spot_img
Saturday, February 14, 2026
spot_img

SBI Recruitment : ಕ್ಲರ್ಕ್‌ ಹುದ್ದೆಗೆ ಅರ್ಜಿ ಆಹ್ವಾನ | ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಉದ್ಯೋಗ ಅರಸುತ್ತಿರುವವರಿಗೆ ಸುವರ್ಣ ಅವಕಾಶ !

ಜನಪ್ರತಿನಿಧಿ (ಮಾಹಿತಿ) : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಜೂನಿಯರ್ ಅಸೋಸಿಯೇಟ್ಸ್ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಆಸಕ್ತಿಯಿದ್ದು, ಅವಕಾಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶ. ಎಸ್‌ಬಿಐನಲ್ಲಿ ಒಟ್ಟು 13,735 ಕ್ಲರ್ಕ್ ಹುದ್ದೆಗಳು ಖಾಲಿಯಿದೆ. ಕರ್ನಾಟಕ ವಲಯದಲ್ಲಿ 50 ಹುದ್ದೆಗಳು ಖಾಲಿಯಿದೆ. ಈಗಾಗಲೇ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಗೊಂಡಿದೆ. ಕ್ಲರ್ಕ್‌ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿ, ವೇತನ, ವಯಸ್ಸಿನ ಮಿತಿ ಬಗ್ಗೆ ಮಾಹಿತಿ ಇಲ್ಲಿದೆ.

ಹುದ್ದೆಗಳ ವಿವರ ಇಲ್ಲಿದೆ :

ಬ್ಯಾಂಕ್ ಹೆಸರು : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ

ಹುದ್ದೆ ಹೆಸರು : ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್‌ ಮತ್ತು ಸೇಲ್ಸ್‌)

ಹುದ್ದೆಗಳ ಸಂಖ್ಯೆ : 13,735

ಕರ್ನಾಟಕದಲ್ಲಿ ಹುದ್ದೆಗಳ ಸಂಖ್ಯೆ : 50

ವೇತನ : 26 ಸಾವಿರ

ಶೈಕ್ಷಣಿಕ ಅರ್ಹತೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಬ್ಯಾಚುಲರ್ ಪದವಿಯನ್ನು ಪಡೆದಿರಬೇಕು. ಅಭ್ಯರ್ಥಿಗಳು ತಾವು ಅರ್ಜಿ ಸಲ್ಲಿಸುತ್ತಿರುವ ರಾಜ್ಯದ ಸ್ಥಳೀಯ ಭಾಷೆಯನ್ನು ಬಲ್ಲವರಾಗಿರಬೇಕು.

ವಯಸ್ಸಿನ ಮಿತಿ
ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ವರ್ಷ ಹಾಗೂ ಗರಿಷ್ಠ ವಯಸ್ಸು 28 ವರ್ಷ ಮೀರಿರಬಾರದು. ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೂ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಅರ್ಜಿ ಶುಲ್ಕ
ಸಾಮಾನ್ಯ, ಒಬಿಸಿ, ಇಡಬ್ಲ್ಯೂಎಸ್ ವರ್ಗದ ಅಭ್ಯರ್ಥಿಗಳು ರೂ 750 ಅರ್ಜಿ ಶುಲ್ಕವನ್ನು ಪಾವತಿಸಬೇಕು. ಪರಿಶಿಷ್ಟ ಜಾತಿ ಹಾಗೂ ಪಂಗಡ, ಅಂಗವಿಕಲ ವರ್ಗ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

ಆಯ್ಕೆ ವಿಧಾನ
ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಭಾಷಾ ಪ್ರಾವಿಣ್ಯತೆ ಆಧಾರದ ಮೇಲೆ ಮೇಲ್ಕಂಡ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ದಿನಾಂಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 07, 2025
ಪೂರ್ವಭಾವಿ ಪರೀಕ್ಷೆಯ ದಿನಾಂಕ: ಫೆಬ್ರವರಿ 2025
ಮುಖ್ಯ ಪರೀಕ್ಷೆಯ ದಿನಾಂಕ: ಮಾರ್ಚ್‌, ಏಪ್ರಿಲ್‌ 2025

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!