spot_img
Wednesday, April 1, 2026
spot_img

ಕಟ್ಟಿನಮಕ್ಕಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ವಾರ್ಷಿಕೋತ್ಸವ

ಕುಂದಾಪುರ: ಸಂಘಟನಾತ್ಮಕ ಹೋರಾಟದಿಂದ ಸರಕಾರಿ ಶಾಲೆ ಉಳಿಯಲಿ ಮತ್ತು ಬೆಳೆಯಲಿ ಎಂದು ಉದ್ಯಮಿ ಯು.ಚಿತ್ತರಂಜನ್ ಹೆಗ್ಡೆ ಹರ್ಕೂರು ಹೇಳಿದರು.

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಟ್ಟಿನಮಕ್ಕಿ ಇದರ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ವಹಿಸಿ, ಹಳೆ ವಿದ್ಯಾರ್ಥಿಗಳು ಹಾಗೂ ಊರವರ ಬಾಂಧವ್ಯ ಒಂದಾದರೆ ಮಾತ್ರ ಸರಕಾರಿ ಶಾಲೆ ಉಳಿವಿಗೆ ಮತ್ತು ಅಭಿವೃದ್ಧಿಗೆ ಕಾರಣವಾಗುವುದು ಎಂದರು.

ಶಾಲೆಯ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸಿ ಶಾಲೆಯ ಹೆಸರನ್ನು ಮುಂಚೂಣಿಯಲ್ಲಿ ತರುವಂತೆ ಹಳೆ ವಿದ್ಯಾರ್ಥಿಗಳು ಶ್ರಮ ವಹಿಸುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ರಾಜೇಶ ಎಸ್ ದೇವಾಡಿಗ, ರಾಜೇಂದ್ರ ದೇವಾಡಿಗ, ಶ್ರೀಮತಿ ಪ್ರಮೋದ ಕುಶಲ ಶೆಟ್ಟಿ, ವಿಜಯ ಕುಮಾರ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ಶೇಖರ ಪೂಜಾರಿ, ಕೆ.ಗೋಪಾಲ ಪೂಜಾರಿ, ಕುಷ್ಟಗಿ ಉದ್ಯಮಿ ಚಂದ್ರಶೇಖರ ಶೆಟ್ಟಿ, ರಘುರಾಮ ದೇವಾಡಿಗ, ಚಂದ್ರಯ್ಯ ಆಚಾರ್ಯ, ಅರುಣ್ ಕುಮಾರ್ ಶೆಟ್ಟಿ, ರಾಜೇಶ ಶೆಟ್ಟಿ ಗಾಣದರ ಹಕ್ಲು, ಭರತ್ ಶೆಟ್ಟಿ ನಾರ್ಕಳಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸಮಿತಿಯ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ, ಚಿತ್ತರಂಜನ್ ದೇವಾಡಿಗ, ಸವಿತಾ ಪ್ರಭಾಕರ ದೇವಾಡಿಗ, ಮುಖ್ಯೋಪಾಧ್ಯಾಯರಾದ ಗುಣವತಿ ಶೆಟ್ಟಿ, ರಮ್ಯ, ಮನೀಶ ಎಂ.ದೇವಾಡಿಗ ಉಪಸ್ಥಿತರಿದ್ದರು.

ಶಿಕ್ಷಕ ಆದರ್ಶ ಸ್ವಸ್ತಿ ವಾಚನ ಮಾಡಿದರು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಮಾಜಿ ಅಧ್ಯಕ್ಷರು, ಅಕ್ಷರ ದಾಸೋಹ ಸಿಬ್ಬಂದಿ, ಹಳೆ ವಿದ್ಯಾರ್ಥಿ ಸಂಘದ ನಿಕಟಪೂರ್ವ ಅಧ್ಯಕ್ಷರು, ಅಂಗನವಾಡಿ ನಿವೃತ್ತ ಕಾರ್ಯಕರ್ತೆ ಮತ್ತು ಸಹಾಯಕಿಯನ್ನು ಸನ್ಮಾನಿಸಲಾಯಿತು.

ಶಿಕ್ಷಕ ಉದಯ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಮುಖ್ಯ ಶಿಕ್ಷಕಿ ಗುಣವತಿ ಸ್ವಾಗತಿಸಿದರು. ಸಹಶಿಕ್ಷಕಿ ಸರಿಟಾ ಪಾಯಸ್ ವರದಿ ಮಂಡಿಸಿದರು. ಸವಿತಾ ಪ್ರಭಾಕರ ದೇವಾಡಿಗ ವಂದಿಸಿದರು.
ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಹಳೆ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ-‘ಭಸ್ಮಾಸುರ ಮೋಹಿನಿ’ ಪ್ರದರ್ಶನಗೊಂಡಿತು.

ಬೆಳಿಗ್ಗೆಯ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸವಿತಾ ಪ್ರಭಾಕರ ದೇವಾಡಿಗ ವಹಿಸಿದ್ದರು. ಧ್ವಜಾರೋಹಣವನ್ನು ಪಂಚಾಯತ್ ಅಧ್ಯಕ್ಷರಾದ ರಾಜೇಶ ಎನ್ ದೇವಾಡಿಗ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರೂಪಾ ಗೋಪಿ, ಸತೀಶ್ ಶೆಟ್ಟಿ, ಇಂದಿರಾ ಶೆಟ್ಟಿ, ಶಾಂತಾರಾಮ ಶೆಟ್ಟಿ, ಅಬ್ದುಲ್ ಸಲಾಂ, ವಿಷ್ಣು ಕುಮಾರ್ ಭಟ್, ಲಕ್ಷ್ಮೀ ಹೆಬ್ಬಾರ್, ರಾಮನಾಥ ಮೇಸ್ತ ಉಪಸ್ಥಿತರಿದ್ದರು.

ಚಿತ್ತರಂಜನ್ ಹೆಗ್ಡೆ ಸ್ವಾಗತಿಸಿದರು. ವಿಜೇಂದ್ರ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು. ಇಂದಿರಾ ದೇವಾಡಿಗ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!