spot_img
Wednesday, April 1, 2026
spot_img

ಹಲ್ಲೆಗೆ ಯತ್ನಿಸಿದವರ ವಿರುದ್ಧ ಕಾನೂನು ಹೋರಾಟ | ಪರಿಷತ್ತಿನಲ್ಲಿ ಹಕ್ಕುಚ್ಯುತಿ ಮಂಡಿಸುತ್ತೇನೆ : ಸಿ.ಟಿ ರವಿ

ಜನಪ್ರತಿನಿಧಿ (ಚಿಕ್ಕಮಗಳೂರು) : ನನ್ನ ಮೇಲೆ ಹಲ್ಲೆಗೆ ಯತ್ನಿಸಿದವರ ವಿರುದ್ಧ ಕಾನೂನು ಕ್ರಮಕ್ಕೆ ಹೋರಾಟ ಮುಂದುವರೆಯಲಿದೆ, ನನ್ನನ್ನು ಬಂಧಿಸಿ ಇಡೀ ರಾತ್ರಿ ಸುತ್ತಾಡಿಸಿದ ಕ್ರಮದ ವಿರುದ್ಧ ಪರಿಷತ್ತಿನಲ್ಲಿ ಹಕ್ಕುಚ್ಯುತಿ ಮಂಡಿಸುತ್ತೇನೆಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದ್ದಾರೆ.

ತಮ್ಮ ಸ್ವಗೃಹದಲ್ಲಿ ವರದಿಗಾರರೊಂದಿಗೆ ಮಾತನಾಡಿದ ರವಿ, ನನ್ನ ಮೇಲೆ ಯಾರ್ಯಾರು ಕೊಲೆ ಪ್ರಯತ್ನ ಮಾಡಿದ್ದರು ಎನ್ನುವುದಕ್ಕೆ ಈಗಾಗಲೇ ದೂರು ನೀಡಲಾಗಿದೆ. ಎಫ್‌ಐಆರ್‌ ಆಗಿಲ್ಲ. ಕೊಲೆ ಪ್ರಯತ್ನ, ಅದಕ್ಕೆ ಕುಮ್ಮಕ್ಕು ಕೊಟ್ಟವರನ್ನು ಪೊಲೀಸರು ಬಂಧಿಸಿ ಕ್ರಮ ಕೈಗೊಳ್ಳದಿದ್ದರೆ ಬೆಳಗಾವಿ ಚಲೋ’ ಮಾಡೋಣವೆಂದು ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್‌. ಅಶೋಕ್‌ ತಿಳಿಸಿದ್ದಾರೆ ಎಂದವರು ಹೇಳಿದ್ದಾರೆ.

ರಕ್ಷಿಸುವ ನೆಪದಲ್ಲಿ ಆರು ಮಂದಿ ಪೊಲೀಸರೊಂದಿಗೆ ನನ್ನನ್ನು ಸ್ಥಳದಿಂದ ಸ್ಥಳಕ್ಕೆ ಸ್ಥಳಾಂತರಿಸಿ, ಕಬ್ಬಿನ ಗದ್ದೆಗೆ ಕರೆದೊಯ್ದಿದ್ದು ಅನುಮಾನಾಸ್ಪದವಾಗಿದೆ. ನನ್ನನ್ನು ಕೊಲೆ ಮಾಡಲು ಸಂಚು ರೂಪಿಸಲಾಗಿತ್ತು. ಏನಾದರೂ ಸಂಭವಿಸಬಹುದಿತ್ತು. ಆರಂಭದಲ್ಲಿ ಈ ಘಟನೆಯಲ್ಲಿ ಮುಖ್ಯಮಂತ್ರಿಯವರ ಪಾತ್ರವಿಲ್ಲ ಎಂದು ಭಾವಿಸಿದ್ದೆ, ಆದರೆ, ಈಗ ಅವರ ಹೇಳಿಕೆಗಳನ್ನು ಗಮನಿಸಿದರೆ ಪೊಲೀಸರು ಮತ್ತು ರಾಜ್ಯ ಸರ್ಕಾರದ ಕಡೆಯಿಂದ ಆಗಿರುವ ಯೋಜನೆ ಎಂದೆನಿಸುತ್ತಿದೆ. ಹೀಗಾಗಿ ಈ ಬಗ್ಗೆ ನ್ಯಾಯಾಂಗ ತನಿಖೆಗೆ ಆಗ್ರಹಿಸುತ್ತಿದ್ದೇವೆಂದು ತಿಳಿಸಿದ್ದಾರೆ.

