spot_img
Wednesday, April 1, 2026
spot_img

ಡಿ.26ಕ್ಕೆ ಸಿರಿಬಾಗಿಲು ಸಾಂಸ್ಕೃತಿಕ ಭವನದ ಪ್ರಥಮ ವಾರ್ಷಿಕೋತ್ಸವ

ಜನಪ್ರತಿನಿಧಿ ವಾರ್ತೆ: ಗಡಿನಾಡು ಕಾಸರಗೋಡಿನ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನವು ಪ್ರಥಮ ವಾರ್ಷಿಕೋತ್ಸವ ಡಿ.26 ರಂದು ಗುರುವಾರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವೈಭವದಿಂದ ಸಂಪನ್ನಗೊಳ್ಳಲಿದೆ.

26 ರಂದು ಬೆಳಗ್ಗೆ 7ರಿಂದ ಭಜನೆ ಕಾರ್ಯಕ್ರಮ 10 ಗಂಟೆಯಿಂದ ಪ್ರತಿಷ್ಠಾನದ ಯಕ್ಷಗಾನ ‘ಯಕ್ಷಗಾನ ಮುಂದಿನ ಪೀಳಿಗೆಗೆ ಹಸ್ತಾಂತರ’ ಯೋಜನೆಯಂತೆ ಮಕ್ಕಳ ತಂಡದ ಯಕ್ಷಗಾನ ತಾಳಮದ್ದಳೆ ಜರಗಲಿದೆ. ಮಧ್ಯಾಹ್ನ 2 ಗಂಟೆಯಿಂದ ಪ್ರತಿಷ್ಠಾನದ ಯಕ್ಷಗಾನ ತರಬೇತಿ ಕೇಂದ್ರದ ವಿದ್ಯಾರ್ಥಿಗಳ ರಂಗ ಪ್ರವೇಶ-ಯಕ್ಷಗಾನ ಪ್ರದರ್ಶನ ನಡೆಯಲಿದೆ. ಪ್ರತಿಷ್ಠಾನದ ಯಕ್ಷಗಾನ ಗುರುಗಳಾದ ಪ್ರಸಿದ್ಧ ಯಕ್ಷಗಾನ ಕಲಾವಿದ ಲಕ್ಷ್ಮಣ ಕುಮಾರ್ ಮರಕಡ ಇವರು ನಿರ್ದೇಶಿಸಲಿದ್ದಾರೆ. ಸಂಜೆ ನಾಲ್ಕು ಗಂಟೆಗೆ ನಡೆಯುವ ವಾರ್ಷಿಕೋತ್ಸವ ಸಭಾ ಕಾರ್ಯಕ್ರಮದಲ್ಲಿ ಎಡನೀರು ಮಠ ಶ್ರೀ ಶಂಕರಾಚಾರ್ಯ ಸಂಸ್ಥಾನಂನ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಆಶೀರ್ವಚನ ನೀಡಲಿದ್ದಾರೆ. ಸಭಾಧ್ಯಕ್ಷತೆಯನ್ನು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ಚಿಕ್ಕ ಕಬ್ಬಾರ ಹಾವೇರಿ ಜಿಲ್ಲೆ ಇದರ ಗೌರವಾಧ್ಯಕ್ಷರಾದ ಶೇಖರ ಗೌಡ ಪಾಟೀಲ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಾಸರಗೋಡು ವಿಧಾನಸಭಾ ಕ್ಷೇತ್ರದ ಸದಸ್ಯರಾದ ಎನ್ .ಎ .ನಲ್ಲಿಕುನ್ನು, ಬಹುಭಾಷಾ ವಿದ್ವಾಂಸರಾದ ಮಂಡ್ಯದ ಕೊಕ್ಕಡ ವೆಂಕಟ್ರಮಣ ಭಟ್, ಡಾ. ಪ್ರಭು ಸ್ವಾಮಿ ಹಾಳೇವಾಡಿ ಮಠ, ಡಾ. ಎಸ್ ಹನುಮಂತಪ್ಪ ಹಾವೇರಿ, ಶ್ರೀಧರ ಶೆಟ್ಟಿ ಮುಟ್ಟಂ, ಗೋಪಾಲ ಶೆಟ್ಟಿ, ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಗೋಪಿಕಾ ಸತೀಶ ಮಯ್ಯ, ನರಸಿಂಹಮೂರ್ತಿ, ಡಾ. ಗಂಗಯ್ಯ ಕುಲಕರ್ಣಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮುಖೇಶ್, ಮುಂತಾದವರು ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಮಧುರ ಉಪಾಧ್ಯ ಬೆಂಗಳೂರು, ಪಣಂಬೂರು ಶಂಕರನಾರಾಯಣ ಕಾರಂತ, ಲಕ್ಷ್ಮಣ ಕುಮಾರ್ ಮರಕಡ ಇವರನ್ನು ಪ್ರತಿಷ್ಠಾನ ವತಿಯಿಂದ ಗೌರವಿಸಲಾಗುವುದು. ಸಭಾ ಕಾರ್ಯಕ್ರಮದ ನಂತರ ಪ್ರತಿಷ್ಠಾನದ ಯಕ್ಷಗಾನ ತಂಡದಿಂದ ಯಕ್ಷಗಾನ ಪ್ರದರ್ಶನ ನಡೆಯಲಿದೆ.

ಕಳೆದ ವರ್ಷ ಡಿಸೆಂಬರ್ 26ರಂದು ರಾಜರ್ಷಿ ಡಾ.ವೀರೇಂದ್ರ ಹೆಗ್ಗಡೆ ಅವರಿಂದ ಲೋಕಾರ್ಪಣೆಗೊಂಡಿತ್ತು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!