spot_img
Wednesday, April 1, 2026
spot_img

ಕುಂದಾಪುರದ ಬೀಜಾಡಿಯ ಯೋಧ ಜಮ್ಮು ಕಾಶ್ಮೀರದ ಪೂಂಚ್ ನಲ್ಲಿ ಹುತಾತ್ಮ | ಅನೂಪ್ ಸಾವಿಗೆ ಆವರಿಸಿದ ಸ್ಮಶಾನ ಮೌನ !

ಜನಪ್ರತಿನಿಧಿ (ಉಡುಪಿ) : ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ ವಾಹನ  ಪಲ್ಟಿಯಾಗಿ ಕರ್ನಾಟಕದ ಮೂವರು ಯೋಧರು ಸೇರಿ ಮರಾಠಾ ರೆಜಮೇಂಟನ ಒಟ್ಟು ಐವರು ಭಾರತೀಯ ಸೈನಿಕರು ಹುತಾತ್ಮರಾಗಿದ್ದಾರೆ. ಮಂಗಳವಾರ ಪೂಂಚ್ ಜಿಲ್ಲೆಯ ಮೆಂಧರ್ ಪ್ರದೇಶದ ಬಲ್ನೋಯಿ ಬಳಿ ಸೇನಾ ವಾಹನವೊಂದು ದಾರಿ ತಪ್ಪಿ ಕಂದಕಕ್ಕೆ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಹಲವು ಯೋಧರು ಗಾಯಗೊಂಡಿದ್ದಾರೆ.

ನಿನ್ನೆ(ಮಂಗಳವಾರ) ಪೂಂಚ್ ಪ್ರದೇಶದಲ್ಲಿ ಮಂಜುಗಡ್ಡೆಯಲ್ಲಿ ಜಾರಿ 300 ಅಡಿ ಕಂದಕಕ್ಕೆ ಸೇನಾ ವಾಹನ ಬಿದ್ದಿತ್ತು. ಹುತಾತ್ಮರಾದ ಯೋಧರ ಪೈಕಿ ಉಡುಪಿ ಮೂಲದ ಯೋಧರೊಬ್ಬರು ಸಹ ಸೇರಿದ್ದು, ಇದೀಗ ಆ ಯೋಧನ ಮನೆಯಲ್ಲಿ ಸೂತಕದ ವಾತಾವರಣ ಮಡುಗಟ್ಟಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಯೋಧ ಅನೂಪ್ ಎಂಬುವವರು ಈ ದುರ್ಘಟನೆಯಲ್ಲಿ ಸಾವನ್ನಪ್ಪಿದ್ದು, ಇವರ ಜೊತೆಗೆ ಬೆಳಗಾವಿಯ ಪಂತ ಬಾಳೆಕುಂದ್ರಿಯ ದಯಾನಂದ ತಿರಕನ್ನವರ್ ಮತ್ತು ಬಾಗಲಕೋಟೆ ಜಿಲ್ಲೆಯ ಮಹೇಶ್ ನಾಗಪ್ಪ ಮಾರಿಗೊಂಡ(25) ಸಾವನ್ನಪ್ಪಿದ್ದಾರೆ.

ಮೃತರಲ್ಲಿ ಉಡುಪಿ ಜಿಲ್ಲೆ, ಕುಂದಾಪುರ ತಾಲೂಕು ಬಿಜಾಡಿಯ ಯೋಧ ಅನೂಪ್ (33) ಅವರು ಕಳೆದ 13 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಎರಡು ವರ್ಷದ ಪುಟ್ಟ ಮಗು ಅವರಿಗಿತ್ತು. ಇದೀಗ ಅವರ ಮನೆಯಲ್ಲಿ ಸೂತಕದ ಛಾಯೆ ಅವರಿಸಿದೆ. ಪತ್ನಿ, ಪುಟ್ಟ ಮಗು ಮತ್ತು ಕುಟುಂಬಿಕರನ್ನು ಅಗಲಿರುವ ಅನೂಪ್ ಅವರ ಮನೆಯಲ್ಲಿ ಸ್ಮಶಾನ ಮೌನ ಆವರಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!