spot_img
Thursday, April 2, 2026
spot_img

ಮೊಳಹಳ್ಳಿ ವ್ಯವಸಾಯ ಸೇವಾ ಸಂಘದ ಚುನಾವಣೆ: ಎಲ್ಲಾ ಸ್ಥಾನ ಕಾಂಗ್ರೆಸ್ ಬೆಂಬಲಿತ ಗುಂಪಿಗೆ

ಕುಂದಾಪುರ, ಡಿ.25: (ಜನಪ್ರತಿನಿಧಿ ವಾರ್ತೆ) ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಡಿಸೆಂಬರ್ 25ರಂದು ನಡೆದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಎಂ. ಮಹೇಶ್ ಹೆಗ್ಡೆ ನೇತೃತ್ವದ ಕಾಂಗ್ರೆಸ್ ಬೆಂಬಲಿಯ ಗುಂಪು 13ಸ್ಥಾನಗಳನ್ನು ಪಡೆದುಕೊಂಡಿದೆ. ಇಂದು 12 ಸ್ಥಾನಗಳಿಗೆ ಚುನಾವಣೆ ನಡೆದಿದ್ದು 1 ಸ್ಥಾನ ಅವಿರೋಧ ಆಯ್ಕೆಯಾಗಿದೆ.

ಸಾಮಾನ್ಯ ಕ್ಷೇತ್ರದಿಂದ ಮಹೇಶ ಹೆಗ್ಡೆ ಮೊಳಹಳ್ಳಿ, ಎಚ್.ಹರಿಪ್ರಸಾದ್ ಶೆಟ್ಟಿ, ಜಗನ್ನಾಥ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ಲವಕರ ಶೆಟ್ಟಿ, ಅನಿಲ್ ಕುಮಾರ್ ಶೆಟ್ಟಿ, ಶ್ರೀಮತಿ ಇಂದಿರಾ ಯು ಶೆಟ್ಟಿ ಆಯ್ಕೆಯಾದರು. ಮಹಿಳಾ ಮೀಸಲು ಸ್ಥಾನದಿಂದ ಶ್ರೀಮತಿ ವಾಣಿ ಆರ್ ಶೆಟ್ಟಿ, ಶ್ರೀಮತಿ ಚೈತ್ರ ಅಡಪ ಆಯ್ಕೆಯಾದರು. ಹಿಂದುಳಿದ ವರ್ಗ ‘ಎ’ ಮೀಸಲು ಕ್ಷೇತ್ರ್ರದಿಂದ ದಿನೇಶ ಮೊಗವೀರ ಆಯ್ಕೆಯಾದರೆ, ಹಿಂದುಳಿದ ವರ್ಗ ‘ಬಿ’ ಮೀಸಲು ಷೇತ್ರದುಂದ ಉಮೇಶ ಶೆಟ್ಟಿ ಆಯ್ಕೆಯಾದರು. ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಿಂದ ಗಣೇಶ ಆಯ್ಕೆಯಾದರು. ಈ ಹಿಂದೆಯೇ ಪರಿಶಿಷ್ಟ ಪಂಗಡದ ಮೀಸಲು ಕ್ಷೇತ್ರಕ್ಕೆ ಗಿರೀಶ್ ಅವಿರೋಧ ಆಯ್ಕೆಯಾಗಿದ್ದರು.

ಚುನಾವಣೆ ಶಾಂತಿಯುತವಾಗಿ ನೆಡೆದಿದ್ದು ಚುನಾವಣಾ ಅಧಿಕಾರಿ ಸುನೀಲ್ ಕುಮಾರ್ ಸಿ,ಎಂ. (ಸಹಕಾರ ಅಭಿವೃದ್ಧಿ ಅಧಿಕಾರಿ) ಚುನಾವಣೆಯನ್ನು ನಡೆಸಿಕೊಟ್ಟರು. ಚುನಾವಣೆಯಲ್ಲಿ ಸಹಕರಿಸಿದ ಹಾಲಿ ಅಧ್ಯಕ್ಷ ಎಂ.ಮಹೇಶ್ ಹೆಗ್ಡೆ ಕೃತಜ್ಞತೆ ಅರ್ಪಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!