spot_img
Sunday, February 15, 2026
spot_img

ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಚುನಾವಣೆ: ಟಿ.ನಾರಾಯಣ ಹೆಗ್ಡೆ ನೇತೃತ್ವದ ತಂಡಕ್ಕೆ ಪೂರ್ಣ ಸ್ಥಾನ

ಬೈಂದೂರು, ಡಿ.26: (ಜನಪ್ರತಿನಿಧಿ ವಾರ್ತೆ) ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ನಾರಾಯಣ ಹೆಗ್ಡೆ ನೇತೃತ್ವದ ತಂಡ ಎಲ್ಲಾ 13 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.
ಇಂದು (ಡಿ.26) ಸಂಘಕ್ಕೆ ಚುನಾವಣೆ ನಡೆದಿತ್ತು. ತೀವ್ರ ಪೈಪೋಟಿ ಕಂಡು ಬಂದಿತ್ತು.
ಸಾಮಾನ್ಯ ಕ್ಷೇತ್ರದಿಂದ ಟಿ.ನಾರಾಯಣ ಹೆಗ್ಡೆ, ಅರುಣಕುಮಾರ್ ಶೆಟ್ಟಿ, ಗುರುರಾಜ, ವಸಂತ ಕುಮಾರ್ ಶೆಟ್ಟಿ, ವೆಂಕಟ ದೇವಾಡಿಗ, ಸದಾಶಿವ ಶೇರಿಗಾರ್, ಹೆರಿಯ ದೇವಾಡಿಗ ಆಯ್ಕೆಯಾಗಿದ್ದಾರೆ.
ಮಹಿಳಾ ಮೀಸಲು ಕ್ಷೇತ್ರದಿಂದ ಜ್ಯೋತಿ ಪೂಜಾರಿ, ಎಚ್.ವಿಜಯ ಶೇರಿಗಾರ್ ಆಯ್ಕೆಯಾಗಿದ್ದಾರೆ.
ಹಿಂದುಳಿದ ವರ್ಗ ‘ಎ’ ಕ್ಷೇತ್ರದಿಂದ ಚಿಕ್ಕು ಪೂಜಾರಿ, ಹಿಂದುಳಿದ ವರ್ಗ ‘ಬಿ’ ಕ್ಷೇತ್ರದಿಂದ ನಾಗರಾಜ ಶೆಟ್ಟಿ ಆಯ್ಕೆಯಾಗಿದ್ದಾರೆ.
ಪರಿಶಿಷ್ಟ ಜಾತಿ ಕ್ಷೇತ್ರದಿಂದ ಸತೀಶ, ಪರಿಶಿಷ್ಟ ಪಂಗಡ ಕ್ಷೇತ್ರದಿಂದ ಶಂಕರ ನಾಯ್ಕ ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿಯಾಗಿ ಎಂ.ಸಿ ಸ್ವಾಮಿ ಚುನಾವಣೆ ಪ್ರಕ್ರಿಯೆ ನಡೆಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತಾಪಚಂದ್ರ ಶೆಟ್ಟಿ ಸಹಕರಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!