spot_img
Wednesday, April 1, 2026
spot_img

ಅಂಬೇಡ್ಕರ್‌ ಬಗ್ಗೆ ಶಾ ಅವಹೇಳನಕಾರಿ ಹೇಳಿಕೆ : ಸಂಪುಟದಿಂದ ವಜಾಗೊಳಿಸುವಂತೆ ಮೋದಿಗೆ ಖರ್ಗೆ ಒತ್ತಾಯ

ಜನಪ್ರತಿನಿಧಿ (ನವ ದೆಹಲಿ) : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಆರ್ ಅಂಬೇಡ್ಕರ್‌  ವಿರುದ್ಧ ನೀಡಿರುವ ಅವಹೇಳನಕಾರಿ ಹೇಳಿಕೆಗಳನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರವಾಗಿ ಖಂಡಿಸಿದ್ದಾರೆ.

ಸಂಸತ್ತಿನಲ್ಲಿ ಅಂಬೇಡ್ಕರ್ ಬಗ್ಗೆ ಅಮಿತ್‌ ಶಾ ನೀಡಿರುವ ಹೇಳಿಕೆ ಸರಿಯಲ್ಲ. ಅಮಿತ್ ಶಾ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಖರ್ಗೆ ಒತ್ತಾಯಿಸಿದ್ದಲ್ಲದೇ, ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕೂಡಲೇ ಸಂಪುಟದಿಂದ ವಜಾಗೊಳಿಸಬೇಕು ಎಂದು ಖರ್ಗೆ ಒತ್ತಾಯಿಸಿದ್ದಾರೆ.

ಅಮಿತ್ ಶಾ ಸಂಸತ್ತಿನಲ್ಲಿ ದಲಿತ ನಾಯಕ ಡಾ. ಬಿ.ಆರ್ ಅಂಬೇಡ್ಕರ್ ಅವರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿರುವ ಅವರು, ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಖರ್ಗೆ ಒತ್ತಾಯಿಸಿದರು. ಇದು ತಪ್ಪು ಎಂದು ಅಮಿತ್ ಶಾಗೆ ಹೇಳುವ ಬದಲು ಪ್ರಧಾನಿ ಮೋದಿ ಅವರು ಅಂಬೇಡ್ಕರ್ ಅವರ ಬಗ್ಗೆ ನೀಡಿರುವ ಹೇಳಿಕೆಯ ಬಗ್ಗೆ ಸಮರ್ಥಿಸಿಕೊಳ್ಳುತ್ತಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.

ಅಮಿತ್ ಶಾ ಕ್ಷಮೆ ಯಾಚಿಸಬೇಕು ಮತ್ತು ಪ್ರಧಾನಿ ಮೋದಿಗೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮೇಲೆ ನಂಬಿಕೆ ಇದ್ದರೆ ಮಧ್ಯರಾತ್ರಿಯೊಳಗೆ ಅಮಿತ್ ಶಾ ಅವರನ್ನು ವಜಾಗೊಳಿಸಬೇಕು. ಶಾ ಅವರಿಗೆ ಸಂಪುಟದಲ್ಲಿ ಉಳಿಯುವ ಹಕ್ಕಿಲ್ಲ. ಡಾ ಬಿಆರ್ ಅಂಬೇಡ್ಕರ್ ಅವರಿಗಾಗಿ ಜನರು ಪ್ರಾಣ ತ್ಯಾಗ ಮಾಡಲು ಸಿದ್ಧರಾಗಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!