spot_img
Friday, April 3, 2026
spot_img

ಕೆಐಎಡಿಬಿ ಸ್ವಾಧೀನ ಪಡೆಯುವ ಜಮೀನಿನಲ್ಲಿ ಸ್ಥಾಪಿತವಾಗುವ ಕೈಗಾರಿಕೆಗಳಲ್ಲಿ ರೈತರಿಗೂ ಸಹಭಾಗಿತ್ವ : ಎಂ.ಬಿ ಪಾಟೀಲ್‌

ಜನಪ್ರತಿನಿಧಿ (ಬೆಳಗಾವಿ) : ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಸ್ವಾಧೀನಪಡಿಸಿಕೊಳ್ಳುವ ಜಮೀನಿನಲ್ಲಿ ಸ್ಥಾಪಿತವಾಗುವ ಕೈಗಾರಿಕೆಗಳಲ್ಲಿ ರೈತರಿಗೂ ಸಹಭಾಗಿತ್ವ ನೀಡಲು ಅಥವಾ ಅವರೇ ಕೈಗಾರಿಕೆ ಸ್ಥಾಪಿಸಲು ಮುಂದಾದರೆ ನೆರವು ನೀಡುವ ಕುರಿತು ಪರಿಶೀಲಿಸುತ್ತೇವೆ ಎಂದು ಕೈಗಾರಿಕೆ ಸಚಿವರಾದ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಪಾಟೀಲ್‌, ಪ್ರಸ್ತುತ ಇರುವ ಕಾಯ್ದೆಯ ಪ್ರಕಾರ ಕೆಐಎಡಿಬಿ ವಶಪಡಿಸಿಕೊಳ್ಳುವ ಭೂಮಿಗೆ ಮಾರುಕಟ್ಟೆ ದರದಲ್ಲಿ ಪರಿಹಾರ ನೀಡಲಾಗುತ್ತಿದೆ. ಅವರು ಬಯಸಿದರೆ ಅಭಿವೃದ್ಧಿಗೊಳಿಸಿದ ಅವರ ಪ್ರದೇಶದಲ್ಲಿ ಪ್ರತಿ ಎಕರೆಗೆ ಪರ್ಯಾಯವಾಗಿ 10,781 ಚದರ ಅಡಿ ಜಾಗ ನೀಡಲಾಗುತ್ತಿದೆ ಎಂದರು.

ನಗರಾಭಿವೃದ್ದಿ ಪ್ರಾಧಿಕಾರಗಳು ರೈತರಿಂದ ಸ್ವಾಧೀನಪಡಿಸಿಕೊಂಡ ಜಮೀನಿನ ಬದಲಿಗೆ ಅಭಿವೃದ್ಧಿಪಡಿಸಲಾದ ನಿವೇಶನಗಳನ್ನು ನೀಡುವ ಮಾದರಿಯಲ್ಲಿ ಕೈಗಾರಿಕಾ ಪ್ರದೇಶದಲ್ಲೂ ರೈತರನ್ನೂ ಒಳಗೊಳ್ಳುವಂತೆ ಮಾಡಲು ಸೂಕ್ತ ನಿಯಮ ರೂಪಿಸಬೇಕಿದೆ ಎಂದು ಹೇಳಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!