spot_img
Wednesday, April 1, 2026
spot_img

ನೌಕರರ ರಾಜ್ಯ ವಿಮಾ ನಿಗಮದಲ್ಲಿ ಗ್ರೇಡ್ 2 ಹುದ್ದೆಗಳಿಗೆ ಅರ್ಜಿ ಆಹ್ವಾನ : ಇಲ್ಲಿದೆ ಮಾಹಿತಿ

ಜನಪ್ರತಿನಿಧಿ (ಮಾಹಿತಿ) : ನೌಕರರ ರಾಜ್ಯ ವಿಮಾ ನಿಗಮದಲ್ಲಿ (ESIC) ಅಧಿಕಾರಿ ಉದ್ಯೋಗವನ್ನು ಅರಸುತ್ತಿರುವ ಯುವಕ/ಯುವತಿಯರಿಗೆ ಇಲ್ಲಿದೆ ಸುವರ್ಣ ಅವಕಾಶ. ಇದಕ್ಕಾಗಿ, ಇಎಸ್ಐಸಿ ವಿಮಾ ನಿಗಮದಲ್ಲಿ ಗ್ರೇಡ್ 2 ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಆರ್ಜಿ ಆಹ್ವಾನ ಮಾಡಲಾಗಿದೆ. ಈ ಹುದ್ದೆಗಳಿಗೆ ಸಂಬಂಧಿಸಿದ ವಿದ್ಯಾರ್ಹತೆಯನ್ನು ಹೊಂದಿರುವ ಯಾವುದೇ ಅಭ್ಯರ್ಥಿಯು ಇಎಸ್ಐಸಿ ಅಧಿಕೃತ ವೆಬ್‌ಸೈಟ್‌ esic.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಇಎಸ್ಐಸಿ ನೇಮಕಾತಿ 2024 ಮೂಲಕ ಒಟ್ಟು 608 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ, ನೀವು ಜನವರಿ 31, 2025 ರೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ,

ಯಾವೆಲ್ಲ ರಾಜ್ಯಗಳಲ್ಲಿ ನೇಮಕಾತಿ ನಡೆಯಲಿದೆ?
ಆಂಧ್ರಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್ಗಢ, ದೆಹಲಿ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಜಾರ್ಖಂಡ್, ಕರ್ನಾಟಕ, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ಪಂಜಾಬ್, ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಈ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ
ಇಎಸ್ಐಸಿ ಜನರಲ್ (ಯುಆರ್) – 254 ಹುದ್ದೆಗಳು
ಪರಿಶಿಷ್ಟ ಜಾತಿ (ಎಸ್ಸಿ) – 63 ಹುದ್ದೆಗಳು
ಪರಿಶಿಷ್ಟ ಪಂಗಡ (ಎಸ್ಟಿ) – 53 ಹುದ್ದೆಗಳು
ಇತರ ಹಿಂದುಳಿದ ವರ್ಗಗಳು (ಒಬಿಸಿ) – 178 ಹುದ್ದೆಗಳು
ಆರ್ಥಿಕವಾಗಿ ದುರ್ಬಲ ವರ್ಗ (ಇಡಬ್ಲ್ಯೂಎಸ್) – 60 ಹುದ್ದೆಗಳು
ವಿಕಲಚೇತನರು (ಪಿಡಬ್ಲ್ಯೂಬಿಡಿ) – 90 ಹುದ್ದೆಗಳು

ವೇತನ ಶ್ರೇಣಿ ಹಾಗೂ ಆಯ್ಕೆ ಪ್ರಕ್ರಿಯೆ ಹೇಗೆ ?
ಇಎಸ್ಐಸಿಯ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಅಧಿಕೃತ ಅಧಿಸೂಚನೆಯಲ್ಲಿ ನೀಡಲಾದ ಸಂಬಂಧಿತ ಅರ್ಹತೆಗಳನ್ನು ಹೊಂದಿರಬೇಕು. ಅರ್ಜಿ ಸಲ್ಲಿಸಲು ಯೋಜಿಸುತ್ತಿರುವ ಯಾರಾದರೂ ಗರಿಷ್ಠ 35 ವರ್ಷ ವಯಸ್ಸಿನ ಮಿತಿಯನ್ನು ಹೊಂದಿರಬೇಕು.

ಈ ಹುದ್ದೆಗಳಿಗೆ ಆಯ್ಕೆಯಾದ ಯಾವುದೇ ಅಭ್ಯರ್ಥಿಗೆ  ಇತರ ಭತ್ಯೆಗಳೊಂದಿಗೆ 56,100 ರೂ.ಗಳಿಂದ 1,77,500 ರೂ.ಗಳವರೆಗೆ (ಲೆವೆಲ್ -10) ವೇತನವಿರಲಿದ್ದು,  2022 ಮತ್ತು 2023ರ ಕಂಬೈನ್ಡ್ ಮೆಡಿಕಲ್ ಸರ್ವೀಸಸ್ ಎಕ್ಸಾಮಿನೇಷನ್ (ಸಿಎಂಎಸ್ಇ) ಪರೀಕ್ಷೆಯ ಬಹಿರಂಗ ಪಟ್ಟಿಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆ ಪ್ರಕ್ರಿಯೆಯನ್ನು ಆಯಾ ಅಭ್ಯರ್ಥಿಗಳಿಗೆ ಅವರ ನೋಂದಾಯಿತ ಇಮೇಲ್‌ನಲ್ಲಿ ತಿಳಿಸಲಾಗುತ್ತದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!