Thursday, November 21, 2024

ಕುಂದಾಪುರ ಡಾ| ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಒಂದು ದಿನದ ಅಂತರ್ಜಾಲ ವಿಚಾರ ಸಂಕಿರಣ

ಕುಂದಾಪುರ, ಆ.31: ಡಾ| ಬಿ. ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಆಶ್ರಯದಲ್ಲಿ ವಾಣಿಜ್ಯ ಮತ್ತು ನಿರ್ವಹಣೆಯಲ್ಲಿ ವೃತ್ತಿ ಅವಕಾಶಗಳು ಕುರಿತಾದ ಒಂದು ದಿನದ ಅಂತರ್ಜಾಲ ವಿಚಾರ ಸಂಕಿರಣ ನಡೆಯಿತು.

ಕಾಲೇಜು ಪ್ರಾಂಶುಪಾಲ ಪ್ರೊ.ಕೆ. ಉಮೇಶ ಶೆಟ್ಟಿ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ವಿ. ವಿ. ಸಂಧ್ಯಾ ಕಾಲೇಜು ಸ್ನಾತಕೋತ್ತರ ವಾಣಿಜ್ಯ ವಿಭಾಗದ ಉಪನ್ಯಾಸಕಿ ಕಾವ್ಯಾ ಪಿ.ಹೆಗ್ಡೆ ಅವರು ವಾಣಿಜ್ಯ ಹಾಗೂ ನಿರ್ವಹಣಾ ವಿಭಾಗ ಕೊಡಮಾಡುವ ಕೋರ್ಸುಗಳು ಮತ್ತು ವಿಫುಲ ಉದ್ಯೋಗಾವಕಾಶಗಳ ಜೊತೆ ಜೊತೆಗೆ ವರ್ತಮಾನ ಜಗತ್ತು ಅಪೇಕ್ಷಿಸುವ ಕೌಶಲ್ಯಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿದರು.
ಉಪ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಶೈಲೇಶ್ ಬಿ.ಸಿ. ತಾಂತ್ರಿಕ ಸಂಯೋಜಕರಾಗಿ ಕಾರ್ಯ ನಿರ್ವಹಿಸಿದರು. ವಿಚಾರ ಸಂಕಿರಣದ ಸಂಯೋಜಕಿ ಹಾಗೂ ವಾಣಿಜ್ಯ ಮತ್ತು ನಿರ್ವಹಣ ವಿಭಾಗದ ಮುಖ್ಯಸ್ಥೆ ವೀಣಾ ಭಟ್ ಸ್ವಾಗತಿಸಿ, ನಿರ್ವಹಿಸಿದರು, ಸಹ ಸಂಯೋಜಕ ಸಂತೋಷ ಶೆಟ್ಟಿ ವಂದಿಸಿದರು. ಸುಮಾರು ೩೦೦ಕ್ಕೂ ಮಿಕ್ಕಿ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!