spot_img
Friday, April 3, 2026
spot_img

ಡಿ.28: ಬಾರಕೂರಿನಲ್ಲಿ ಉಡುಪಿ ಜಿಲ್ಲಾ ಮಟ್ಟದ 21ನೆಯ ಮಕ್ಕಳ ಸಾಹಿತ್ಯ ಸಮ್ಮೇಳನ

ಬ್ರಹ್ಮಾವರ : ಬಾರಕೂರಿನ ಸ್ವಾಮಿ ವಿವೇಕಾನಂದ ಮತ್ತು ಸ್ವಾಮಿ ಪುರುಷೋತ್ತಮಾನಂದಜಿ ಚಾರಿಟೇಬಲ್ ಟ್ರಸ್ಟ್(ರಿ.) ಆಶ್ರಯದಲ್ಲಿ ರೋಟರಿ ಕ್ಲಬ್ ಬಾರಕೂರು ಸಹಕಾರದಲ್ಲಿ ಶಾಂತಿವನ ಟ್ರಸ್ಟ್ (ರಿ.), ಶ್ರೀ ಕ್ಷೇತ್ರ ಧರ್ಮಸ್ಥಳ, ಶ್ರೀ ರಾಮಕೃಷ್ಣ ಮಿಷನ್ ಆಶ್ರಮ, ಬೆಳಗಾವಿ, ಮತ್ತು ಬಾರಕೂರು ಆನ್ ಲೈನ್ ಡಾಟ್ ಕಾಮ್ ಸಂಸ್ಥೆಗಳ ಸಹಯೋಗದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿರುವ ಉಡುಪಿ ಜಿಲ್ಲಾ ಮಟ್ಟದ 21ನೆಯ ಮಕ್ಕಳ ಸಾಹಿತ್ಯ ಸಮ್ಮೇಳನ ಡಿ. ೨೮ರಂದು ಬಾರಕೂರು ಹನೆಹಳ್ಳಿ ಸಂಕಮ್ಮ ತಾಯಿ ರೆಸಾರ್ಟ್ಸ್ ನಲ್ಲಿ ನಡೆಯಲಿದೆ.
ಕಾರ್ಕಳ ಹಿರಿಯಂಗಡಿ ಎಸ್.ಎನ್.ವಿ. ಪ್ರೌಢಶಾಲೆಯ ಹತ್ತನೆ ತರಗತಿ ವಿದ್ಯಾರ್ಥಿ ಬ್ರೋವಿನ್ ಅಗೇರ ಸಮ್ಮೇಳನದ ಅಧ್ಯಕ್ಷರಾಗಿರುತ್ತಾರೆ. ಬೆಂಗಳೂರಿನ ಪ್ರಸಿದ್ಧ ರಂಗನಟ, ರಂಗ ನಿರ್ದೇಶಕ ಎಸ್. ಎನ್. ಸೇತುರಾಮ್ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ರೋಟರಿ ವಲಯ-3ರ ಸೇನಾನಿ ರಾಜಾರಾಮ ಶೆಟ್ಟಿ, ಅವರು ಮಕ್ಕಳ ಸ್ವರಚಿತ ಕವನ ಸಂಕಲನವನ್ನು ಬಿಡುಗಡೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಡುಪಿ ಡಯುಟ್ ಸಂಸ್ಥೆಯ ಹಿರಿಯ‌ಉಪನ್ಯಾಸಕಡಾ. ಅಶೋಕ ಕಾಮತ್ ಶುಭಾಶಂಸನೆಗೈಯಲಿದ್ದಾರೆ. ವಿಶೇಷ ಅತಿಥಿಗಳಾಗಿ ಶಾಂತಿವನ ಟ್ರಸ್ಟ್ (ರಿ.)ನ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ಪಾಡಿತ್ತಾಯ, ಸಾಹಿತ್ಯ ಕ್ಷೇತ್ರದಲ್ಲಿ ಬರವಣಿಗೆಯ ಮೂಲಕ ಹೆಸರು ಮಾಡಿರುವ ಆಂಟನಿ ಪ್ರಕಾಶ್ ಡಿ ಸೋಜಾ ಬಾರಕೂರು ಅವರು ಉಪಸ್ಥಿತರಿರುತ್ತಾರೆ.

