spot_img
Sunday, February 15, 2026
spot_img

ಅಪ್ಪಣ್ಣ ಹೆಗ್ಡೆ ಆತ್ಮವಿಶ್ವಾಸದ ಪ್ರತೀಕ-ಡಾ.ಡಿ.ವೀರೇಂದ್ರ ಹೆಗ್ಗಡೆ

 

ಕುಂದಾಪುರ: ಬಸ್ರೂರಿನ ಅಪ್ಪಣ್ಣ ಹೆಗ್ಡೆಯವರು ಆತ್ಮವಿಶ್ವಾಸದ ಪ್ರತೀಕವಿದ್ದಂತೆ ಎಲ್ಲ ಸಂದರ್ಭದಲ್ಲೂ ಅಧಿಕಾರಯುತವಾಗಿ, ಗಟ್ಟಿ ಸ್ವರದಲ್ಲಿ ಮಾತನಾಡುತ್ತಾರೆ. ಉತ್ತಮ ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಂಡವರು. ಅವರು ಅಜಾತಶತ್ರು, ಸಹನೆ, ತಾಳ್ಮೆ, ಪರೋಪಕಾರಿ ಮನೋಭಾವದಿಂದ ಅವರು ಮೇರುಸ್ಥಾನ ಪಡೆದಿದ್ದಾರೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆ ಹೇಳಿದರು.

ಅವರು ಡಿ.24ರ ಸಂಜೆ ವಕ್ವಾಡಿಯ ಗುರುಕುಲ ಶಿಕ್ಷಣ ಸಂಸ್ಥೆ ಆವರಣದಲ್ಲಿ ಬಿ. ಅಪ್ಪಣ್ಣ ಹೆಗ್ಡೆ ಜನ್ಮದಿನೋತ್ಸವ ಸಮಿತಿ ಹಾಗೂ ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರತಿಷ್ಠಾನದ ವತಿಯಿಂದ ಧಾರ್ಮಿಕ ಮುಂದಾಳು ಬಿ. ಅಪ್ಪಣ್ಣ ಹೆಗ್ಡೆಯವರಿಗೆ 90ನೇ ಜನ್ಮ ದಿನದ ಪ್ರಯುಕ್ತ ಸಾರ್ವಜನಿಕ ಗೌರವ ಸಮರ್ಪಿಸಿ ಮಾತನಾಡಿದರು.

ಅಪ್ಪಣ್ಣ ಹಾಗೂ ಅಣ್ಣಪ್ಪ ಎರಡೂ ಹೆಸರಲಿನಲ್ಲಿರುವ ಪದಗಳು ಒಂದೇ. ಅಪ್ಪಣ್ಣ ಹೆಗ್ಡೆಯವರ ವ್ಯಕ್ತಿತ್ವವೂ ಕೂಡ ಅಷ್ಟೇ. ಇನ್ನೊಬ್ಬರಿಗೆ ಸ್ಪಂದಿಸುವ ಮನೋಭಾವ ಅವರದ್ದು. ಧಾರ್ಮಿಕ ಕ್ಷೇತ್ರದಲ್ಲಿ ಅವರ ಸೇವೆ ಅನನ್ಯವಾದುದು ಎಂದರು.

ಈ ಸಂದರ್ಭದಲ್ಲಿ ಬಸ್ರೂರು ಅಪ್ಪಣ್ಣ ಹೆಗ್ಡೆ ಶಿಕ್ಷಣ ಪ್ರಶಸ್ತಿಯನ್ನು ವಿಶ್ರಾಂತ ಕುಪತಿ ಡಾ. ಬಿ.ಎ. ವಿವೇಕ ರೈ ಅವರಿಗೆ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಇದೊಂದು ಅಪೂರ್ವವಾದ ಸಂಗಮ. ಇಂತಹ ಪುಣ್ಯ ಪುರುಷರಿರುವ ವೇದಿಕೆ ಮತ್ತೆಂದೂ ಸಿಗಲು ಸಾಧ್ಯವಿಲ್ಲ. ಹೆಗ್ಡೆಯವರ ಹೆಸರಿನ ಪ್ರಶಸ್ತಿ ಸಿಕ್ಕಿರುವುದು ಮರೆಯಲಾಗದ ಕ್ಷಣ ಎಂದು ಅಭಿಪ್ರಾಯ ಪಟ್ಟರು.

