spot_img
Wednesday, April 1, 2026
spot_img

ಬಿಜೆಪಿಗೆ ನೈತಿಕತೆ ಇದ್ದರೇ, ಅಮಿತ್ ಶಾ, ಸಿ.ಟಿ ರವಿಯವರನ್ನು ಪಕ್ಷದಿಂದ ವಜಾಗೊಳಿಸಲಿ : ರಮೇಶ್‌ ಶೆಟ್ಟಿ ವಕ್ವಾಡಿ ಒತ್ತಾಯ

ಜನಪ್ರತಿನಿಧಿ (ಕುಂದಾಪುರ) : ಎಪ್ಪತ್ತು ವರ್ಷ ದೇಶವನ್ನು ಕಟ್ಟಿ ಬೆಳೆಸಿದ ಕಾಂಗ್ರೆಸ್ ಪಕ್ಷ ಎಂದಿಗೂ ದ್ವೇಷ ರಾಜಕಾರಣ ಮಾಡಿಲ್ಲ, ಸಂವಿಧಾನದ ಸಿದ್ದಾಂತವೇ ಕಾಂಗ್ರೆಸ್ ಸಿದ್ದಾಂತವಾಗಿದ್ದು, ಎಲ್ಲಾ ಜಾತಿ ಧರ್ಮಗಳಿಗೂ ಗೌರವ ಕೊಟ್ಟು, ವಿಶೇಷವಾಗಿ ಮಹಿಳೆಯರಿಗೆ ಭಾರತದ ಮಾತೆಯರ ಸ್ಥಾನಮಾನಗಳನ್ನು ನೀಡಿದೆ ಎಂದು ಕುಂದಾಪುರ ತಾಲೂಕು ಕೆಡಿಪಿ ಸದಸ್ಯ ರಮೇಶ್ ಶೆಟ್ಟಿ ವಕ್ವಾಡಿ ಆಕ್ರೋಶ ಹೊರಹಾಕಿದ್ದಾರೆ.

ಇನ್ನು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಬಗ್ಗೆ ವಿಧಾನಪರಿಷತ್‌ ನಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಸಿ.ಟಿ ರವಿ ಬಗ್ಗೆ ಕಿಡಿ ಕಾರಿದ ಅವರು, ಬಾಯಲ್ಲಿ ಭಾರತ ಮಾತೆ ಎಂದು ಭಾಷಣ ಬಿಗಿಯುವ ಬಿಜೆಪಿ ನಾಯಕರು ಇಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಕನಿಷ್ಠವಾಗಿ ಮಾತನಾಡಿ ಅವರ ಸಂಸ್ಕೃತಿಯ ಅನಾವರಣ ಮಾಡಿದ್ದಾರೆ ಎಂದು ಹೇಳಿದ್ದಲ್ಲದೇ, ಕೇಂದ್ರ ಬಿಜೆಪಿ ನಾಯಕರಾದ ಅಮಿತ್ ಶಾ, ಅಂಬೇಡ್ಕರ್ ಹೆಸರು ಹೇಳುವುದನ್ನು ಗೇಲಿ ಮಾಡಿ ದೇಶದ ಸಂವಿಧಾನದ ಜನಕನಿಗೆ ಅವಮಾನ ಮಾಡಿದ್ದಾರೆ. ಬಿಜೆಪಿ ಪಕ್ಷಕ್ಕೆ ನೈತಿಕತೆ ಇದ್ದರೆ ಅಮಿತ್ ಶಾ ಮತ್ತು ಸಿ.ಟಿ ರವಿಯವರನ್ನು ಪಕ್ಷದಿಂದ ವಜಾಗೊಳಿಸಬೇಕು ಎಂದವರು ಆಗ್ರಹಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!