spot_img
Tuesday, May 19, 2026
spot_img

ಕಂಬಳ ಪ್ರಿಯರಿಗೆ ಸಿಹಿ ಸುದ್ದಿ | ಕರಾವಳಿಯ ಪ್ರತಿ ಕಂಬಳಕ್ಕೂ 5 ಲಕ್ಷ ರೂ. ನೀಡಲು ರಾಜ್ಯ ಸರ್ಕಾರ ನಿರ್ಧಾರ !

ಜನಪ್ರತಿನಿಧಿ (ಉಡುಪಿ/ಬೆಂಗಳೂರು) : ಕಂಬಳ ಪ್ರಿಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಕರಾವಳಿಯ ಪ್ರತಿ ಕಂಬಳಕ್ಕೂ 5 ಲಕ್ಷ ರೂಪಾಯಿ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೇಡಿಕೆ ಇಟ್ಟಿದ್ದರೂ ಕೂಡ ಸರ್ಕಾರ ಕಳೆದ ವರ್ಷ ಕಂಬಳಕ್ಕೆ ಅನುದಾನ ನೀಡಿರಲಿಲ್ಲ. ಈ ಬಗ್ಗೆ ಕಂಬಳಪ್ರಿಯರು ಬೇಸರ ವ್ಯಕ್ತಪಡಿಸಿದ್ದರು. ಅದರ ಬೆನ್ನಲ್ಲೇ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲೂ ಕರಾವಳಿಯ ಶಾಸಕರು ಬೇಡಿಕೆ ಸಲ್ಲಿಸಿದ್ದರು. ಸ್ವತಃ ಸಭಾಪತಿ ಯುಟಿ ಖಾದರ್ ಕಂಬಳ ಪರ ಬ್ಯಾಟಿಂಗ್ ಮಾಡಿದ್ದರು. ಸರ್ಕಾರ ನೆರವು ಕೊಡದಿದ್ದರೆ ನಾವೇ ಹಣ ಸಂಗ್ರಹಿಸಿ ಕಂಬಳ ಮಾಡಲು ಗೊತ್ತು ಎಂದು ಚಾಟಿ ಬೀಸಿದ್ದರು.

ಸಭಾಪತಿ ಯುಟಿ ಖಾದರ್ ಸರ್ಕಾರವನ್ನು ಈ ಸಂಬಂಧಿಸಿದಂತೆ ಆಗ್ರಹಿಸಿದ ಬೆನ್ನಲ್ಲೇ ಕಂಬಳಕ್ಕೆ ಅನುದಾನ ಬಿಡುಗಡೆಗೆ ಸರ್ಕಾರ ಆದೇಶ ಹೊರಡಿಸಿದೆ. ಮುಖ್ಯಮಂತ್ರಿಗಳ ಶಿಫಾರಸಿನ ಮೇರೆಗೆ ಪ್ರವಾಸೋದ್ಯಮ ಸಚಿವ ಹೆಚ್​​ಕೆ ಪಾಟೀಲ್ ಆದೇಶ ಹೊರಡಿಸಿದ್ದಾರೆ. 2024- 25 ನೇ ಸಾಲಿನ 24 ಜೋಡು ಕರೆ ಕಂಬಳಗಳಿಗೆ ತಲಾ 5 ಲಕ್ಷ ರೂ. ಘೋಷಣೆಯಾಗಿದೆ.

ಕಂಬಳಕ್ಕೆ ಬೆಂಬಲವಾಗಿ ನಿಂತ ರಾಜ್ಯ ಸರ್ಕಾರಕ್ಕೆ ಕಂಬಳ ಸಮಿತಿ ಅಭಿನಂದನೆ ಸಲ್ಲಿಸಿದೆ. ಅದರೆ, ಪ್ರಮುಖ ಬೇಡಿಕೆ ಈಡೇರಿದ ಬೆನ್ನಲ್ಲೇ ಬಾಕಿ ಉಳಿದ ಬೇಡಿಕೆಗಳ ಈಡೇರಿಕೆಗೆ ಒತ್ತಾಯ ಕೇಳಿ ಬಂದಿದೆ.

ಕರವಾಳಿಯಲ್ಲಿ ನಡೆಯುತ್ತವೆ 25 ಕಂಬಳ

ಕರವಾಳಿಯಲ್ಲಿ ಒಟ್ಟು 25 ಕಂಬಳಗಳು ನಡೆಯುತ್ತವೆ. ಪ್ರತಿ ಕಂಬಳವನ್ನು ನೇರವಾಗಿ ಒಂದು ಲಕ್ಷ ಜನ ವೀಕ್ಷಿಸುತ್ತಾರೆ. 2020 – 21ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯ 10 ಕಂಬಳಗಳಿಗೆ ತಲಾ 5 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿತ್ತು. ಉಡುಪಿ ಜಿಲ್ಲೆಯಲ್ಲಿ ನಡೆಯುವ 53 ಸಾಂಪ್ರದಾಯಿಕ ಕಂಬಳಗಳಿಗೂ ಅನುದಾನ ಕೋರಲಾಗಿತ್ತು.

ಕಳೆದ ವರ್ಷ 50 ಲಕ್ಷ ರೂ. ಘೋಷಿಸಿದ್ದ ಸರ್ಕಾರ ನಂತರ ಅನುದಾನ ನೀಡಿರಲಿಲ್ಲ. ಹಾಗಾಗಿ ಘೋಷಣೆಯಾದ 50 ಲಕ್ಷ ರೂ. ಹಣ ತುರ್ತಾಗಿ ಬಿಡುಗಡೆ ಮಾಡುವಂತೆ ಕಂಬಳ ಸಮಿತಿ ಒತ್ತಾಯಿಸಿದೆ. ಅದಲ್ಲದೆ ಸಾಂಪ್ರದಾಯಿಕ ಕಂಬಳಗಳಿಗೂ 50 ಲಕ್ಷ ರೂ. ಬಿಡುಗಡೆ ಮಾಡುವಂತೆ ಮನವಿ ಮಾಡಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ದೇವಿ ಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!