spot_img
Sunday, February 15, 2026
spot_img

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಕಾರ್ಯಕರ್ತೆಯರ ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದೆ | ವೇತನ ಹೆಚ್ಚಳದ ಬಗ್ಗೆ ಸಿಎಂ ಜೊತೆ ಚರ್ಚೆ

ಜನಪ್ರತಿನಿಧಿ (ಬೆಳಗಾವಿ) : ಅಂಗನವಾಡಿ ಕಾರ್ಯಕರ್ತರು ಸರ್ಕಾರದ ಮುಂದಿಟ್ಟಿರುವ ಬೇಡಿಕೆಗಳು ನ್ಯಾಯಸಮ್ಮತವಾಗಿದ್ದು, ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗಳನ್ನು ಈಗಾಗಲೇ ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದ ಮುಂಭಾಗದ ಕೊಂಡಸಕೊಪ್ಪ ಬಳಿ ನಡೆದ ಅಂಗನವಾಡಿ ನೌಕರರ ಬೆಳಗಾವಿ ಚಲೋ ಪ್ರತಿಭಟನೆಯ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಸಚಿವರು, ಗೌರವಧನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಅನ್ನಪೂರ್ಣ ದೇವಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ ಎಂದರು.

ಅಂಗನವಾಡಿ ಕಾರ್ಯಕರ್ತರಿಗೆ ವಿಮಾ ಯೋಜನೆ ಜಾರಿ, ವೇತನ ಪರಿಷ್ಕರಣೆ, ಮೊಟ್ಟೆ ದರ ಪರಿಷ್ಕರಣೆ ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಬದ್ಧವಾಗಿದೆ ಎಂದು ಸಚಿವರು ಹೇಳಿದರು.

ಗೃಹಲಕ್ಷ್ಮೀ ಯೋಜನೆಯನ್ನು ನಮ್ಮ ಇಲಾಖೆಯಿಂದ ಜಾರಿಗೆ ತರುವ ಮೂಲಕ ಬಲಿಷ್ಠರಾಗಿದ್ದೇವೆ. ವೇತನ ಹೆಚ್ಚಳ ಏರಿಕೆ ಸಂಬಂಧ ಮುಖ್ಯಮಂತ್ರಿಗಳ ಜೊತೆ ಮಾತನಾಡುವೆ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳಾದ ಡಾ.ಶಾಮ್ಲಾ ಇಕ್ಬಾಲ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕರಾದ ಎನ್.ಸಿದ್ದೇಶ್ವರ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್‌, ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ವರಲಕ್ಷ್ಮೀ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!