spot_img
Thursday, April 2, 2026
spot_img

ಮೋದಿ ಕಾರ್ಯವೈಖರಿ ನಮ್ಮಂಥ ಕಾರ್ಯಕರ್ತರಿಗೆ ನಿತ್ಯ ಚೈತನ್ಯದ ಚಿಲುಮೆ : ವಿಜಯೇಂದ್ರ ಯಡಿಯೂರಪ್ಪ

ಜನಪ್ರತಿನಿಧಿ (ಬೆಂಗಳೂರು) : ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿಕೊಂಡು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಅವರ ಆಶೀರ್ವಾದ ಪಡೆದೆ ಎಂದು ವಿಜಯೇಂದ್ರ ಯಡಿಯೂರಪ್ಪ ಸಂತಸ ಹಂಚಿಕೊಂಡಿದ್ದಾರೆ.

ಈ ಬಗ್ಗೆ ತಮ್ಮ ಅಧಿಕೃತ ಮೈಕ್ರೋಬ್ಲಾಗಿಂಗ್‌ ಖಾತೆ ಎಕ್ಸ್‌ ನಲ್ಲಿ ಬರೆದುಕೊಂಡಿರುವ ವಿಜಯೇಂದ್ರ, ವಿಕಸಿತ ಭಾರತ ನಿರ್ಮಾಣಕ್ಕಾಗಿ ಮಹಾಸಂಕಲ್ಪ ತೊಟ್ಟು ತಪಸ್ವಿ ಸಾಧಕರಂತೆ ಈ ದೇಶ ಕಟ್ಟುವ ಕೆಲಸದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಪ್ರಧಾನಿ ಮೋದಿಯವರ ಕಾರ್ಯವೈಖರಿ ನಮ್ಮಂಥ ಕಾರ್ಯಕರ್ತರಿಗೆ ನಿತ್ಯ ಚೈತನ್ಯದ ಚಿಲುಮೆ ಎಂದು ಹೇಳಿದ್ದಾರೆ.

ಮೋದಿ ಮಾರ್ಗದಲ್ಲಿ ರಾಜ್ಯದಲ್ಲಿ ಪಕ್ಷ ಕಟ್ಟುವ ಕೆಲಸಕ್ಕೆ ಅತೀವ ಉತ್ಸಾಹ ತುಂಬಿದೆ. ಇಂದಿನ ಅವರ ಭೇಟಿಯ ಸಂದರ್ಭದಲ್ಲಿ ಅವರು ಆಡಿದ ಮಾತುಗಳು ಸಂಘಟನೆಯ ಬಲವೃದ್ಧಿಯ ಜೊತೆಗೆ ರಾಷ್ಟ್ರ ಬಲಿಷ್ಠಗೊಳಿಸುವ ಮಹತ್ಕಾರ್ಯಕ್ಕೆ ಪ್ರೇರಣೆ ನೀಡಿದೆ ಎಂದಿದ್ದಾರೆ.

ಭಾರತದ ಆರ್ಥಿಕ, ಔದ್ಯೋಗಿಕ, ಶೈಕ್ಷಣಿಕ ಕ್ಷೇತ್ರಗಳ ಪ್ರಗತಿ ಜಾಗತಿಕ ಮಟ್ಟದಲ್ಲಿ ಅಗ್ರ ಸಾಧನೆಗೈಯಲು ಮಹತ್ವದ ಪಾತ್ರ ವಹಿಸಲಿದ್ದು ಈ ನಿಟ್ಟಿನಲ್ಲಿ ಕರ್ನಾಟಕದ ಕೊಡುಗೆ ಮುಂಚೂಣಿ ಸ್ಥಾನದಲ್ಲಿರುವಂತೆ ಕಾಳಜಿ ವಹಿಸುವಂತೆ ಕೇಂದ್ರ ಸರ್ಕಾರದ ಯೋಜನೆಗಳು ಜನರಿಗೆ ತಲುಪುವಂತಾಗಬೇಕು ಎಂದು ಹೇಳಿದರು. ಇದಕ್ಕಾಗಿ ಪಕ್ಷದ ಕಾರ್ಯಕರ್ತರು ಯೋಜಿತವಾಗಿ ತೊಡಗಿಸಿಕೊಳ್ಳಲು ಕಾರ್ಯಕ್ರಮ ರೂಪಿಸಲು ಪ್ರಧಾನಿಗಳು ಸೂಚಿಸಿದರು. ಮೋದಿ ಅವರ ಭೇಟಿಯ ಅಪೂರ್ವ ಕ್ಷಣಗಳು ಪಕ್ಷ ಬಲವರ್ಧನೆಗೆ ದೊರೆತ ಪ್ರೇರಣೆಯ ಕಿರಣಗಳು ಎಂದು ವಿಜಯೇಂದ್ರ ತಿಳಿಸಿದ್ದಾರೆ.

https://x.com/BYVijayendra/status/1869283758614237612

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!