spot_img
Thursday, April 2, 2026
spot_img

ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿಗಳ ಅತ್ಯಲ್ಪ ಪಿಂಚಣಿ ಶೋಚನೀಯ : ಸುಪ್ರೀಂ ಕೋರ್ಟ್‌

ಜನಪ್ರತಿನಿಧಿ (ನವ ದೆಹಲಿ) : ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿಗಳಿಗೆ ಹತ್ತರಿಂದ ಹದಿನೈದು ಸಾವಿರದಷ್ಟು ಅತ್ಯಲ್ಪ ನಿವೃತ್ತಿ ವೇತನ ನೀಡಲಾಗುತ್ತಿರುವುದು ಶೋಚನೀಯ ಎಂದು ಇಂದು(ಬುಧವಾರ) ಸುಪ್ರೀಂ ಕೋರ್ಟ್‌ ಹೇಳಿದೆ.

ನಿವೃತ್ತಿ ವೇತನ ನೀಡುವುದಕ್ಕೆ ಸಂಬಂಧಿಸಿ ಮಾನವೀಯತೆ ದೃಷ್ಟಿಯಿಂದ ಕ್ರಮ ಕೈಗೊಳ್ಳಬೇಕೆ ಹೊರತು ಕಾನೂನಾತ್ಮಕ ವಿಧಾನಕ್ಕೆ ಜೋತು ಬೀಳಬಾರದು ಎಂದು ಸಂಬಂಧಪಟ್ಟ ಅಧಿಕಾರಿಗಳನ್ನು ಉದ್ದೇಶಿಸಿ ಹೇಳಿದೆ.

ಹೈಕೋರ್ಟ್‌ ನ ನಿವೃತ್ತ ನ್ಯಾಯಮೂರ್ತಿಗಳಿಗೆ ನೀಡಲಾಗುತ್ತಿರುವ ಪಿಂಚಣಿಯಲ್ಲಿ ವ್ಯತ್ಯಾಸವಿದೆ ಎಂಬ ಬಗ್ಗೆ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಬಿ. ಆರ್.‌ ಗವಾಯಿ ಹಾಗೂ ಕೆ.ವಿ. ವಿಶ್ವನಾಥನ್‌ ಅವರು ಇದ್ದ ನ್ಯಾಯಪೀಠ ನಡೆಸಿತು.

ಜಿಲ್ಲಾ ನ್ಯಾಯಾಲಯಗಳಿಂದ ಪದನ್ನೋತಿ ಹೊಂದಿ ಹೈಕೋರ್ಟ್‌ ನ್ಯಾಯಮೂರರ್ತಿಗಳಾದವರನ್ನು ಹೊಸ ಪಿಂಚಣಿ ಯೋಜನೆ ವ್ಯಾಪ್ತಿಗೆ ಸೇರಿಸಿರುವುದೇ ಈ ಅತ್ಯಲ್ಪ ಪಿಂಚಣಿಗೆ ಕಾರಣಗಳಲ್ಲೊಂದು. ಇನ್ನೊಂದೆಡೆ, ಹೈಕೋರ್ಟ್‌ ಗೆ ನೇಮಕಗೊಂಡಿರುವ ಹಿರಿಯ ವಕೀಲರಿಗೆ ಹಳೆಯ ಪಿಂಚಣಿ ಯೋಜನೆಯ ಪ್ರಯೋಜನ ಸಿಗುತ್ತಿದೆ. ಇದು ಪಿಂಚಣಿಯಲ್ಲಿನ ವ್ಯತ್ಯಾಸಕ್ಕೆ ಮತ್ತೊಂದು ಕಾರಣ.

ಕೇಂದ್ರದ ಪರ ಹಾಜರಿದ್ದ ಅಟಾರ್ನಿ ಜನರಲ್‌ ಆರ್.‌ ವೆಂಕಟರಮಣಿ, ಈ ಸಮಸ್ಯೆ ಬಗೆಹರಿಸಲು ಕೇಂದ್ರ ಸರ್ಕಾರ ಯತ್ನಿಸಲಿದೆ. ಈ ಬಗ್ಗೆ ಅರ್ಜಿಗಳ ವಿಚಾರಣೆಯನ್ನು ಜನವರಿಗೆ ಮುಂದೂಡಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಈ ವಿಷಯ ಬಗ್ಗೆ ಸರ್ಕಾರಕ್ಕೆ ಮನವರಿಕೆ ಮಾಡಿ ಕೊಡಿ. ಇದರಿಂದ ನಾವು ಈ ವಿಷಯದಲ್ಲಿ ಮಧ್ಯಪ್ರವೇಶಿಸುವುದು ತಪ್ಪಲಿದೆ ಎಂದ ನ್ಯಾಯಪೀಠ, ವಿಚಾರಣೆಯನ್ನು ಜನವರಿ ೮ಕ್ಕೆ ಮುಂದೂಡಿ ಆದೇಶಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!