spot_img
Wednesday, April 1, 2026
spot_img

ಅಶ್ಲೀಲ ಪದ ಬಳಕೆ ಪ್ರಕರಣ : ಸಿ.ಟಿ ರವಿಗೆ ಬಿಗ್‌ ರಿಲೀಫ್‌ | ತಕ್ಷಣ ಬಿಡುಗಡೆಗೆ ಹೈಕೋರ್ಟ್‌ ಆದೇಶ !

ಜನಪ್ರತಿನಿಧಿ (ಬೆಂಗಳೂರು) : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪದಲ್ಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಉಚ್ಚ ನ್ಯಾಯಾಲಯ ಮಧ್ಯಂತರ ಆದೇಶ ನೀಡಿದೆ. ಇದರಿಂದಾಗಿ ಸಿ.ಟಿ. ರವಿ ಬೆಂಬಲಿಗರಲ್ಲಿ ಸಂತಸ ಮೂಡಿದೆ.

ನಿನ್ನೆ(ಗುರುವಾರ) ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಅಧಿವೇಶನದ ಸಂದರ್ಭದಲ್ಲಿ ವಿಧಾನಪರಿಷತ್ ನಲ್ಲಿ ತನ್ನ ವಿರುದ್ಧ ಸಿ.ಟಿ ರವಿ ಅವಹೇಳನಾಕಾರಿ ಪದ ಬಳಸಿದ್ದಾರೆ ಎಂದು ಆರೋಪಿಸಿ ಲಕ್ಷ್ಮಿ ಹೆಬ್ಬಾಳ್ಕರ್ ದೂರು ದಾಖಲಿಸಿದ್ದರು. ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಸಿಟಿ ರವಿ ವಿರುದ್ಧ ಬಿಎನ್‌ಎಸ್ ಕಾಯ್ದೆ 75 ಮತ್ತು 79ಅಡಿಯಲ್ಲಿ ಎಫ್​ಐಆರ್ ದಾಖಲಾಗಿತ್ತು.

ಲೈಂಗಿಕ ಕಿರುಕುಳ, ಮಹಿಳೆ ಇಚ್ಛೆ ವಿರುದ್ಧ ಅಶ್ಲೀಲತೆ ತೋರುವುದು. ಮಹಿಳೆಯ ನಮ್ರತೆ ಅವಮಾನಿಸುವ ಉದ್ದೇಶದಿಂದ ಸನ್ನೆ, ಪದ ಅಥವಾ ಕ್ರಿಯೆ, ಲೈಂಗಿಕ ಬಣ್ಣದ ಟೀಕೆ ಎಂದು ಎಫ್​​ಐಆರ್​ನಲ್ಲಿ ಉಲ್ಲೇಖಿಸಲಾಗಿತ್ತು. ಎಫ್ ಐಆರ್ ದಾಖಲಾದ ಬಳಿಕ ಸಿಟಿ ರವಿ ಅವರನ್ನು ಬಂಧಿಸಲಾಗಿತ್ತು.

ಸಿ.ಟಿ ರವಿ ಜಾಮೀನು ಅರ್ಜಿ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಕೋರ್ಟ್‌ ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾಹಿಸಿದ ಹಿನ್ನೆಲೆಯಲ್ಲಿ ಅವರನ್ನು ಪೊಲೀಸರು ಬೆಂಗಳೂರಿಗೆ ಕರೆತರುತ್ತಿದ್ದರು.

ಈ ಮಧ್ಯೆಯೇ ವಿಚಾರಣೆ ನಡೆಸಿದ ನ್ಯಾಯಾಲಯ ವಿಚಾರಣೆಯನ್ನು ನಾಳೆಗೆ ಮುಂದೂಡಿತ್ತು. ಈ ಮಧ್ಯೆ ಸಿಟಿ ರವಿ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ. ಉಮಾ ಅವರನ್ನೊಳಗೊಂಡ ನ್ಯಾಯಪೀಠ ತನಿಖೆಗೆ ಸಹಕರಿಸುವಂತೆ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!