spot_img
Sunday, February 15, 2026
spot_img

ನಾಳೆ ಆರ್ಥಿಕ ಭಾಗ್ಯ ವಿಧಾತ ಡಾ. ಮನಮೋಹನ್‌ ಸಿಂಗ್‌ ಅಂತ್ಯಕ್ರಿಯೆ : ಕಾಂಗ್ರೆಸ್‌

ಜನಪ್ರತಿನಿಧಿ (ನವ ದೆಹಲಿ) : ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಮನಮೋಹನ ಸಿಂಗ್ (92) ಅವರು ನಿನ್ನೆ(ಗುರುವಾರ) ಅಸ್ತಂಗತರಾಗಿದ್ದು, ಅವರ ಅಂತ್ಯಕ್ರಿಯೆ ನಾಳೆ (ಶನಿವಾರ) ನಡೆಯಲಿದೆ ಎಂದು ಕಾಂಗ್ರೆಸ್ ತಿಳಿಸಿದೆ.

ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ ಅವರ ಅಂತಿಮ ಸಂಸ್ಕಾರ ನಾಳೆ ನಡೆಯಲಿದೆ. ಈ ಬಗ್ಗೆ ನಾವು ಇಂದು(ಶುಕ್ರವಾರ) ಅಧಿಕೃತವಾಗಿ ಘೋಷಿಸುತ್ತೇವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಗುರುವಾರ ತಡರಾತ್ರಿ ದೆಹಲಿಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಗೌರವಾರ್ಥ, ಮುಂದಿನ ಏಳು ದಿನಗಳಲ್ಲಿ ನಿಗದಿಯಾಗಿದ್ದ ಸ್ಥಾಪನಾ ದಿನ ಸೇರಿ ಎಲ್ಲ ಅಧಿಕೃತ ಕಾರ್ಯಕ್ರಮಗಳನ್ನು ರದ್ದು ಮಾಡುವುದಾಗಿ ಕಾಂಗ್ರೆಸ್‌ ತಿಳಿಸಿದೆ.

ಅಂತಿಮ ದರ್ಶನ ಪಡೆದ ಕಾಂಗ್ರೆಸ್ ನಾಯಕರು

ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರವನ್ನು ಏಮ್ಸ್‌ನಿಂದ ಗುರುವಾರ ತಡರಾತ್ರಿ ಮೋತಿಲಾಲ್ ನೆಹರು ಮಾರ್ಗದಲ್ಲಿರುವ ಅವರ ನಿವಾಸಕ್ಕೆ ತರಲಾಗಿದ್ದು, ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿದೆ. ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್‌ನ ಹಿರಿಯ ನಾಯಕರು ಅಂತಿಮ ದರ್ಶನ ಪಡೆದಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!