ನನ್ನ ಮೇಲೆ ದೈಹಿಕ ಹಲ್ಲೆ ನಡೆದ ಸಂಬಂಧ ಕಿಶೋರ್ ಹಾಗೂ ಅರುಣ್ ದೂರು ನೀಡಿದ್ದಾರೆ. ಸುವರ್ಣ ಸೌಧದ ಪಶ್ಚಿಮ ಬಾಗಿಲಿನಲ್ಲಿ ಹಲ್ಲೆಗೆ ಮುಂದಾದ ಸಂದರ್ಭದಲ್ಲಿ ಅವರಿಬ್ಬರೂ ನನ್ನ ಜೊತೆ ಇದ್ದರು. ಹಾಗಾಗಿ ದೂರು ನೀಡಿದ್ದಾರೆ. ದೂರಿನಡಿ ಏನು ಕ್ರಮ ತೆಗೆದುಕೊಳ್ಳುತ್ತಾರೆಂದು ನೋಡಬೇಕಿದೆ. ಖಾನಾಪುರದಲ್ಲಿ ನಾನು ಸಹ ದೂರು ನೀಡಿದ್ದೇನೆ. ಎಫ್‌ಐಆರ್ ಪ್ರತಿ ನೀಡಿಲ್ಲ. ಎಫ್‌ಐಆರ್​ಗಾಗಿ ಎರಡು ದಿನ ನಮ್ಮ ವಕೀಲರು ಹೋಗಿದ್ದಾರೆ. ಕಮಿಷನರ್ 15 ದಿನ ಸಮಯ ಇದೆ ಎಂದಿದ್ದಾರೆ. ಬಿಜೆಪಿ ಹಾಗೂ ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ. ನನ್ನ ದೂರಿಗೂ ಸೂಕ್ತ ಕ್ರಮ ಕೈಗೊಳ್ಳಬೇಕಿತ್ತು. ಕಮಿಷನರ್ ಆ ಜಾಗದಲ್ಲಿ ಇರಲು ಸೂಕ್ತರಲ್ಲ ಎಂದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಲ್ಲೆಗೆ ಮುಂದಾದಾಗ ಇದ್ದವರು ಲಕ್ಷ್ಮಿ ಹೆಬ್ಬಾಳ್ಕರ್ ಕಡೆಯವರು. ಯಾರೂ ಅಪರಿಚಿತರಲ್ಲ. ಇಬ್ಬರು ಹೆಬ್ಬಾಳ್ಕರ್ ಪಿಎಗಳು ಹಾಗೂ ಬಹುತೇಕ ಮುಸ್ಲಿಮರು ಇದ್ದರು. ಮಾಹಿತಿ ಸಂಗ್ರಹಿಸಿದ್ದೇನೆ. ಎಲ್ಲವನ್ನೂ ಸಂಬಂಧಪಟ್ಟವರಿಗೆ ನೀಡುತ್ತೇನೆ. ಎಲ್ಲರ ಹೆಸರು ಹಾಕಿ ದೂರು ನೀಡಿದ್ದೇನೆ. ನನ್ನ ಮೇಲೆ ಕ್ರಮ ಮಾಡ್ತಾರೆ ಅಂದ್ರೆ ಅವರ ಮೇಲೆ ಕ್ರಮ ಏಕಿಲ್ಲ ಎಂದು ಪ್ರಶ್ನಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!