spot_img
Wednesday, April 1, 2026
spot_img

ಕ್ರಿಸ್‌ಮಸ್‌, ಹೊಸ ವರ್ಷಾಚರಣೆ : ಬಿಗಿ ಬಂದೋಬಸ್ತ್‌ ನಿರ್ವಹಿಸುವಂತೆ ಪೊಲೀಸ್‌ ಇಲಾಖೆಗೆ ಪರಮೇಶ್ವರ್‌ ಸೂಚನೆ !

ಜನಪ್ರತಿನಿಧಿ (ಬೆಂಗಳೂರು) : ಕ್ರಿಸ್‌ಮಸ್‌, ಹೊಸ ವರ್ಷಾಚರಣೆ ವೇಳೆ ಬಂದೋಬಸ್ತ್‌ಗೆ ಪೊಲೀಸ್‌ ಇಲಾಖೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಸೂಚನೆ ನೀಡಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಸೂಚಿಸಿದ್ದಾರೆ.

ಕ್ರಿಸ್‌ಮಸ್‌, ಹೊಸ ವರ್ಷಾಚರಣೆಗೆ ಸೂಚನೆಗಳು :

  • ಚರ್ಚ್‌ ಸ್ಟ್ರೀಟ್, ಬ್ರಿಗೇಡ್ ರಸ್ತೆ ಹಾಗೂ ಮಹಾತ್ಮಗಾಂಧಿ ರಸ್ತೆಯಲ್ಲಿ ಆಗಮನ ಹಾಗೂ ನಿರ್ಗಮನ ದ್ವಾರಗಳನ್ನು ಅಳವಡಿಸಬೇಕು.
  • ಗುಪ್ತದಳ ಅಧಿಕಾರಿಗಳ ಜೊತೆಗೆ ಪೊಲೀಸ್ ಅಧಿಕಾರಿಗಳು ನಿರಂತರ ಸಂಪರ್ಕದಲ್ಲಿ ಇರಬೇಕು.
  • ಮಹಿಳಾ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು.
  • ಸಣ್ಣಪುಟ್ಟ ಅನಾಹುತಗಳು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕು.
  • ಹೊಸ ವರ್ಷ ಆಚರಿಸುವವರಿಗೆ ಅಡಚಣೆ ಮಾಡದೇ ಅವರಿಗೆ ಸುರಕ್ಷತೆ ನೀಡಬೇಕು.
  • ತೊಂದರೆ ಉಂಟು ಮಾಡುವ ಕಿಡಿಗೇಡಿಗಳ ಮೇಲೆ ನಿಗಾವಹಿಸಿ ಕ್ರಮ ಜರುಗಿಸಬೇಕು.
  • ಮಾಲ್‌ಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು.
  • ಪೊಲೀಸ್ ಸಿಬ್ಬಂದಿ ಹೆಲ್ಕೆಟ್ ಹಾಗೂ ಲಾಠಿಯನ್ನು ಹೊಂದಿರಬೇಕು.
  • ಎಲ್ಲ ಅಧಿಕಾರಿಗಳು ಸರ್ವೀಸ್ ರಿವಾಲ್ವರ್ ಅನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು.
  • ಹೆಣ್ಣು ಮಕ್ಕಳನ್ನು ಚುಡಾಯಿಸುವವರು ಹಾಗೂ ದಾಂಧಲೆ ನಡೆಸುವವರನ್ನು ಕೂಡಲೇ ವಶಕ್ಕೆ ಪಡೆದುಕೊಂಡು ಕ್ರಮ ತೆಗೆದುಕೊಳ್ಳಬೇಕು.
  • ರಸ್ತೆ ಮೇಲೆ ಬಾಟಲಿ ಒಡೆದು ದಾ೦ಧಲೆ ನಡೆಸುವವರನ್ನು ತಕ್ಷಣವೇ ವಶಕ್ಕೆ ಪಡೆದುಕೊಳ್ಳಬೇಕು.
  • ಹೆಚ್ಚಿನ ಜನರು ಜಮಾವಣೆ ಆಗುವ ಸ್ಥಳದಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮರಾ ಅಳವಡಿಕೆ ಮಾಡಿರಬೇಕು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!