spot_img
Thursday, April 2, 2026
spot_img

ಅಪ್ಪು 20 ವರ್ಷಗಳ ಕನಸು ಈಡೇರಿಸುತ್ತಿರುವ ಅಶ್ವಿನಿ ಪುನೀತ್‌ ರಾಜ್‌ ಕುಮಾರ್‌ !

ಜನಪ್ರತಿನಿಧಿ (ಬೆಂಗಳೂರು) : ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಶಿಕ್ಷಣ ಕ್ಷೇತ್ರ ಪ್ರವೇಶಿಸುತ್ತಿದ್ದಾರೆ. ‘ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರೀಸ್ಕೂಲ್’ ಅನ್ನು ಪ್ರಾರಂಭಿಸಲು ಅವರು ಸುನಿತಾ ಗೌಡ, ಸ್ಪೂರ್ತಿ ವಿಶ್ವಾಸ್, ಶ್ರುತಿ ಕಿರಣ್ ಮತ್ತು ಡಾ.ಬಿಂದು ರಾಣಾ ಅವರೊಂದಿಗೆ ಕೈಜೋಡಿಸಿದ್ದಾರೆ.

ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರೀಸ್ಕೂಲ್, ಮಕ್ಕಳ ಕಲಿಕೆ ಮತ್ತು ಬೆಳವಣಿಗೆಗೆ ಹೊಸ ದಾರಿ ನಿರ್ಮಿಸಲು ಸಜ್ಜಾಗಿದೆ. ಇಂಡಿಯನ್ ವುಮನ್ ಅಚೀವರ್ಸ್ ಅವಾರ್ಡ್ಸ್ ಕಾರ್ಯಕ್ರಮದಲ್ಲಿ, ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಮತ್ತು ಶಿಕ್ಷಣತಜ್ಞೆ ಐಶ್ವರ್ಯಾ ಡಿ.ಕೆ. ಎಸ್ ಹೆಗ್ಡೆ ಅವರ ಉಪಸ್ಥಿತಿಯಲ್ಲಿ ಉದ್ಘಾಟನೆಯಾಯಿತು.

ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅಶ್ವಿನಿ ಪುನೀತ್​ ರಾಜ್​ಕುಮಾರ್​​, ನಾನು ಮತ್ತು ಪುನೀತ್ 20 ವರ್ಷಗಳಿಂದ ಶಿಕ್ಷಣ ಕ್ಷೇತ್ರವನ್ನು ಪ್ರವೇಶಿಸುವ ಕನಸು ಕಂಡಿದ್ದೆವು. ಈ ಯೋಜನೆ ನಮ್ಮ ಕನಸನ್ನು ನನಸಾಗಿಸುತ್ತಿದೆ. ಪ್ರತೀ ಮಗುವಿನ ಸಾಮರ್ಥ್ಯವನ್ನು ಪೋಷಿಸುವ ಶಾಲೆಗಳನ್ನು ರಚಿಸುವುದು, ಎಜುಕೇಶನ್​ ಎಕ್ಸಲೆನ್ಸ್​ ಮಾತ್ರವಲ್ಲದೇ ನಾಯಕತ್ವವನ್ನೂ ನಿರ್ಮಿಸುವುದು ನಮ್ಮ ಉದ್ದೇಶ ಎಂದು ಹೇಳಿದರು.

ಸಚಿವ ಡಾ.ಸುಧಾಕರ್ ಮಾತನಾಡಿ, ಶಿಕ್ಷಣ ವ್ಯಕ್ತಿಯ ಭವಿಷ್ಯದ ಸ್ಥಾಪನೆಯ ಪ್ರಮುಖ ಕೀಲಿ. ಪ್ರೀಸ್ಕೂಲ್‌ಗಳಲ್ಲಿ ಕಳೆದ ಹಲವು ವರ್ಷಗಳಿಂದ ಪಠ್ಯಕ್ರಮದಲ್ಲಿ ಗಣನೀಯ ಬದಲಾವಣೆಗಳು ನಡೆದಿವೆ. ಈ ಮಹಿಳಾ ತಂಡವು ಶಿಕ್ಷಣ ಕ್ಷೇತ್ರಕ್ಕೆ ಕಾಲಿಡುತ್ತಿರುವುದು ಸಂತೋಷದ ವಿಚಾರ ಎಂದು ತಿಳಿಸಿದರು.

ಬೆಂಗಳೂರು ನಗರದಲ್ಲಿ ಐದು ಕೇಂದ್ರಗಳಿಂದ ಆರಂಭ: ಮೊದಲ ಐದು ಕಲಿಕಾ ಕೇಂದ್ರಗಳು ಬೆಂಗಳೂರಿನಲ್ಲಿ ಪ್ರಾರಂಭವಾಗಲಿದ್ದು, ಆಧುನಿಕ ಸೌಲಭ್ಯಗಳು, ಅನುಭವಿ ಶಿಕ್ಷಕರು ಮತ್ತು ನವೀನ ಪಠ್ಯಕ್ರಮ ಇರಲಿವೆ. ಈ ಕೇಂದ್ರಗಳು ಕೇವಲ ಶಾಲೆಗಳಷ್ಟೇ ಅಲ್ಲ, ಅವು ಮಕ್ಕಳಿಗೆ ಸೃಜನಶೀಲವಾಗಿ ಚಿಂತಿಸಲು, ಆತ್ಮವಿಶ್ವಾಸದಿಂದ ನಡೆದುಕೊಳ್ಳಲು ಮತ್ತು ಧೈರ್ಯದಿಂದ ನಾಯಕತ್ವ ತೋರಲು ಪ್ರೇರಣೆ ನೀಡುವ ಪರಿವರ್ತನಾತ್ಮಕ ಸ್ಥಳಗಳಾಗಿ ರೂಪುಗೊಳ್ಳುತ್ತಿವೆ.

ಇನ್ನು, ಈ ಬಗ್ಗೆ ತಮ್ಮ ಅಧಿಕೃತ ಸಾಮಾಜಿಕ ಜಾಲತಣದಲ್ಲಿ ವೀಡಿಯೋ ಸಂದೇಶದ ಮೂಲಕವೂ  ಅಶ್ವಿನಿ ಪುನೀತ್‌ ರಾಜ್‌ ಕುಮಾರ್‌, ನಾನು ಮತ್ತು ಪುನೀತ್ 20 ವರ್ಷಗಳಿಂದ ಶಿಕ್ಷಣ ಕ್ಷೇತ್ರವನ್ನು ಪ್ರವೇಶಿಸುವ ಕನಸು ಕಂಡಿದ್ದೆವು. ಆ ಕನಸು ಈಗ ನನಸಾಗುತ್ತಿದೆ ಎಂದು ಹೇಳಿಕೊಂಡಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!