spot_img
Friday, December 27, 2024
spot_img

ಆತ್ರಾಡಿ ವಿಜಯ ಮಕ್ಕಳ ಕೂಟ ಆಂಗ್ಲ ಮಾಧ್ಯಮ ಶಾಲೆ: ವಾರ್ಷಿಕ ಕ್ರೀಡಾಕೂಟ

ವಂಡ್ಸೆ: ವಿಜಯ ಮಕ್ಕಳ ಕೂಟ ಆಂಗ್ಲ ಮಾಧ್ಯಮ ಶಾಲೆ ಆತ್ರಾಡಿಯಲ್ಲಿ ಡಿ.21 ರಂದು ವಾರ್ಷಿಕ ಕ್ರೀಡಾಕೂಟ ನೆರವೇರಿತು.

ಕ್ರೀಡಾಕೂಟದ ಉದ್ಘಾಟನೆಯನ್ನು ಸಂಜಯ ಗಾಂಧಿ ಪ್ರೌಢಶಾಲೆ ಅಂಪಾರು ಇಲ್ಲಿನ ನಿವೃತ್ತ ದೈಹಿಕ ಶಿಕ್ಷಕರಾದ ಬಾಲಕೃಷ್ಣ ಶೆಟ್ಟಿ ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿ.ಎಂ.ಕೆ ಗವರ್ನಿಂಗ್ ಕೌನ್ಸಿಲ್ ಅಧ್ಯಕ್ಷರಾದ ಬಿ.ಎನ್ ಶೆಟ್ಟಿ ವಹಿಸಿದ್ದರು. ಧ್ವಜಾರೋಹಣವನ್ನು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮಾಜಿ ಧರ್ಮದರ್ಶಿ ವಂಡಬಳ್ಳಿ ಜಯರಾಮ ಶೆಟ್ಟಿ ನೆರವೇರಿಸಿದರು. ಕ್ರೀಡಾವಂದನೆಯನ್ನು ನಿವೃತ್ತ ಮುಖ್ಯೋಪಾಧ್ಯಾಯರಾದ ರಾಜೀವ ಶೆಟ್ಟಿ ನೆರವೇರಿಸಿದರು.

ಈ ಸಂದರ್ಭದಲ್ಲಿ ನಿವೃತ್ತ ದೈಹಿಕ ಶಿಕ್ಷಕರಾದ ಬಾಲಕೃಷ್ಣ ಶೆಟ್ಟಿಯವರನ್ನು ಸನ್ಮಾನಿಸಲಾಯಿತು. ಸಂಸ್ಥೆಯ ಸಂಚಾಲಕರಾದ ಸುಭಾಶ್ಚಂದ್ರ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯೋಪಾಧ್ಯಾಯಿನಿ ದೀಪಿಕಾ ಸುಭಾಸ್ ಸ್ವಾಗತಿಸಿದರು. ಸ.ಹಿ.ಪ್ರಾ ಶಾಲೆ ಸೆಳ್ಕೋಡು ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕರಾದ ಸಂತೋಷ ಹಾಗೂ ಅರ್ಥಶಾಸ್ತ್ರ ಉಪನ್ಯಾಸಕರಾದ ಮಂಜುನಾಥ ಹಾಗೂ ವಿ.ಎಂ.ಕೆ ದೈಹಿಕ ಶಿಕ್ಷಣ ಶಿಕ್ಷಕರಾದ ವಿಶ್ವನಾಥ ಕ್ರೀಡಾ ಚಟುವಟಿಕೆ ನೆರವೇರಿಸಿದರು. ವಿದ್ಯಾರ್ಥಿನಿಯರಾದ ತನ್ವಿ ಹಾಗೂ ಅಂಕಿತಾ ನಿರೂಪಿಸಿದರು. ವಿದ್ಯಾರ್ಥಿನಿ ಗಮನ್ಯಾ ವಂದಿಸಿದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!