spot_img
Sunday, February 15, 2026
spot_img

ತಮಗೆ ತಾವೇ ಚಾಟಿಯೇಟು ಬಾರಿಸಿಕೊಂಡು ಹೊಸ ಶೈಲಿಯಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಇಳಿದ ಅಣ್ಣಾಮಲೈ !

ಜನಪ್ರತಿನಿಧಿ (ಚೆನ್ನೈ) : ಅಣ್ಣಾ ವಿವಿಯಲ್ಲಿ ನಡೆದ ಅತ್ಯಾಚಾರ ಪ್ರಕರಣವನ್ನು ತಮಿಳುನಾಡು ರಾಜ್ಯ ಸರ್ಕಾರ ಅಸಮರ್ಥವಾಗಿ ನಿಭಾಯಿಸಿದೆ ಎಂದು ಆರೋಪಿಸಿ ತಮಿಳುನಾಡು ರಾಜ್ಯ ಮುಖ್ಯಸ್ಥ ಕೆ. ಅಣ್ಣಾಮಲೈ ತಮಗೆ ತಾವೇ ಚಾಟಿಯೇಟು ಬಾರಿಸಿಕೊಳ್ಳುವುದರ ಮೂಲಕ ಹೊಸ ಶೈಲಿಯಲ್ಲಿ ಪ್ರತಿಭಟಿಸಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಭಟಿಸಿದರೆ, ಕಾರ್ಯಕರ್ತರನ್ನು ಪೊಲೀಸರು ಕರೆದುಕೊಂಡು ಹೋಗಿ ಕಲ್ಯಾಣ ಮಂಟಪಗಳಲ್ಲಿ ಇರಿಸುತ್ತಾರೆ. ಆದ್ದರಿಂದ ತಮ್ಮ ಮನೆಯಲ್ಲೇ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದರು.

ಅಣ್ಣಾ ವಿಶ್ವ ವಿದ್ಯಾನಿಲಯದಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಅಣ್ಣಾಮಲೈ ಮತ್ತು ಡಿಎಂಕೆ ಸರ್ಕಾರದ ನಡುವೆ ಸಂಘರ್ಷ ಜೋರಾಗಿದ್ದು. ಈ ಪ್ರಕರಣದಲ್ಲಿ ಸಂತ್ರಸ್ತೆಯ ವೈಯಕ್ತಿಕ ಮಾಹಿತಿಯನ್ನು ಸೋರಿಕೆ ಮಾಡಲಾಗಿದೆ ಎಂದು ಅಣ್ಣಾಮಲೈ ಆರೋಪಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿ ಗುರುವಾರ ತಮಿಳುನಾಡಿನಲ್ಲಿ ಮಾತನಾಡಿದ ಅಣ್ಣಾಮಲೈ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ “ನಾನು ಈ (ಡಿಎಂಕೆ) ಸರಕಾರವನ್ನು ಕೆಳಗಿಳಿಸುವವರೆಗೂ ಚಪ್ಪಲಿ ಧರಿಸುವುದಿಲ್ಲ. ಶುಕ್ರವಾರ(ಡಿ.27) ನನ್ನ ಮನೆ ಮುಂದೆ ನಿಂತು 6 ಬಾರಿ ನನಗೆ ನಾನೇ ಚಾಟಿಯಿಂದ ಬಾರಿಸಿಕೊಳ್ಳುತ್ತೇನೆ ಎಂದಿದ್ದರು ಅದರಂತೆ ಇಂದು ಬೆಳಿಗ್ಗೆ ತನ್ನ ಮನೆಯ ಮುಂದೆ ಹಸಿರು ಮುಂಡು ಧರಿಸಿ ಆರು ಬಾರಿ ಚಾಟಿಯಿಂದ ಬಾರಿಸಿಕೊಂಡಿದ್ದಾರೆ. ಅಷ್ಟು ಮಾತ್ರವಲ್ಲದೆ ಮುಂದಿನ 48 ದಿನಗಳು ಉಪವಾಸ ಕೈಗೊಂಡು, ರಾಜ್ಯದಲ್ಲಿರುವ ಮುರುಗನ್‌ನ 6 ಪವಿತ್ರ ಕ್ಷೇತ್ರಗಳಿಗೆ ಭೇಟಿ ನೀಡುತ್ತೇನೆ’ ಎಂದು ಹೇಳಿದ್ದಾರೆ.

https://x.com/TheSouthfirst/status/1872509562865258549

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!