spot_img
Wednesday, April 1, 2026
spot_img

ದಲಿತ ಬಾಲಕನನ್ನು ವಿವಸ್ತ್ರಗೊಳಿಸಿ ಹಲ್ಲೆ, ಮೈಮೇಲೆ ಮೂತ್ರ ವಿಸರ್ಜನೆ | ಮನನೊಂದ ಬಾಲಕ ನೇಣಿಗೆ ಶರಣು !

ಜನಪ್ರತಿನಿಧಿ (ಉತ್ತರ ಪ್ರದೇಶ) : ಹುಟ್ಟು ಹಬ್ಬದ ಪಾರ್ಟಿಯಲ್ಲಿ ಭಾಗಿಯಾಗಿದ್ದ ದಲಿತ ಬಾಲಕನ ಬಟ್ಟೆ ಬಿಚ್ಚಿಸಿ, ಮೈಮೇಲೆ ಮೂತ್ರ ವಿಸರ್ಜನೆ ಮಾಡಿ ಹಲ್ಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಕಪ್ತಂಗಂಜ್‌ ನಲ್ಲಿ ನಡೆದಿರುವುದಾಗಿ ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ. ಈ ಕಾರಣದಿಂದ ಮನನೊಂದ ದಲಿತ ಬಾಲಕ ಆತ್ಮಹತ್ಯಗೆ ಶರಣಾಗಿದ್ದಾನೆ ಎಂದು ವರದಿಯಾಗಿದೆ.

20 ಡಿಸೆಂಬರ್‌ ರಂದು ಸ್ಥಳೀಯರೊಬ್ಬರು ಹುಟ್ಟು ಹಬ್ಬದ ಪಾರ್ಟಿಗೆ ಆಹ್ವಾನಿಸಿದ್ದರು. ಪಾರ್ಟಿಯಲ್ಲಿ ನಾಲ್ವರು ವ್ಯಕ್ತಿಗಳು ಬಾಲಕನನ್ನು ವಿವಸ್ತ್ರಗೊಳಿಸಿ ಕ್ರೂರವಾಗಿ ಥಳಿಸಿರುವುದಾಗಿ ವರದಿಯಾಗಿದೆ. ನಂತರ ಆತನ ಮೈಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ಬಾಲಕನ ಕುಟುಂಬಸ್ಥರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಬಳಿಕ ಘಟನೆಯ ದೃಶ್ಯವನ್ನು ವೀಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡುವುದಾಗಿ ಬೆದರಿಕೆ ಹಾಕಿದ್ದರು ಎಂದೂ ಆರೋಪಿಸಿದ್ದಾರೆ.

ಮನೆಗೆ ಹಿಂತಿರುಗಿದ ಬಾಲಕ ಪಾರ್ಟಿಯಲ್ಲಿ ತನಗಾದ ಅವಮಾನಕರ ಘಟನೆಯನ್ನು ಕುಟುಂಬಸ್ಥರಿಗೆ ವಿವರಿಸಿದ್ದಾನೆ. ಬಳಿಕ ಆತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!