spot_img
Wednesday, April 1, 2026
spot_img

ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ತನ್ವಿತಾ ವಿ. ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ಆಯ್ಕೆ

ಡಾ.ಶಿವರಾಮ ಕಾರಂತ ಪ್ರತಿಷ್ಠಾನ(ರಿ.) ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ (ರಿ.) ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ, ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ಕೊಡಮಾಡುವ ನಾಲ್ಕನೇ ವರ್ಷದ ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ವಿಶೇಷ ಸಾಧಕರ ವಿಭಾಗದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ  ಕುಮಾರಿ ತನ್ವಿತಾ  ವಿಶೇಷ ಪುರಸ್ಕಾರಕ್ಕೆ ಆಯ್ಕೆಯಾಗಿರುತ್ತಾರೆ.
ತನ್ವಿತಾ ಪ್ರೌಢ ಶಿಕ್ಷಣದ ಸಮಯದಲ್ಲಿ ಯೋಗ ಸ್ಪರ್ಧೆಯಲ್ಲಿ ರಾಷ್ಟ್ರ,ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ  ಭಾಗವಹಿಸಿ ಹಲವಾರು ಪ್ರಶಸ್ತಿಗಳನ್ನು
ಪಡೆದಿರುತ್ತಾಳೆ.ಈ ಸಾಧನೆಯನ್ನು ಪರಿಗಣಿಸಿ,ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರವನ್ನು ಕೋಟದ ಡಾ.ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ಡಿ.28 ರಂದು ಮಧ್ಯಾಹ್ನ 2.30 ಗಂಟೆಗೆ ಪ್ರದಾನ ಮಾಡಲಾಗುವುದೆಂದು ಡಾ. ಶಿವರಾಮ ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷರಾದ  ಆನಂದ್ ಸಿ ಕುಂದ‌ರ್ ರವರು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!