spot_img
Tuesday, January 14, 2025
spot_img

ದೇಶದ ಆರ್ಥಿಕ ಸುಧಾರಣೆಗಳ ದಿಟ್ಟ ಹೆಜ್ಜೆಯ ಹರಿಕಾರ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಸ್ತಂಗತ !

ಜನಪ್ರತಿನಿಧಿ(ನವ ದೆಹಲಿ) : ತೀವ್ರ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಇಂದು(ಗುರುವಾರ) ಸಂಜೆ ವೇಳೆಗೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮನ್‌ಮೋಹನ್‌ ಸಿಂಗ್‌ (92) ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಸಿಂಗ್ ನಿಧನದ ಬಗ್ಗೆ ಉಂಟಾದ ಗೊಂದಲ !?

ಈ ಬಗ್ಗೆ ರಾಬರ್ಟ್‌ ವಾದ್ರಾ ಟ್ವೀಟ್ ಮಾಡಿದ್ದು, “ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಬಗ್ಗೆ ತಿಳಿದು ನನಗೆ ತುಂಬಾ ದುಃಖವಾಗಿದೆ. ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ನನ್ನ ಆಳವಾದ ಸಂತಾಪಗಳು. ನಮ್ಮ ದೇಶಕ್ಕೆ ನೀವು ಮಾಡಿದ ಸೇವೆಗೆ ಧನ್ಯವಾದಗಳು. ನಿಮ್ಮ ಆರ್ಥಿಕ ಕ್ರಾಂತಿಗಾಗಿ ನೀವು ಯಾವಾಗಲೂ ನೆನಪಿನಲ್ಲಿರುತ್ತೀರಿ ಮತ್ತು ಪ್ರಗತಿಪರ ಬದಲಾವಣೆಗಳನ್ನು ನೀವು ದೇಶಕ್ಕೆ ತಂದಿದ್ದೀರಿ’ ಎಂದು ಬರೆದುಕೊಂಡಿದ್ದರು.

ಟ್ವೀಟ್ ಮಾಡಿದ ಕೆಲವು ಹೊತ್ತಲ್ಲೇ ಅವರು ಡಿಲೀಟ್ ಮಾಡಿದ್ದರು. ಆದಾಗ್ಯೂ ಇದನ್ನು ಎಎನ್‌ಐ ಪೋಸ್ಟ್‌ ಮಾಡಿದೆ. ವಯನಾಡ್‌ ಸಂಸದೆ ಪ್ರಿಯಾಂಕಾ ಗಾಂಧಿ ಕೂಡ ಏಮ್ಸ್‌ ಆಸ್ಪತ್ರೆಗೆ ಆಗಮಿಸಿದ್ದಾರೆ. ಏಮ್ಸ್‌ ಆಸ್ಪತ್ರೆ ಅಧಿಕೃತವಾಗಿ ಘೋಷಣೆ ಮಾಡುವ ಮುನ್ನವೇ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಸುಧಾಕರ್‌ ಮನಮೋಹನ್‌ ಸಿಂಗ್‌ ನಿಧನದ ಬಗ್ಗೆ ಸುದ್ದಿಗಳನ್ನು ಹಂಚಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಒಂದಿಷ್ಟು ಗೊಂದಲಗಳು ಸೃಷ್ಟಿಯಾಗಿತ್ತು. ಬಳಿಕ ಕಾಂಗ್ರೆಸ್‌ ಮುಖವಾಣಿ ನ್ಯಾಷನಲ್‌ ಹೆರಾಲ್ಡ್‌ ಈ ಸುದ್ದಿಯನ್ನು ಅಧಿಕೃತವಾಗಿ ಘೋಷಣೆ ಮಾಡಿದೆ.

ಆರ್ಥಿಕ ಸುಧಾರಣೆಯ ಹರಿಕಾರ ಸಿಂಗ್ !

