spot_img
Monday, December 23, 2024
spot_img

ಅಲೆಗಳ ಹೊಡೆತಕ್ಕೆ ಟೂರಿಸ್ಟ್‌ ಬೋಟ್‌ ಪಲ್ಟಿ ಪ್ರಕರಣ : ನಾಪತ್ತೆಯಾಗಿದ್ದ ಬೋಟ್‌ ರೈಡರ್‌ ಮೃತದೇಹ 36 ಗಂಟೆಗಳ ಬಳಿಕ ಪತ್ತೆ !

ಜನಪ್ರತಿನಿಧಿ (ಕುಂದಾಪುರ) : ತ್ರಾಸಿ ಅರಬ್ಬೀ ಸಮುದ್ರದಲ್ಲಿ ಶನಿವಾರ ಸಂಜೆ ಅಲೆಗಳ ಹೊಡೆತಕ್ಕೆ ಪ್ರವಾಸಿಗರನ್ನು ಕರೆದೊಯ್ದಿದ್ದ ಜೆಟ್‌ಸ್ಕೀ ಬೋಟ್‌ ಮಗುಚಿ ಸಮುದ್ರ ಪಾಲಾಗಿದ್ದ ವ್ಯಕ್ತಿಯ ಮೃತದೇಹ ಇಂದು(ಸೋಮವಾರ(ಡಿ.23) ನಸುಕಿನ ಜಾವ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಮೃತ ವ್ಯಕ್ತಿಯನ್ನು ರೋಹಿದಾಸ್‌ (41) ಗುರುತಿಸಲಾಗಿದೆ.

ಶನಿವಾರ ಸಂಜೆ ತ್ರಾಸಿ ಬೀಚ್ ಸಮುದ್ರ ತೀರದಲ್ಲಿ ಬೋಟ್‌ ಮಗುಚಿ ರೋಹಿದಾಸ್ ಸಮುದ್ರಪಾಲಾಗಿದ್ದ ಈ ಸಂದರ್ಭದಲ್ಲಿ ಆತನಿಗಾಗಿ ಶೋಧ ಕಾರ್ಯ ನಡೆಸಿದ್ದಾಗ್ಯೂ, ರೋಹಿದಾಸ್ ಪತ್ತೆಯಾಗಿರಲಿಲ್ಲ. ಘಟನೆ ನಡೆದು 36 ಗಂಟೆಗಳ ಬಳಿಕ ಸಮೀಪದ ಹೊಸಪೇಟೆ ರುದ್ರ ಭೂಮಿಯ ಹಿಂಭಾಗದ ಸಮುದ್ರ ತೀರದಲ್ಲಿ ಪತ್ತೆಯಾಗಿದೆ.

ಸ್ಥಳೀಯ ಮೀನುಗಾರರಾದ ಶಾಸ ಖಾರ್ವಿ ಹಾಗೂ ಮೋಹನ ಖಾರ್ವಿ ಇವರು ಇಂದು(ಸೋಮವಾರ) ಬೆಳಿಗ್ಗೆ 3 ಗಂಟೆ ಸುಮಾರಿಗೆ ಮೀನುಗಾರಿಕೆ ತೆರಳುತ್ತಿದ್ದ ಸಂದರ್ಭ ಶವ ತೇಲುತ್ತಿರುವುದನ್ನು ಗಮನಿಸಿ, ಸ್ಥಳೀಯ ಕರಾವಳಿ ಕಾವಲು ಪಡೆಯ ಕರಾವಳಿ ನಿಯಂತ್ರಣ ದಳದ ಸಿಬ್ಬಂದಿ ನಿಶಾಂತ್ ಖಾರ್ವಿ ಗೆ ಮಾಹಿತಿ ನೀಡಿದ್ದಾರೆ, ಬಳಿಕ ಮೂವರು ಸೇರಿ ಸಮುದ್ರದಲ್ಲಿ ತೇಲುತ್ತಿದ್ದ ಶವವನ್ನು ಮೇಲೆಕ್ಕೆ ತಂದಿದ್ದಾರೆ, ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಗಂಗೊಳ್ಳಿ 24x 7 ಆಂಬ್ಯುಲೆನ್ಸ್ ಇದರ ಇಬ್ರಾಹಿಂ ಗಂಗೊಳ್ಳಿ, ಕೆಎನ್ ಡಿ ಸಿಬ್ಬಂಧಿ ನಿಶಾಂತ್ ಖಾರ್ವಿ, ಬೀಚ್ ಉಸ್ತುವಾರಿ ಸಿಬ್ಬಂದಿ ಸುರೇಶ್ ಕೊಡೇರಿ, ಮೃತ ರೊಹಿದಾಸ್ ಸಹೋದ್ಯೋಗಿಗಳು ಶವವನ್ನು ತೀರದಿಂದ ಸಾಗಿಸಲು ಸಹಕರಿಸಿದರು. ಗಂಗೊಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಸದ್ಯ ಶವವನ್ನು ಇಬ್ರಾಹಿಂ ಗಂಗೊಳ್ಳಿ ಅವರು ಕುಂದಾಪುರ ಸರಕಾರಿ ಆಸ್ಪತ್ರೆಯ ಶೀತಲೀಕರಣ ಘಟಕಕ್ಕೆ ಕೊಂಡೊಯ್ದಿದ್ದಾರೆ ಎಂದು ತಿಳಿದು ಬಂದಿದೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!