spot_img
Wednesday, March 18, 2026
spot_img

ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಮಕ್ಕಳಿಗೆ ಹಾಲುಣಿಸುವ ಆರೈಕೆ ಕೇಂದ್ರ ತೆರೆಯಲು ಚಿಂತನೆ : ಡಿಸಿಎಂ ಡಿಕೆಶಿ

ಜನಪ್ರತಿನಿಧಿ (ಬೆಳಗಾವಿ) : ರಾಜ್ಯದ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಮಹಿಳೆಯರು, ಮಕ್ಕಳಿಗೆ ಹಾಲುಣಿಸುವ ಆರೈಕೆ ಕೇಂದ್ರ ತೆರೆಯುವ ಕುರಿತ ಸಲಹೆಯನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಲಿದೆ ಎಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಪ್ರಸ್ತುತ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣ ಮೆಜೆಸ್ಟಿಕ್, ಯಶವಂತಪುರ ಮೆಟ್ರೋ ನಿಲ್ದಾಣ, ಚಿಕ್ಕಪೇಟೆ ಮೆಟ್ರೋ ನಿಲ್ದಾಣ ಮತ್ತು ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಶಿಶು ಆಹಾರ ಕೇಂದ್ರಗಳು ಇವೆ ಎಂದು ತಿಳಿಸಿದರು.

ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಿಸಲಾಗಿದೆ ಹಾಗೂ ಅಂಗವಿಕಲರಿಗೆ ಶೌಚಾಲಯಗಳಲ್ಲಿ ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!