spot_img
Wednesday, April 1, 2026
spot_img

ಕೋಡಿ : ಅಂಬರ್ ಗ್ರೀಸ್ ವಹಿವಾಟು ಶೋಧಕ್ಕೆ ಮಾರುವೇಷದಲ್ಲಿ ಬಂದ ಸಿಐಡಿ ಅಧಿಕಾರಿಗಳನ್ನೇ ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು !

ಜನಪ್ರತಿನಿಧಿ (ಕುಂದಾಪುರ) : ಕುಂದಾಪುರದ ಕೋಡಿ ಬೀಚ್ ಬಳಿ ಅವ್ಯಾಹತವಾಗಿ ನಡೆಯುತ್ತಿರುವ ಅಂಬರ್ ಗ್ರೀಸ್ ( ತಿಮಿಂಗಿಲ ವಾಂತಿ) ವಹಿವಾಟಿನ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಾರುವೇಷದಲ್ಲಿ ಶೋಧ ಕಾರ್ಯಾಚರಣೆಗೆ ಬಂದಿದ್ದ ಸಿಐಡಿ ಅಧಿಕಾರಿಗಳನ್ನೇ ಸ್ಥಳೀಯರು ತಪ್ಪು ಗ್ರಹಿಕೆಯಿಂದ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು(ಬುಧವಾರ, ಡಿ. 18) ಮಧ್ಯಾಹ್ನ ಕುಂದಾಪುರ ಎಂ. ಕೋಡಿಯಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.

ಕುಂದಾಪುರದ ಕೋಡಿಯಲ್ಲಿ ಅಂಬರ್ ಗ್ರೀಸ್ ವಹಿವಾಟು ನಿರಂತರವಾಗಿ ನಡೆಯುತ್ತಿರುವ ಬಗ್ಗೆ ಮಾಹಿತಿ ಇದ್ದ ಹಿನ್ನೆಲೆಯಲ್ಲಿ ಮಾರುವೇಷದಲ್ಲಿ ಮೂರು ಕಾರಿನಲ್ಲಿ ಬಂದ ಅರಣ್ಯ ಇಲಾಖೆಯ ಸಿಐಡಿ ಅಧಿಕಾರಿಗಳು ಶೋಧ ಕಾರ್ಯಾಚರಣೆಗಿಳಿದಿದ್ದರು, ಈ ವೇಳೆ ನಾಲ್ವರನ್ನು ಕಾರಿಗೆ ತುಂಬುವ ಸಂದರ್ಭದಲ್ಲಿ ಸ್ಥಳೀಯರು ತಪ್ಪು ಗ್ರಹಿಕೆಯಿಂದ ಅಧಿಕಾರಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಹೇಳಲಾಗಿದೆ.

ಇನ್ನು, ಈ ವೇಳೆ ಘಟನಾ ಸ್ಥಳದಲ್ಲೇ ಇದ್ದ ಸ್ಥಳೀಯರು ತಪ್ಪು ಗೃಹಿಕೆಯಿಂದ ಸಿಐಡಿ ಅಧಿಕಾರಿಗಳಿಗೆ ಥಳಿಸಿದ್ದಾರೆ ಎನ್ನಲಾಗುತ್ತಿದ್ದು, ಸದ್ಯ, ಅಧಿಕಾರಿಗಳು ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

ಘಟನಾ ಸ್ಥಳಕ್ಕಾಗಮಿಸಿದ ಡಿವೈಎಸ್ಪಿ ಬೆಳ್ಳಿಯಪ್ಪ, ಕುಂದಾಪುರ ಟೌನ್ ಎಸ್ಐ ನಂಜ ನಾಯ್ಕ ಹಾಗೂ ಸಿಬ್ಬಂದಿಗಳು ಸಿಐಡಿ ಅಧಿಕಾರಿಗಳನ್ನು ಸ್ಥಳಾಂತರಿಸಿದ್ದಾರೆ. ಈ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!