spot_img
Saturday, February 14, 2026
spot_img

ಡಿ.21ರಂದು ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಾರ್ಷಿಕೋತ್ಸವ

ವಂಡ್ಸೆ: ವಂಡ್ಸೆಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಈಗ 111ರ ಹರೆಯ. ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದ ಸಾಧಕರನ್ನು ಈ ಶಾಲೆ ನೀಡಿದೆ. ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ಸಹಭಾಗಿತ್ವದೊಂದಿಗೆ ಆಂಗ್ಲಮಾಧ್ಯಮ ವಿಭಾಗ ಆರಂಭಿಸಿ ಉಡುಪಿ ಜಿಲ್ಲೆಯಲ್ಲಿ ಸಂಚಲನಕ್ಕೆ ಕಾರಣವಾದ ಈ ಸಂಸ್ಥೆ ಪೂರ್ವ ಪ್ರಾಥಮಿಕ ವಿಭಾಗದಿಂದ 7ನೇ ತರಗತಿ ತನಕ ಆಂಗ್ಲಮಾಧ್ಯಮದಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ಈಗಾಗಲೇ 2023, ಮತ್ತು 2024ರ ಬ್ಯಾಚುಗಳ ವಿದ್ಯಾರ್ಥಿಗಳು ಪೂರ್ವ ಪ್ರಾಥಮಿಕದಿಂದ 7ನೇ ತರಗತಿ ತನಕ ಆಂಗ್ಲಮಾಧ್ಯಮದಲ್ಲಿ ಶಿಕ್ಷಣ ಪೂರೈಸಿ ಬೇರೆ ಬೇರೆ ಶಾಲೆಗಳಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಶತಮಾನೋತ್ಸವದ ಬಳಿಕ ಪ್ರತಿವರ್ಷ ಶಾಲಾ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತ ಬಂದಿರುವುದು ಈ ಶಾಲೆಯ ವಿಶೇಷವಾಗಿದೆ. ವಾರ್ಷಿಕೋತ್ಸವಕ್ಕೆ ಪೂರಕವಾಗಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಪಾಲ್ಗೊಳ್ಳುವ ಕ್ರೀಡೋತ್ಸವ, ಮಿನಿ ಪ್ರತಿಭಾ ಕಾರಂಜಿ ಎನ್ನಬಹುದಾದ ಪ್ರತಿಭೋತ್ಸವ, ವಿಶೇಷವಾಗಿ ವಿದ್ಯಾರ್ಥಿಗಳ ಹೆತ್ತವರ ಕ್ರೀಡೋತ್ಸವವನ್ನು ಆಯೋಜಿಸಿ ಅಂದೇ ಗಣ್ಯರ ಸಮ್ಮುಖದಲ್ಲಿ ಬಹುಮಾನ ನೀಡುವುದು ವಿಶೇಷ. ಸಂಕ್ಷೀಪ್ತವಾಗಿ ಸಭಾ ಕಾರ್ಯಕ್ರಮ ಮುಗಿಸುವುದು, ಸಾಂಸ್ಕೃತಿಕ ಕಾರ್ಯಕ್ರಮವನ್ನು ವಿದ್ಯಾರ್ಥಿಗಳೇ ಆಂಗ್ಲ ಭಾಷೆ ಮತ್ತು ಕನ್ನಡ ಭಾಷೆಯಲ್ಲಿ ನಿರ್ವಹಣೆ ಮಾಡುವುದು ಇಲ್ಲಿಯ ಇನ್ನೊಂದು ವಿಶೇಷ.

ಈ ಸಾಲಿನ ಶಾಲಾ ವಾರ್ಷಿಕೋತ್ಸವ ಡಿಸೆಂಬರ್ 21-2024 ಶನಿವಾರ ಸಂಜೆ 6-30ಕ್ಕೆ ನಡೆಯಲಿದೆ. ವೈವಿಧ್ಯಮಯ ನೃತ್ಯಾವಳಿಗಳು, ಜಾನಪದ ನೃತ್ಯಗಳು, ಪಠ್ಯ ಆಧರಿಸಿದ ಅಪರೂಪದ ನಾಟಕವನ್ನು ಮಕ್ಕಳು ಪ್ರದರ್ಶನ ನೀಡಲಿದ್ದಾರೆ.

ಬೆಳಿಗ್ಗೆ 9 ಗಂಟೆಗೆ ಶ್ರೀ ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷರಾದ ಕೃಷ್ಣಮೂರ್ತಿ ಮಂಜರು ಧ್ವಜಾರೋಹಣ ನೆರವೇರಿಸಲಿದ್ದಾರೆ.

ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗೋವರ್ದನ್ ಜೋಗಿ, ಗ್ರಾಮ ಪಂಚಾಯತ್ ಸದಸ್ಯೆ ಸುಬ್ಬು, ಎಂ,ಎಸ್.ಮಂಜ ಚಾರಿಟೇಬಲ್ ಟ್ರಸ್ಟ್ ಕಾರ್ಯಾಧ್ಯಕ್ಷ ನಾಗರಾಜ ಮಂಜರು, ಸಮೂಹ ಸಂಪನ್ಮೂಲ ವ್ಯಕ್ತಿ ನಾಗರಾಜ ಶೆಟ್ಟಿ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷ ರಾಜೀವ, ಆರ್.ಕೆ.ಗ್ರಾಫಿಕ್ಸ್ ಮಾಲೀಕ ರಕ್ಷಿತ್ ಕುಮಾರ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ರಾತ್ರಿ 8.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು ಶಾಸಕ ಗುರುರಾಜ ಗಂಟಿಹೊಳೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಅವಿನಾಶ್ ಅಧ್ಯಕ್ಷತೆ ವಹಿಸಲಿದ್ದಾರೆ.

ಶ್ರೀ ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷರಾದ ಕೃಷ್ಣಮೂರ್ತಿ ಮಂಜರು, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಕೆ. ಬಾಬು ಶೆಟ್ಟಿ, ವಂಡ್ಸೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರಾದ ಉದಯಕುಮಾರ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರಾದ ಶಶಿಕಲಾ ಎಸ್., ಪ್ರಶಾಂತ್ ಪೂಜಾರಿ, ಸುಶೀಲಾ, ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರಾದ ರಾಜೇಶ ಕಾರಂತ್, ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ದ.ಕ ಇದರ ಚರ್ಮನ್ ಸಿ.ಎ ಶಾಂತಾರಾಮ ಶೆಟ್ಟಿ, ನೋಟರಿ ಮತ್ತು ವಕೀಲರಾದ ಕೆ.ಪ್ರಸನ್ನಕುಮಾರ ಶೆಟ್ಟಿ, ಚಿತ್ರಕೂಟ ಆಯುರ್ವೇದ ಆಲೂರು ಇದರ ಸಂಸ್ಥಾಪಕ ಡಾ.ರಾಜೇಶ್ ಬಾಯರಿ, ಬೆಳಗಾವಿ ಹೋಟೆಲ್ ಉದ್ಯಮಿ ಗುಣಾಕರ ಶೆಟ್ಟಿ ನಂದ್ರೊಳ್ಳಿ, ವಂಡ್ಸೆ ಸಹಕಾರಿ ವ್ಯವಸಾಯಿಕ ಸಂಘದ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಸೀತಾರಾಮ ಜಿ.ಪೂಜಾರಿ, ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗುಂಡು ಪೂಜಾರಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಡುಪಿ ಜಿಲ್ಲಾಧ್ಯಕ್ಷ ದಿನಕರ ಶೆಟ್ಟಿ ಅಂಪಾರು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬೈಂದೂರು ತಾಲೂಕು ಅಧ್ಯಕ್ಷ ಶೇಖರ ಪೂಜಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಅಂತರಾಷ್ಟ್ರೀಯ ಕ್ರೀಡಾಪಟು ಗುರುರಾಜ್ ಪೂಜಾರಿ ಜಡ್ಡು ಸ್ವಸ್ತಿವಾಚನ ಮಾಡಲಿದ್ದಾರೆ,

6.30ರಿಂದ ಅಂಗನವಾಡಿ ಪುಟಾಣಿಗಳಿಂದ ನೃತ್ಯ, ಶಾಲಾ ಮಕ್ಕಳಿಂದ ನೃತ್ಯ ಸಿಂಚನ, ವಿದ್ಯಾರ್ಥಿಗಳಿಂದ ನಾಟಕ ಮಕ್ಕಳೊಳಗೆ ಮಾಯಾವಿಗಳು, ಸಭಾ ಕಾರ್ಯಕ್ರಮದ ಬಳಿಕ ನೃತ್ಯ ವೈಭವ ನಡೆಯಲಿದೆ.

ಈ ಎಲ್ಲಾ ಕಾರ್ಯಕ್ರಮಗಳಿಗೆ ವಿದ್ಯಾಭಿಮಾನಿಗಳು, ಹಳೆ ವಿದ್ಯಾರ್ಥಿಗಳು, ಗ್ರಾಮಸ್ಥರು, ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ಡಾ.ಪೂರ್ಣಿಮಾ ಟಿ, ವಿದ್ಯಾರ್ಥಿ ನಾಯಕಿ ಆರಾಧ್ಯ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂದೇಶ ಶೆಟ್ಟಿ, ಶಾಲಾ ಪ್ರಭಾರ ಮುಖ್ಯೋಪಾಧ್ಯಾಯರಾದ ಸದಾಶಿವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!