spot_img
Wednesday, April 1, 2026
spot_img

ರಾಜ್ಯದಲ್ಲಿ 16,644 ಗ್ರಾಮಗಳನ್ನು ಪೋಡಿ ಮುಕ್ತ ಗ್ರಾಮಗಳಾಗಿ ಮಾಡಲಾಗಿದೆ : ಸಚಿವ ಬೈರೇಗೌಡ

ಜನಪ್ರತಿನಿಧಿ (ಬೆಳಗಾವಿ) : ಬಹು ಮಾಲೀಕತ್ವದ ಖಾಸಗಿ ಒಡೆತನದ ಪಹಣಿಗಳನ್ನು ಏಕವ್ಯಕ್ತಿ ಪಹಣಿಗಳನ್ನಾಗಿ ಮಾಡುವ ಉದ್ದೇಶದ ಪೋಡಿ ಮುಕ್ತ ಯೋಜನೆಯಡಿ ರಾಜ್ಯದಲ್ಲಿ ಈಗಾಗಲೇ 16,644 ಗ್ರಾಮಗಳನ್ನು ಪೋಡಿ ಮುಕ್ತ ಗ್ರಾಮಗಳಾಗಿ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ರಾಮೋಜಿ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಬೈರೇಗೌಡ, ಭೂ ಮಾಪನ ಇಲಾಖೆಯಲ್ಲಿ ಕಳೆದ 3 ವರ್ಷಗಳಲ್ಲಿ ವಿವಿಧ ರೀತಿಯ 6,62,825 ಪೋಡಿ ಅರ್ಜಿಗಳನ್ನು ಸ್ವೀಕರಿಸಿದ್ದು, ಅದರಲ್ಲಿ 5,33,545 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದ್ದು, ಪ್ರಕರಣಗಳಲ್ಲಿನ ನ್ಯೂನತೆಗಳನ್ನು ಶೀಘ್ರವಾಗಿ ಸರಿಪಡಿಸಿಕೊಂಡು ವಿಳಂಬವಿಲ್ಲದೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.

ಈ ಹಿಂದೆ, ಮ್ಯುಟೇಷನ್ ಪೋಡಿಯಂತಹ ಪ್ರಕ್ರಿಯೆಯನ್ನು ಪೂರೈಸಲು ನಾಲ್ಕರಿಂದ ಆರು ತಿಂಗಳವರೆಗೆ ಕಾಲಾವಕಾಶ ತೆಗೆದುಕೊಳ್ಳಲಾಗುತ್ತಿತ್ತು. ಆದರೆ ನಮ್ಮ ಸರ್ಕಾರವು ರೈತರಿಗೆ ಸಂಬಂಧಪಟ್ಟ ಇಂತಹ ಕೆಲಸಗಳಿಗೆ ಆದ್ಯತೆ ನೀಡಿ ಎಲ್ಲಾ ಹಂತಗಳ ಪ್ರಕ್ರಿಯೆಗಳನ್ನು ಸೂಕ್ತ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಚುರುಕುಗೊಳಿಸಿದ್ದು, ಪೋಡಿಗೆ ಯೋಗ್ಯವಾಗಿರುವ ಯಾವುದೇ ಪ್ರಕರಣಗಳನ್ನು ಸರಾಸರಿ ಒಂದು ತಿಂಗಳ ಅವಧಿಯಲ್ಲಿ ಪೂರೈಸಲಾಗುತ್ತಿದೆ ಎಂದು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!