spot_img
Wednesday, April 1, 2026
spot_img

ಅಂಬೇಡ್ಕರ್‌ ಗೆ ಅವಮಾನ : ಶಾ ಕ್ಷಮೆಯಾಚನೆಗೆ, ರಾಜೀನಾಮೆಗೆ ಒತ್ತಾಯಿಸಿ ʼಇಂಡಿಯಾʼ ಮೈತ್ರಿಕೂಟ ಪ್ರತಿಭಟನೆ !

ಜನಪ್ರತಿನಿಧಿ (ನವ ದೆಹಲಿ) : ಕೇಂದ್ರ ಗೃಹ ಸಚುವ ಅಮಿತ್‌ ಶಾ ರಾಜ್ಯಸಭೆಯಲ್ಲಿ ಡಾ. ಬಿ. ಆರ್.‌ ಅಂಬೇಡ್ಕರ್‌ ಅವರ ಬಗ್ಗೆ ನೀಡಿರುವ ಹೇಳಿಕೆಗಳು ವಿಪಕ್ಷಗಳ ಕೆಂಗಣ್ಣಿಗೆ ಕಾರಣವಾಗಿದೆ. ಹೋರಾಟವನ್ನು ತೀವ್ರಗೊಳಿಸಿರುವ ʼಇಂಡಿಯಾʼ ಮೈತ್ರಿಕೂಟ ಸಂಸತ್‌ ಆವರಣದ ಅಂಬೇಡ್ಕರ್‌ ಪ್ರತಿಮೆ ಬಳಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿದೆ.

ಮಕರ ದ್ವಾರದ ಬಳಿಯಿಂದ ಈ ಪ್ರತಿಭಟನಾ ಮೆರವಣಿಗೆ ಸಾಗುತ್ತಿದೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ಅವರ ಜೊತೆ ʼಇಂಡಿಯಾʼ ಮೈತ್ರಿಕೂಟದ ಹಲವು ಸಂಸದರಯ, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.

ರಾಜ್ಯಸಭೆಯಲ್ಲಿ ಅಂಬೇಡ್ಕರ್‌ ಬಗ್ಗೆ ತಾವು ನೀಡಿದ ಹೇಳಿಕೆಗೆ ಅಮಿತ್‌ ಶಾ ಕ್ಷಮೆಯಾಚಿಸಬೇಕು ಹಾಗೂ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಸಂಸದರು ಒತ್ತಾಯಿಸಿದ್ದಾರೆ.

ಇದೇ ಬೇಡಿಕೆ ಮುಂದಿಟ್ಟುಕೊಂಡು ಲೋಕಸಭೆ ವಿಪಕ್ಷದ ನಾಯಕ ರಾಹುಲ್‌ ಗಾಂಧಿ ಹಾಗೂ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ್‌ ಖರ್ಗೆ ಅವರ ನೇತೃತ್ವದಲ್ಲಿ ವಿಪಕ್ಷಗಳ ಸಂಸದರು, ಬುಧವಾರ ಸಂಸತ್‌ ಒಳಗೆ ಮತ್ತು ಹೊರಗೆ ಅಂಬೇಡ್ಕರ್‌ ಭಾವಚಿತ್ರ ಹಿಡಿದು ಪ್ರತಿಭಟನೆ ನಡೆಸಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!