spot_img
Sunday, May 17, 2026
spot_img

ಲೈಂಗಿಕ ಕಿರುಕುಳದ ಆರೋಪದ ಮೇಲೆ ಕಿರುತೆರೆ ನಟ ಚರಿತ್‌ ಬಾಳಪ್ಪ ಬಂಧನ !

ಜನಪ್ರತಿನಿಧಿ (ಬೆಂಗಳೂರು) : ಲೈಂಗಿಕ ಕಿರುಕುಳ ಆರೋಪದ ಮೇಲೆ ಕಿರುತೆರೆ ನಟ ಚರಿತ್ ಬಾಳಪ್ಪ ಅವರನ್ನು ಆರ್​ಆರ್ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕನ್ನಡದಲ್ಲಿ ‘ಮುದ್ದುಲಕ್ಷ್ಮಿ‌’ ಸೇರಿದಂತೆ ಕೆಲವು ಧಾರಾವಾಹಿಗಳಲ್ಲಿ, ತೆಲುಗಿನಲ್ಲೂ ಅನೇಕ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಗೆಳತಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಚರಿತ್ ಬಾಳಪ್ಪ ಮೇಲಿದೆ.

ಪ್ರೀತಿಸುವ ನೆಪದಲ್ಲಿ ದೈಹಿಕ ಸಂಪರ್ಕಕ್ಕೆ ಒತ್ತಾಯಿಸಿದ್ದಾರೆ ಎಂದು ಯುವತಿಯೊಬ್ಬರು ಅವರ ಮೇಲೆ ಆರೋಪ ಮಾಡಿದ್ದಾರೆ. ಯುವತಿ ವಾಸ ಮಾಡುತ್ತಿದ್ದ ಮನೆಗೆ ಸಹಚರರ ಜೊತೆ ನುಗ್ಗಿದ ಚರಿತ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಹೇಳಲಾಗಿದೆ. ಮಾತ್ರವಲ್ಲದೆ ಯುವತಿ ಬಳಿ ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪ ಕೂಡ ಅವರ ಮೇಲಿದೆ. ಹಣ ಕೊಡದಿದ್ದರೆ ಆಕೆಯ ಖಾಸಗಿ ಫೋಟೋ, ವಿಡಿಯೋ ಹರಿಬಿಡುವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಚರಿತ್ ವಿರುದ್ಧ ಲೈಂಗಿಕ ದೌರ್ಜನ್ಯ, ಹಲ್ಲೆ, ಕೊಲೆ ಬೆದರಿಕೆ ಆರೋಪದ ಮೇಲೆ ಬಂಧಿಸಲಾಗಿದೆ. ಚರಿತ್ ಗೆ ಈಗಾಗಲೇ ಮದುವೆಯಾಗಿ ವಿಚ್ಛೇದನ ಕೂಡ ಆಗಿದೆ. ಡಿವೋರ್ಸ್​ ನಂತರವೂ ಮಾಜಿ ಪತ್ನಿ ಜೊತೆ ಕಿರಿಕ್ ಮಾಡಿಕೊಂಡ ಆರೋಪದ ಮೇಲೆ ಕಳೆದ ಜೂನ್ ತಿಂಗಳಲ್ಲಿ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ‌ ದೂರು ದಾಖಲಾಗಿತ್ತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!