spot_img
Wednesday, April 1, 2026
spot_img

ಎಕ್ಸಲೆಂಟ್ ಕುಂದಾಪುರ: ಕರಾಟೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ ನವಮಿ ಎಸ್ ಶೆಟ್ಟಿ

ಕುಂದಾಪುರ: ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು, ಸುಣ್ಣಾರಿ, ಕುಂದಾಪುರ ಇಲ್ಲಿನ ವಿದ್ಯಾರ್ಥಿನಿ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಪದವಿ ಪೂರ್ವ ಶಿಕ್ಷಣ ಇಲಾಖೆಯು ನಡೆಸಿದ ೬೮ನೇ ರಾಷ್ಟ್ರೀಯ ಕರಾಟೆ ಸ್ಪರ್ಧೆ 2024-25ರ ಸಾಲಿನ ಈ ಕರಾಟೆ ಸ್ಪರ್ಧೆಯು ಡಿ.23ರಂದು ಮಧ್ಯಪ್ರದೇಶದ ರಾಜ್ಯದ ಇಂದೋರ್‌ನಲ್ಲಿ ಜರುಗಿತು. ಕರ್ನಾಟಕ ತಂಡದ ಪರವಾಗಿ ಎಕ್ಸಲೆಂಟ್ ವಿದ್ಯಾಸಂಸ್ಥೆಯ ನವಮಿ ಎಸ್ ಶೆಟ್ಟಿ ಅವರು 65 ಕೆಜಿ ಕುಮಟೆ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಈಡೀ ಕ್ರೀಡಾವಲಯದಲ್ಲಿ ಕರ್ನಾಟಕ ರಾಜ್ಯವು ಹೆಮ್ಮೆ ಪಡುವಂತೆ ಮಾಡಿದ್ದಾರೆ.

ನವಮಿ ಎಸ್ ಶೆಟ್ಟಿ ಈ ಹಿಂದೆ ನಡೆದಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ಕರ್ನಾಟಕ ಸರ್ಕಾರ ಮತ್ತು ರಾಘವೇಂದ್ರ ಹೈ-ಟೆಕ್ ಪದವಿ ಪೂರ್ವ ಕಾಲೇಜು, ದಾವಣಗೆರೆ ಇದರ ಸಂಯುಕ್ತ ಆಶ್ರಯಲ್ಲಿ ನಡೆದ ರಾಜ್ಯಮಟ್ಟದ ಕರಾಟೆಯ 65 ಕೆಜಿ ಕುಮಟೆ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಈ ಹಿಂದೆ ಆಯ್ಕೆಯಾಗಿರುವುದು ಗಮನಾರ್ಹ. ಈಗ ಈಡೀ ರಾಷ್ಟ್ರದಲ್ಲಿಯೇ ದ್ವಿತೀಯ ಸ್ಥಾನ ಪಡೆದಿರುವುದು ಸಂಸ್ಥೆಯ ಕೀರ್ತಿಯನ್ನು ರಾಷ್ಟ್ರದಲ್ಲಿ ಗುರುತಿಸಿರುವುದು ಅತ್ಯಂತ ಶ್ಲಾಘನೀಯವಾಗಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!