ಇದೇ ವೇಳೆ ಕುಂದಾಪುರ ಹಾಗೂ ಬೈಂದೂರು ತಾಲೂಕಿನ 250ಕ್ಕೂ ಮಿಕ್ಕಿ ವಿದ್ಯಾರ್ಥಿಗಳಿಗೆ 10ಲಕ್ಷ ರೂ.ಗೂ ಮಿಕ್ಕಿ ದತ್ತಿನಿಧಿ ವಿದ್ಯಾರ್ಥಿ ವೇತನ, ಅಶಕ್ತರಿಗೆ 2.90ಲಕ್ಷ ರೂ. ವೈದ್ಯಕೀಯ ನೆರವು ಹಸ್ತಾಂತರಿಸಲಾಯಿತು. ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರತಿಷ್ಠಾನದ ಅಧ್ಯಕ್ಷ ರಾಮಕಿಶನ್ ಹೆಗ್ಡೆ ದತ್ತಿನಿಧಿ ಕುರಿತು ಪ್ರಸ್ತಾವಿಕ ಮಾತುಗಳನ್ನಾಡಿದರು.

ಆಳ್ವಾಸ್ ಸಂಸ್ಥೆಯ ಅಧ್ಯಕ್ಷರಾದ ಡಾ. ಮೋಹನ್ ಆಳ್ವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ, ಯಶ್‌ಪಾಲ್ ಸುವರ್ಣ, ರಾಜೇಗೌಡ, ಮಾಜಿ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಬಿ.ಎಂ. ಸುಕುಮಾರ್ ಶೆಟ್ಟಿ ಸಹಿತ ಮೊದಲಾದ ಗಣ್ಯಮಾನ್ಯರು ಶುಭ ಹಾರೈಸಿದರು. ಗುರುಕುಲ ಶಿಕ್ಷಣ ಸಂಸ್ಥೆಯ ಜಂಟಿ ಕಾರ್ಯನಿರ್ವಾಹಕ ನಿರ್ದೇಶಕ ಬಾಂಡ್ಯ ಸುಭಾಶ್ಚಂದ್ರ ಶೆಟ್ಟಿ, ರಾಮ್‌ರತನ್ ಹೆಗ್ಡೆ, ಬಿ ಅಪ್ಪಣ್ಣ ಹೆಗ್ಡೆ ಜನ್ಮ ದಿನೋತ್ಸವ ಸಮಿತಿ ಪದಾಧಿಕಾರಿಗಳು, ಮತ್ತಿತರು ಉಪಸ್ಥಿತರಿದ್ದರು.

ಗುರುಕುಲ ಶಿಕ್ಷಣ ಸಂಸ್ಥೆಯ ಜಂಟಿ ಕಾರ್ಯನಿರ್ವಾಹಕಿ ಅನುಪಮಾ ಎಸ್. ಶೆಟ್ಟಿ ಸ್ವಾಗತಿಸಿ, ಸಮಿತಿಯ ವಸಂತ್ ಗಿಳಿಯಾರು ಪ್ರಸ್ತಾವಿಸಿದರು. ಉದಯ ಶೆಟ್ಟಿ ಪಡುಕೆರೆ ಪ್ರಶಸ್ತಿ ಪತ್ರ ವಾಚಿಸಿದರು. ನಿವೃತ್ತ ಮುಖ್ಯೋಪಾಧ್ಯಾಯ ಆರ್. ದಿನಕರ ಶೆಟ್ಟಿ ಫಲಾನುಭವಿಗಳ ಪಟ್ಟಿ ವಾಚಿಸಿದರು. ಕೆ.ಸಿ. ರಾಜೇಶ್ ನಿರೂಪಿಸಿ, ಕಲಾಕೇತ್ರ ಕುಂದಾಪುರದ ಬಿ. ಕಿಶೋರ್ ಕುಮಾರ್ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!