spot_img
Wednesday, April 1, 2026
spot_img

ಸಿ.ಟಿ. ರವಿ ಅವರ ಅವಾಚ್ಯ ಪದ ಬಳಕೆ ಪ್ರಕರಣ : ಇದೊಂದು ಗಂಭೀರ ಸ್ವರೂಪದ ಅಪರಾಧ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಮಂಡ್ಯ) : ಸಿ.ಟಿ ರವಿ ಬಂಧನ ವಿರೋಧಿಸಿ ಬಿಜೆಪಿ ಪಕ್ಷ ಪ್ರತಿಭಟನೆ ಮಾಡುವ ಮೂಲಕ ಹೆಣ್ಣುಮಕ್ಕಳಿಗೆ ಅವಹೇಳನಕಾರಿಯಾಗಿ ಮಾತನಾಡುವುದನ್ನು ಬೆಂಬಲಿಸುತ್ತಿದ್ದಾರೆ. ಸಿ.ಟಿ.ರವಿಯವರು ಕೀಳುಭಾಷೆ ಬಳಸಿದ್ದು ಸುಳ್ಳಾದರೆ ಅವರ ಬಂಧನವೇಕಾಯಿತು? ಸಾಮಾನ್ಯವಾಗಿ ಇಂತಹ ಆರೋಪಗಳ ಬಗ್ಗೆ  ಹೆಣ್ಣುಮಕ್ಕಳು ಸುಳ್ಳು ದೂರು ಕೊಡಲು ಸಾಧ್ಯವಿಲ್ಲ. ಸಿ.ಟಿ. ರವಿಯವರು ಅವಾಚ್ಯ ಪದ ಏಕೆ ಬಳಸಿದರೆಂದು ನನಗೆ ತಿಳಿದಿಲ್ಲ. ಆದರೆ ಇದೊಂದು ಗಂಭೀರ ಸ್ವರೂಪದ ಅಪರಾಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮಂಡ್ಯದಲ್ಲಿ ವರದಿಗಾರರಿಗೆ ಸ್ಪಂದಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಿ.ಟಿ.ರವಿಯವರು ತಾವು ‘ಪ್ರಸ್ಟ್ರೇಷನ್’ ಪದ ಬಳಸಿರುವುದಾಗಿ ತಿಳಿಸಿದ್ದಾರೆ. ಆದರೆ ಅವಾಚ್ಯ ಪದ ಬಳಸಿರುವುದು ನಿಜವೆಂದು ಸಚಿವರು ಹೇಳಿದ್ದಾರೆ. ಕೀಳು ಪದಬಳಕೆಯನ್ನು ಕೇಳಿರುವುದಾಗಿ ಅಲ್ಲಿಯೇ ಇದ್ದ ಇತರ ಸದಸ್ಯರೂ ಹೇಳಿದ್ದಾರೆ. ಸಭಾಪತಿಯವರು ಪೀಠದಿಂದ ಹೊರನಡೆದ ನಂತರ ನಡೆದಿರುವ ಘಟನೆ ಬಗ್ಗೆ ಆಡಿಯೋ ಮತ್ತು ವಿಡಿಯೋ ಇದೆ ಎಂದೂ ಹಲವರು ಹೇಳುತ್ತಿದ್ದು, ಪದಬಳಕೆಯಾಗಿರುವುದು ಸತ್ಯ ಎಂದರು.

ಸಿ.ಟಿ ರವಿಯವರು ಎಸಗಿರುವ ಅಪರಾಧ ಕೃತ್ಯಕ್ಕೆ ಅನುಗುಣವಾಗಿ ಕಾನೂನಿನ ಕ್ರಮ ಜರುಗಿಸಬೇಕಾಗುತ್ತದೆ. ಬೆಳಗಾವಿಯಲ್ಲಿ ಜನರ ಆಕ್ರೋಶದಿಂದ ಸಿ.ಟಿ.ರವಿಯವರನ್ನು ರಕ್ಷಿಸಲು ಖಾನಾಪುರಕ್ಕೆ ಅವರನ್ನು ಕರೆತರಲಾಗಿತ್ತು ಎಂದು ಹೇಳಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!