ಎರಡು ಬಾರಿ ಪ್ರಧಾನಿಯಾಗಿ ಹಾಗೂ ಸಂಸತ್ತಿನ ಮೇಲ್ಮನೆಯಲ್ಲಿ 33 ವರ್ಷಗಳ ಸುಧೀರ್ಘ ಸೇವೆ ಸಲ್ಲಿಸಿದ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರು ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಜವಾಹರಲಾಲ್ ನೆಹರು, ಇಂದಿರಾ ಗಾಂಧಿ ಮತ್ತು ನರೇಂದ್ರ ಮೋದಿ ನಂತರ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ನಾಲ್ಕನೇ ಪ್ರಧಾನಿ ಎನಿಸಿಕೊಂಡಿದ್ದಾರೆ.

ಸಿಂಗ್ ಅವರು ಪತ್ನಿ ಗುರುಶರಣ್ ಕೌರ್ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. 1991 ರಲ್ಲಿ ರಾಜ್ಯಸಭೆಗೆ ಪ್ರವೇಶ ಮಾಡುವ ತಮ್ಮ ರಾಜಕೀಯ ಪಯಣ ಆರಂಭಿಸಿದ್ದ ಸಿಂಗ್, 2024ರ ಏಪ್ರಿಲ್​ನಲ್ಲಿ ಅವರ ರಾಜ್ಯಸಭೆ ಅಧಿಕಾರವಧಿ ಅಂತ್ಯವಾಗಿತ್ತು. ಈ ಮೂಲಕ ಅವರು ಸಂಸತ್ತಿನ ಮೇಲ್ಮನೆಯಲ್ಲಿ 33 ವರ್ಷಗಳ ಕಾಲ ಸದಸ್ಯರಾಗಿ ಇದ್ದರು.

ದೇಶದ ಆರ್ಥಿಕ ಸುಧಾರಣೆಗಳ ದಿಟ್ಟ ಹೆಜ್ಜೆ ಕೈಗೊಂಡು, ಆಧುನಿಕ ಭಾರತದ ಆರ್ಥಿಕತೆಯ ರೂವಾರಿ ಎನಿಸಿದ್ದ ಸಿಂಗ್, 1991ರ ಅಕ್ಟೋಬರ್‍ನಲ್ಲಿ ಮೊದಲ ಬಾರಿಗೆ ರಾಜ್ಯಸಭೆ ಪ್ರವೇಶಿಸಿದ್ದರು. ಅವರು 1991ರಿಂದ 1996ರವರೆಗೆ ನರಸಿಂಹ ರಾವ್ ಸಂಪುಟದಲ್ಲಿ ಹಣಕಾಸು ಸಚಿವರಾಗಿದ್ದರು. ಬಳಿಕ 2004 ರಿಂದ 2014ರವರೆಗೆ ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ಪ್ರತಿಪಕ್ಷಗಳ ನಾಯಕರ ಬಾಯಿಂದಲೂ ದೇಶದ ಉತ್ತಮ ಆರ್ಥಿಕ ಪರಿಣಿತ ಎಂದು ಕರೆಸಿಕೊಂಡಿರುವುದು ಅವರ ಹೆಚ್ಚುಗಾರಿಕೆ.

 ಬೆಳಗಾವಿ ಅಧಿವೇಶನ ಶತಮಾನೋತ್ಸವ ಕಾರ್ಯಕ್ರಮ ಮುಂದಕ್ಕೆ !?
ಇನ್ನು, ಸಿಂಗ್ ನಿಧನದ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಕಾಂಗ್ರೆಸ್ ನಾಯಕರು ದೆಹಲಿಗೆ ತೆರಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ನಾಳೆಯಿಂದ ಆರಂಭವಾಗಲಿರುವ ಬೆಳಗಾವಿ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಮುಂದೂಡಲಾಗುತ್ತದೆಯೇ ಎನ್ನುವುದರ ಬಗ್ಗೆ ಈವರೆಗೆ ಏನೂ ಮಾಹಿತಿ ಲಭ್ಯವಾಗಿಲ್ಲ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!