spot_img
Wednesday, April 1, 2026
spot_img

ಜನವರಿ ಅಂತ್ಯದೊಳಗೆ ಅಕ್ರಮ ಸಕ್ರಮ ಹಾಗೂ 94ಸಿ ಕಡತ ವಿಲೇವಾರಿಗೆ ಗುರುರಾಜ್ ಗಂಟಿಹೊಳೆ ಸೂಚನೆ

ಬೈಂದೂರು: ಬೈಂದೂರು ತಾಲೂಕು ಕಚೇರಿಯಲ್ಲಿ ದಿನಾಂಕ 26-12-2024 ರಂದು ತಹಸೀಲ್ದಾರ್ ಹಾಗೂ ಬೈಂದೂರು ಹೋಬಳಿಯ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳೊಂದಿಗೆ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆಯವರು ಸಭೆ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಶಾಸಕರು, ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಸರಕಾರಿ ಜಮೀನಿನಲ್ಲಿ ಸಾಗುವಳಿ ಮಾಡಿಕೊಂಡು ಪ್ರಸ್ತುತ ಸಾಗುವಳಿ ಸಕ್ರಮೀಕರಣಕ್ಕೆ ಅರ್ಜಿ ಹಾಕಿದ ರೈತರು ಹಾಗೂ ಸರಕಾರಿ ಜಾಗದಲ್ಲಿ ವಾಸ್ತವ್ಯದ ಉದ್ದೇಶಕ್ಕಾಗಿ ಮನೆ ಕಟ್ಟಿಕೊಂಡ ಬಡವರ ಹಲವಾರು ವರ್ಷಗಳಿಂದ ಹಕ್ಕು ಪತ್ರಕ್ಕಾಗಿ ಅರ್ಜಿ ಸಲ್ಲಿಸಿ ಈವರೆಗೂ ಹಕ್ಕು ಪತ್ರ ದೊರಕದೇ ಇರುವ ಸಮಸ್ಯೇತರ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥ ಪಡಿಸಲು ಜನವರಿ 2 ನೇ ವಾರದಲ್ಲಿ ಕಡತ ವಿಲೇವಾರಿ ಸಪ್ತಾಹ ಆಯೋಜಿಸಲು ಸೂಚನೆ ನೀಡಿದರು.

ಬಾಕಿ ಇರುವ ಶೂನ್ಯ ಸಮಸ್ಯಾತ್ಮಕ  ಎಲ್ಲಾ ಅರ್ಹ ಕಡತಗಳನ್ನು ವಿಲೇವಾರಿ ಮಾಡಿ ಹಕ್ಕುಪತ್ರ ಒದಗಿಸಲು ಕ್ರಮ ವಹಿಸಲು ಹಾಗೂ ಜನವರಿ ತಿಂಗಳ ಅಂತ್ಯದೊಳಗೆ ಎಲ್ಲಾ ಸಮಸ್ಯೇತರ ಕಡತಗಳನ್ನು ವಿಲೇವಾರಿ ಮಾಡಿ ರೈತರಿಗೆ ಹಕ್ಕು ಪತ್ರ ಒದಗಿಸಲು ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ್ದಲ್ಲದೆ, ಜನವರಿ ಅಂತ್ಯಕ್ಕೆ ಸಮಸ್ಯಾತ್ಮಕವಲ್ಲದ  ಯಾವುದೇ ಕಡತಗಳು ಬಾಕಿ ಉಳಿಯದಂತೆ ಕಂದಾಯ ಇಲಾಖೆಯ ಎಲ್ಲಾ ಸ್ತರದ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕೆಂದು ಸ್ಪಷ್ಟವಾಗಿ ಮೌಖಿಕ ಆದೇಶ ನೀಡಿದ್ದಾರೆ.

ಸಭೆಯಲ್ಲಿ ಉಪ ತಹಸೀಲ್ದಾರ್, ಕಂದಾಯ ನಿರೀಕ್ಷಕರು, ವಿಷಯ ನಿರ್ವಾಹಕರು ಹಾಗೂ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!