spot_img
Monday, December 23, 2024
spot_img

ಸಿ.ಟಿ ರವಿ ವಿರುದ್ಧ ಕಠಿಣ ಕ್ರಮಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲ ಆಗ್ರಹ !

ಜನಪ್ರತಿನಿಧಿ (ಬೆಳಗಾವಿ) : ಇತ್ತೀಚೆಗೆ ವಿಧಾನ ಪರಿಷತ್ತಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಉದ್ದೇಶಿಸಿ ಅವಾಚ್ಯ ಪದ ಬಳಸಿರುವ ಬಿಜೆಪಿ ಎಂಎಲ್‌ಸಿ ಸಿಟಿ ರವಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಇಂದು(ಸೋಮವಾರ) ಆಗ್ರಹಿಸಿದ್ದಾರೆ.

ಬಿಜೆಪಿಯನ್ನು ‘ಮಹಿಳಾ ವಿರೋಧಿ’ ಎಂದು ಕರೆದ ಅವರು, ಕಳೆದ ವಾರ ಸಂಸತ್ತಿನಲ್ಲಿ ಬಿಆರ್ ಅಂಬೇಡ್ಕರ್ ವಿರುದ್ಧದ ಹೇಳಿಕೆಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ತೀವ್ರವಾಗಿ ಟೀಕಿಸಿದ್ದಾರೆ.

ವರದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಬಿಜೆಪಿಯವರು ದೇಶದ ಮಹಿಳೆಯರನ್ನು ಪದೇ ಪದೆ ಅವಮಾನಿಸುತ್ತಿದ್ದಾರೆ. ಮಹಿಳೆಯರು, ಯುವಕರು, ರೈತ ಮತ್ತು ದಲಿತ, ಬುಡಕಟ್ಟು ಮತ್ತು ಹಿಂದುಳಿದ ವರ್ಗಗಳನ್ನು ವಿರೋಧಿಸುವುದೇ ಬಿಜೆಪಿಯ ಗುಣವಾಗಿದೆ. ಬಿಜೆಪಿ ನಾಯಕರು ಮಹಿಳಾ ನಾಯಕಿಯರ ವಿರುದ್ಧ ಅವಹೇಳನಕಾರಿ ಪದ ಬಳಸುತ್ತಿರುವುದು ಖಂಡನೀಯ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನಾನು ಕರ್ನಾಟಕ ಸರ್ಕಾರವನ್ನು ಒತ್ತಾಯಿಸುತ್ತೇನೆ’ ಎಂದು ಹೇಳಿದರು.

ಡಿ.19ರಂದು ವಿಧಾನ ಪರಿಷತ್ತಿನಲ್ಲಿ ನಡೆದ ವಾಗ್ವಾದದ ವೇಳೆ ಸದನವನ್ನು ಸ್ವಲ್ಪ ಹೊತ್ತು ಮುಂದೂಡಿದಾಗ ರವಿ ಅವರು ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಪದ ಬಳಸಿದ್ದರು.

ಹೆಬ್ಬಾಳ್ಕರ್ ಅವರು ನೀಡಿದ ದೂರಿನ ಮೇರೆಗೆ ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದ ಬೆಳಗಾವಿಯ ಸುವರ್ಣ ವಿಧಾನ ಸೌಧದ ಆವರಣದಿಂದ ಅದೇ ದಿನ ಸಂಜೆ ಸಿಟಿ ರವಿ ಅವರನ್ನು ಬಂಧಿಸಿ ಪೊಲೀಸ್ ವ್ಯಾನ್‌ನಲ್ಲಿ ಕರೆದೊಯ್ಯಲಾಯಿತು.

ಡಿಸೆಂಬರ್ 20 ರಂದು ಹೈಕೋರ್ಟ್ ತನ್ನ ಮಧ್ಯಂತರ ಆದೇಶದಲ್ಲಿ ರವಿಯನ್ನು ತಕ್ಷಣ ಬಿಡುಗಡೆ ಮಾಡುವಂತೆ ಆದೇಶಿಸಿತು. ಸಿಟಿ ರವಿ ಅವರನ್ನು ಬಂಧಿಸುವಲ್ಲಿ ಪೊಲೀಸರು ನಿಯಮಗಳನ್ನು ಪಾಲಿಸಲು ವಿಫಲರಾಗಿದ್ದಾರೆ ಎಂದಿತ್ತು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!