spot_img
Wednesday, April 1, 2026
spot_img

2025ರ ಮಾರ್ಚ್‌ ಅಂತ್ಯಕ್ಕೆ ಹೆಚ್ಚುವರಿ ಬಸ್‌ಗಳ ಖರೀದಿಗೆ ಕ್ರಮ : ಸಂತೋಷ್‌ ಲಾಡ್‌

 ಜನಪ್ರತಿನಿಧಿ (ಬೆಳಗಾವಿ) : ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಸಮರ್ಪಕ ಅನುಷ್ಠಾನ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಕಳೆದ 16 ತಿಂಗಳಲ್ಲಿ 4,294 ಬಸ್ ಗಳನ್ನು ಖರೀದಿಸಲಾಗಿದೆ. 2025ರ ಮಾರ್ಚ್ ಅಂತ್ಯಕ್ಕೆ ಹೆಚ್ಚುವರಿ ಬಸ್ ಗಳನ್ನು ಖರೀದಿಸಲಾಗುವುದು ಎಂದು ಸಾರಿಗೆ ಸಚಿವರ ಪರವಾಗಿ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಹೇಳಿದರು.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಅವರ ಪ್ರಶ್ನೆಗೆ ಉತ್ತರಿಸಿದ ಸಂತೋಷ್‌ ಲಾಡ್‌, ಈಗಾಗಲೇ‌ ನಾಲ್ಕು ಸಾರಿಗೆ ನಿಗಮಗಳಲ್ಲಿ 9,000 ಚಾಲನಾ ಸಿಬ್ಬಂದಿಗಳ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದೆ. ಈ ಪೈಕಿ ಈಗಾಗಲೇ ಅಂದಾಜು 4,000 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಬಾಕಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಹೇಳಿದ್ದಾರೆ.

ಶಕ್ತಿ ಯೋಜನೆಯು ಜಾರಿಯಾದ ಬಳಿಕ ವಿಶೇಷವಾಗಿ ಮಹಿಳೆಯರಿಗೆ ಸಾಕಷ್ಟು ಅನುಕೂಲವಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಉದ್ಯೋಗದಲ್ಲಿ ತೊಡಗಿಕೊಂಡು ಆರ್ಥಿಕ ಅಭಿವೃದ್ದಿ ಸಾಧ್ಯವಾಗಿದೆ ಎಂದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!