ಬಾರಕೂರು ಸ್ವಾಮಿ ವಿವೇಕಾನಂದ ಮತ್ತು ಸ್ವಾಮಿ ಪುರುಷೋತ್ತಮಾನಂದಜಿ ಚಾರಿಟೇಬಲ್ ಟ್ರಸ್ಟ್(ರಿ.)ನ ಗೌರವಾಧ್ಯಕ್ಷ ಬಿ. ಶ್ರೀನಿವಾಸ ಶೆಟ್ಟಿಗಾರ್, ಬಾರಕೂರು ರೋಟರಿ ಆಧ್ಯಕ್ಷ ಗಣೇಶ್ ಶೆಟ್ಟಿ ಬಿ., ಸಂಕಮ್ಮ ತಾಯಿ ರೆಸಾರ್ಟ್ಸ್ ವ್ಯವಸ್ಥಾಪಕ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಉಪಸ್ಥಿತರಿರುತ್ತಾರೆ.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿರುವ ಬಿ. ಸೀತಾರಾಮ ತೋಳ್ಪಾಡಿತ್ತಾಯ, ಏಷ್ಯಾ ಪೆಸಿಫಿಸ್ ಐಕಾನ್ ಅವಾರ್ಡ್ ನ್ನು ಗೆದ್ದುಕೊಂಡಿರುವ ಶ್ರೀಕ್ಷೇತ್ರ ಧರ್ಮಸ್ಥಳದ ಯೋಗ ನಿರ್ದೇಶಕರಾಗಿರುವ ಡಾ. ಐ. ಶಶಿಕಾಂತ್ ಜೈನ್, ಉಡುಪಿ ಜಿಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿರುವ ಮಂದರ್ತಿ ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮೇಳದ ಪ್ರಧಾನ ಭಾಗವತ ಉದಯಕುಮಾರ್ ಹೊಸಾಳ ಮತ್ತು ವಿಕಲಚೇತನರ ಕ್ಷೇತ್ರದಲ್ಲಿರಾಜ್ಯ ಪ್ರಶಸ್ತಿ ಪುರಸ್ಕೃತ ಉಮೇಶ್ ಕುಂದರ್ ಹೊಸ್ಕೆರೆ, ಬಾರಕೂರು ಸಾಧಕರನ್ನು ಗೌರವಿಸಲಿದೆ. ಕಲಿಕೆ, ಕ್ರೀಡೆ, ಸಾಂಸ್ಕೃತಿಕ ಮತ್ತಿತರ ವಿಭಾಗಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ನಡೆದ ಸ್ಪರ್ಧೆಗಳಲ್ಲಿ ರಾಜ್ಯ ಮಟ್ಟದಲ್ಲಿ ಗೆದ್ದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳನ್ನೂ ಕೂಡ ಉದ್ಘಾಟನ ಸಮಾರಂಭದಲ್ಲಿ ಅಭಿನಂದಿಸಲಾಗುವುದು.

ಸಮಾರೋಪ ಸಮಾರಂಭ:
ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಸಮಾರೋಪ ಭಾಷಣಕಾರರಾಗಿ ಉಡುಪಿ ಜಿಲ್ಲಾಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಕಳ ತಾಲೂಕು ಘಟಕದ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ, ಮುಖ್ಯ ಅತಿಥಿಗಳಾಗಿ ಬಾರಕೂರು ಸರಕಾರಿ ಪ್ರ.ದರ್ಜೆಕಾಲೇಜಿನ ಪ್ರಾಚಾರ್ಯ ಭಾಸ್ಕರ ಶೆಟ್ಟಿ, ಗೌರವ ಮಾರ್ಗದರ್ಶಕ ನಡೂರು ಶ್ರೀ ವಾಣಿ ವಿದ್ಯಾವರ್ಧಕ ಸಂಘ (ರಿ.)ದ ಸಖಾರಾಮ ಸೋಮಯಾಜಿ, ನಡೂರು ಉಪಸ್ಥಿತರಿರುತ್ತಾರೆ.

ಗೋಷ್ಠಿಗಳು ಮತ್ತು ಉಪನ್ಯಾಸಗಳು: ಸಮ್ಮೇಳನದಲ್ಲಿ ಮಕ್ಕಳ ಸ್ವರಚಿತ ಕವನಗೋಷ್ಠಿಯ ಅಧ್ಯಕ್ಷತೆಯನ್ನು ಬ್ರಹ್ಮಾವರ ಎಸ್.ಎಂ.ಎಸ್. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ವೈಶಾಲಿ ವಹಿಸಲಿದ್ದಾರೆ. ದ.ಕ. ಪ್ರಸಿದ್ಧ ಮಕ್ಕಳ ಸಾಹಿತಿ ರಾಧೇಶ ತೋಳ್ಪಾಡಿ ಸಮನ್ವಯಕಾರರಾಗಿ ಕವಿಗೋಷ್ಠಿಯನ್ನು ನಡೆಸಿಕೊಡಲಿದ್ದಾರೆ. ಉಡುಪಿ ಜಿಲ್ಲೆಯ ವಿವಿಧ ಶಾಲೆಗಳ ಬಾಲಪ್ರತಿನಿಧಿ ಕವಿಗಳು ತಮ್ಮ ಸ್ವರಚಿತ ಕವನಗಳನ್ನು ಗೋಷ್ಠಿಯಲ್ಲಿ ವಾಚಿಸಲಿದ್ದಾರೆ.

ಮಂಗಳೂರಿನ ಸ್ವರೂಪ ಅಧ್ಯಯನ ಕೇಂದ್ರದ ಗೋಪಾಡ್ಕರ್ ಅವರು ಸ್ವರೂಪ-ಸ್ಮೃತಿ ಶಿಕ್ಷಣ ಎಂಬ ವಿಚಾರವಾಗಿ ಮಾತನಾಡಲಿದ್ದಾರೆ ಎಂದು ಪ್ರಧಾನ ಸಂಘಟಕ ರಾಮಭಟ್ಟ ಸಜಂಗದ್ದೆ, ಪ್ರಧಾನ ಕಾರ್ಯದರ್ಶಿ ಅಶೋಕ್ ಸಿ. ಪೂಜಾರಿ, ರೋಟರಿ ಬಾರಕೂರು ಆಧ್ಯಕ್ಷ ಗಣೇಶ್ ಶೆಟ್ಟಿ, ಬಾಬು ನಾಯ್ಕ, ಸೀತಾರಾಮ ಎಸ್. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!