡು ಸಂಭಾವ್ಯ ಸ್ಥಳಗಳ ಅಧ್ಯಯನವನ್ನು ನಡೆಸಲಾಗುತ್ತಿದೆ ಎಂದರು.

ಅದರಂತೆ, ಯೋಜನೆಗೆ ಸಂಬಂಧಿಸಿದಂತೆ ಯೋಜನಾ ವರದಿ / ಪ್ರಸ್ತಾವನೆಯನ್ನು ಸಿದ್ಧಪಡಿಸುವ ಕಾರ್ಯ ಪರಿಶೀಲನೆಯಲ್ಲಿರುತ್ತದೆ ಎಂದಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!